ಪಿಕೆಪಿಎಸ್ ಬೆಳೆಯಲು ರೈತರೇ ಆಧಾರ ಸ್ತಂಭ: ಚಿಕ್ಕೊಂಡ
Team Udayavani, Sep 24, 2022, 7:50 PM IST
ಬಸವನಬಾಗೇವಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಹೆಮ್ಮರವಾಗಿ ಬೆಳೆಯಬೇಕಾದರೆ ಅದಕ್ಕೆ ಆಧಾರ ಸ್ತಂಭವೇ ಅನ್ನದಾತರು ಎಂದು ಪಿಕೆಪಿಎಸ್ ಬ್ಯಾಂಕಿನ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ ಹೇಳಿದರು.
ಶುಕ್ರವಾರ ಪಟ್ಟಣದಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 78ನೇ ವಾರ್ಷಿಕ ಮಹಾಸಭಾ ಹಾಗೂ ಸಂಘದಿಂದ ಬೀಜ ಹಾಗೂ ರಸಗೊಬ್ಬರ ಗೋದಾವನ ನಿರ್ಮಾಣ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ರೈತರು ತಮ್ಮ ಸಾಲವನ್ನು ಸಕಾಲದಲ್ಲಿ ಮರು ಪಾವತಿ ಮಾಡಿರುವುದರಿಂದ ಸಹಕಾರಿ ಸಂಘಗಳು ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗಿದೆ. ರೈತರ ಅನುಕೂಲಕ್ಕಾಗಿ ನಮ್ಮ ಸಂಘದಿಂದ ಕಡಿಮೆ ದರದಲ್ಲಿ ಬೀಜ ಹಾಗೂ ರಸಗೊಬ್ಬರ ನೀಡುತ್ತಿದ್ದು. ಗೋದಾವನ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.
ಈಗಾಗಲೇ ನಮ್ಮ ಸಂಘದಿಂದ ರೈತರಿಗೆ ಅಗತ್ಯ ಇರುವ ಬೀಜ ಹಾಗೂ ರಸಗೊಬ್ಬರ, ದ್ರಾಕ್ಷಿ ಇನ್ನಿತರ ಔಷಧೋಪಚಾರವನ್ನು ಕಡಿಮೆ ದರದಲ್ಲಿ ನೀಡುತ್ತಿದ್ದು. ನಮ್ಮ ಸ್ವಂತ ಜಾಗೆಯಲ್ಲಿ ಇಂದು ಬೀಜ ಹಾಗೂ ರಸಗೊಬ್ಬರ ಗೋದಾವನ ನಿರ್ಮಿಸಲಾಗುವುದು. ಎಂದು ಹೇಳಿದರು.
ರೈತರು ಇದರ ಸದುಪಯೋಗವನ್ನು ಪಡೆಯಬೇಕು. ರೈತರಿಗೆ ಶೇ. 3ರ ಬಡ್ಡಿದರದಲ್ಲಿ ಕೃಷಿ ಸಾಲ ಕುರಿಸಾಗಾಣಿಕೆ, ಹೈನುಗಾರಿಕೆ, ಪೈಪ್‌ಲೈನ್, ಕಿಸಾನ್ ಸೇರಿದಂತೆ ಅನೇಕ ಕೃಷಿ ಚಟುವಟಿಕೆಗೆ ಅಗತ್ಯ ಇರುವ ಸಾಲ ಸೌಲಭ್ಯವನ್ನು ನೀಡಲಾಗುತ್ತಿದ್ದು. ಇದರ ಸೌಲಭ್ಯವನ್ನು ಪ್ರತಿಯೊಬ್ಬ ರೈತರು ಪಡೆದುಕೊಳ್ಳಬೇಕೆಂದು ಹೇಳಿದರು.
ಬ್ಯಾಂಕಿನ ವ್ಯವಸ್ಥಾಪಕ ಪ್ರವೀಣ ಚಿಕ್ಕೊಂಡ ಮಾತನಾಡಿ, ನಮ್ಮ ಬ್ಯಾಂಕಿನ ದುಡಿಯುವ ಬಂಡವಾಳ 52.93 ಕೋಟಿ ರೂ. ಹೊಂದಿದ್ದು ರೈತರ ಸಹಕಾರದಿಂದ ಮತ್ತು ಸಕಾಲದಲ್ಲಿ ಸಾಲವನ್ನು ಮರುಪಾವತಿ ಮಾಡಿದ ಹಿನ್ನೆಲೆಯಿಂದ ಈ ವರ್ಷ 70 ಲಕ್ಷ ನಿವ್ವಳ ಲಾಭ ಹೊಂದಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಟ್ಟಣದ ವಿರಕ್ತಮಠದ ಸಿದ್ದಲಿಂಗ ಶ್ರೀಗಳು, ಉಪಾಧ್ಯಕ್ಷ ಮಲ್ಲೇಶಿ ಕಡಕೊಳ, ನಿರ್ದೇಶಕರಾದ ನಿಂಗಪ್ಪ ಅವಟಿ, ಮಹಾಂತೇಶ ಹಾರಿವಾಳ, ಮುದುಕಪ್ಪ ಅಸ್ಕಿ, ನಿಂಗಪ್ಪ ಕೂಲಗೇರಿ, ಶ್ರೀಶೈಲ ಪರಮಗೊಂಡ, ಈರಣ್ಣ ವಂದಾಲ, ಸುರೇಶ ನಾಯಕ, ಗಂಗುಬಾಯಿ ಕಡ್ಲಿಮಟ್ಟಿ, ಮಹಾದೇವಿ ಮೈಲೇಶ್ವರ, ಸಂಗಪ್ಪ ಅಡಿಗಿಮನಿ ಸೇರಿದಂತೆ ಅನೇಕರು ಇದ್ದರು. ಇದೇ ಸಂದರ್ಭದಲ್ಲಿ ಪ್ರಗತಿ ಪರ ರೈತರಿಗೆ ಸಮಾಜ ಸೇವಕರಿಗೆ ಸನ್ಮಾನಿಸಲಾಯಿತು. ಈ ವರ್ಷದ ಎಸ್ ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.