ಬೇಡಿಕೆ ಈಡೇರಿಕೆಗೆ ರೈತರ ಒತ್ತಾಯ
Team Udayavani, Nov 21, 2021, 5:03 PM IST
ಸಿಂದಗಿ: ಕಬ್ಬಿನ ಬೆಲೆ ನಿಗದಿಗೊಳಿಸಲು ಸಕ್ಕರೆ ಕಾರ್ಖಾನೆಗಳ ಮಾಲಿಕರು, ಜಿಲ್ಲಾಡಳಿತ, ಸಕ್ಕರೆ ಮಂತ್ರಾಲಯ ಸಭೆ ಕರೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕ ಹಾಗೂ ಸಿಂದಗಿ ಘಟಕದ ಪದಾ ಧಿಕಾರಿಗಳು ತಹಶೀಲ್ದಾರ್ ಸಂಜೀವಕುಮಾರ ದಾಸರಗೆ ಮನವಿ ಸಲ್ಲಿಸಿದರು.
ಪ್ರತಿ ಟನ್ ಕಬ್ಬಿಗೆ 3 ಸಾವಿರ ರೂ. ನಿಗದಿಗೊಳಿಸಬೇಕು. ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಅಲ್ಲಿನ ರೈತರಿಗೆ ಪ್ರತಿ ಟನ್‌ಗೆ 2800 ರೂ. ಕಟಾವು ಹೊರತು ಪಡಿಸಿ 2800 ರೂ. ನೀಡಿದ್ದಾರೆ. ಆದರೆ ವಿಜಯಪುರ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು 2300 ರೂ. ಕೊಟ್ಟು ಕೈ ತೊಳೆದುಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ 10 ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್‌ಗೆ 500 ರೂ. ರೈತರ ಖಾತೆಗೆ ಕೊಡಲು ಕೂಡಲೇ ಸರಕಾರ ಒತ್ತಾಯಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.
ಜಿಲ್ಲೆಯಲ್ಲಿ ಸರಿಯಾಗಿ ಮಳೆಯಾಗದ ಕಾರಣ ಕಬ್ಬು, ತೊಗರಿಗೆ ಗೊನ್ನಿ ಹುಳುಗಳು ಹತ್ತಿ, ಕಬ್ಬು, ತೊಗರಿ, ಸೂರ್ಯಕಾಂತಿ, ಹೆಸರು ಹಾಳಾಗಿ ರೈತರು ಬಹಳ ತೊಂದರೆಗಿಡಾಗಿದ್ದಾರೆ. ಕೂಡಲೇ ಸರಕಾರ ಸಮೀಕ್ಷೆ ಮಾಡಿ ರೈತರಿಗೆ ಪರಿಹಾರ ನೀಡಬೇಕು. ಪ್ರತಿ ಎಕರೆಗೆ 8 ಸಾವಿರದಿಂದ 10 ಸಾವಿರ ರೂ. ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ರಂಜುಣಗಿ, ತಾಲೂಕಾಧ್ಯಕ್ಷ ಶಿವಶರಣಪ್ಪಗೌಡ ಬಿರಾದಾರ, ಉಪಾಧ್ಯಕ್ಷ ಚನ್ನಪಗೌಡ ಪಾಟೀಲ, ಕಾರ್ಯದರ್ಶಿ ಅಶೋಕ ಅಲ್ಲಾಪುರ, ಬಾಬು ಕೂಡಿ, ಅಮೋಘಿ ಹರವಾಳ, ಲಕ್ಷ್ಮಣ ಹೂಗಾರ, ಹನುಮಂತ ಗೊಬ್ಬೂರ, ಕುಲ್ಲಣ್ಣ ಹರವಾಳ, ರವಿ ಹಿರೇಕುರುಬರ, ಸಿದ್ದು ಉಪ್ಪಾರ, ಭಾಸ್ಕರ ಪೂಜಾರಿ, ಗೊಲ್ಲಾಳಪ್ಪ ಚೌಧರಿ ಸೇರಿದಂತೆ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.