ತೊಗರಿ ಬೀಜಕ್ಕಾಗಿ ಅನ್ನದಾತರ ದಿಢೀರ್ ಪ್ರತಿಭಟನೆ

Team Udayavani, Jun 16, 2020, 1:51 PM IST

vp-tdy-3

ದೇವರಹಿಪ್ಪರಗಿ: ದೇವರಹಿಪ್ಪರಗಿ ರೈತ ಸಂಪರ್ಕದಲ್ಲಿ ಕೇಂದ್ರದಲ್ಲಿ ತೊಗರಿ ಬೀಜದ ಕೊರತೆ ಹಿನ್ನೆಲೆ ರೈತರು ಸೋಮವಾರ ಕೃಷಿ ಅಧಿಕಾರಿಗಳ ವಿರುದ್ಧ ದಿಢೀರ್‌ ಪ್ರತಿಭಟನೆ ನಡೆಸಿದರು.

ಈ ವೇಳೆ ಭಾರತೀಯ ಕಿಸಾನ್‌ ಸಂಘದ ತಾಲೂಕಾಧ್ಯಕ್ಷ ಬಸವರಾಜ ಕಲ್ಲೂರ ಮಾತನಾಡಿ, ಕಳೆದ ಎರಡು ದಿನದಿಂದ ತೊಗರಿ ಬೀಜ ಪಡೆಯಲು ಸರದಿಯಲ್ಲಿ ನಿಂತು ಚೀಟಿ ಪಡೆದಿದ್ದೇವೆ. ಇಂದು ನಸುಕಿನ ಜಾವದಿಂದ ತೊಗರಿ ಬೀಜ ಪಡೆಯಲು ಚೀಟಿ ತೆಗೆದುಕೊಂಡು ಬಂದ ಕೆಲವು ರೈತರಿಗೆ ಮಧ್ಯಾಹ್ನದವರೆಗೆ ಮಾತ್ರ ತೊಗರಿ ಬೀಜ ಕೊಟ್ಟಿದ್ದಾರೆ. ಇನ್ನುಳಿದ ಸರದಿಯಲ್ಲಿ ನಿಂತ ಬಹುತೇಕ ರೈತರಿಗೆ ಬೀಜ ಖಾಲಿ ಆಗಿವೆ. ಬೀಜ ಬಂದ ತಕ್ಷಣ ಕೊಡುತ್ತೆವೆ ಎಂಬ ಉಡಾಫೆ ಉತ್ತರ ಕೊಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ರೈತರಿಗೆ ಬೇಕಾದಷ್ಟು ಬೀಜ ಪೂರೈಕೆ ಮಾಡದೆ ಅಧಿಕಾರಿಗಳು ತೊಗರಿ ಬೀಜ ಪ್ರಭಾವಿ ವ್ಯಕ್ತಿಗಳಿಗೆ ಮಾತ್ರ ಕೊಡುತ್ತಿದ್ದಾರೆ. ಸಾಮಾನ್ಯ ಬಡ ರೈತರಿಗೆ ಸಮರ್ಪಕವಾದ ಬೀಜ ಕೊಡುತ್ತಿಲ್ಲ. ತಾಲೂಕಿನಲ್ಲಿ ಎಲ್ಲ ರೈತರಿಗೆ ಸರಿಯಾದ ಸಮಯಕ್ಕೆ ಬೀಜ ಪೂರೈಕೆ ಮಾಡದೆ ಅಧಿ ಕಾರಿಗಳು ನಿಷ್ಕಾಳಜಿ ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಈ ವೇಳೆ ಅಧಿಕಾರಿಗಳ ವಿರುದ್ಧ ರೈತರು ಧಿಕ್ಕಾರ ಕೂಗಿದರು. ಪ್ರತಿಭಟನಾ ಸ್ಥಳಕ್ಕೆ ಪಿಎಸೈ ಸುರೇಶ ಗಡ್ಡಿ ಆಗಮಿಸಿ ಬೀಜ ಬಂದ ನಂತರ ಪ್ರತಿಯೊಬ್ಬ ರೈತರಿಗೆ ಬೀಜ ದೊರಕಿಸುವ ಕೆಲಸ ನಾನೇ ಮುಂದು ನಿಂತು ಮಾಡುತ್ತೇನೆ. ಈಗ ಉಳಿದ ಬೀಜಗಳು ತೆಗೆಕೊಂಡು ಹೋಗಿ ಎಂದು ರೈತರ ಮನವೋಲಿಸಿದರು. ಈ ಸಂದರ್ಭದಲ್ಲಿ ರೈತ ಸಂಘದ ಅಧ್ಯಕ್ಷ ಅಜೀಜ್‌ ಎಲಗಾರ, ರೈತರಾದ ಪ್ರಭು ಕಬಾಡಗಿ, ಜವಾಹಾರ ದೇಶಪಾಂಡೆ, ಶ್ರೀಶೈಲ್‌ ಹದರಿ, ಶರಣಪ್ಪ ತಳವಾರ, ಸಿದ್ದು ಬಿರಾದಾರ, ಬಸವರಾಜ ಮನಗೂಳಿ, ಶರಣಗೌಡ ಸುರಗಳ್ಳಿ, ಶ್ರೀಶೈಲ ಮಠಪತಿ, ಮಲ್ಲು ಬಿರಾದಾರ ಸೇರಿದಂತೆ ನೂರಾರು ರೈತರು ಇದ್ದರು.

ದೇವರಹಿಪ್ಪರಗಿ ತಾಲೂಕಿನ ರೈತರಿಗೆ ಕೊರತೆ ಆಗಬಾರದು ಎಂಬ ಉದ್ದೇಶದಿಂದ 940 ಕ್ವಿಂಟಲ್‌ ಬಿತ್ತನೆ ಬೀಜಕ್ಕೆ ಮೇಲಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಅದರಲ್ಲಿ 250 ಕ್ವಿಂಟಲ್‌ ಮಾತ್ರ ಬಂದಿದ್ದು ರೈತರಿಗೆ ವಿತರಿಸಲಾಗಿದೆ. ಮಂಗಳವಾರ ಬೆಳಗ್ಗೆ 60 ಕ್ವಿಂಟಲ್‌ ತೊಗರಿ ಬೀಜ ಬರಲಿದ್ದು ಅದನ್ನೂ ವಿತರಿಸುತ್ತೇವೆ. ತಾಲೂಕಿನ ಯಾವ ರೈತರಿಗೂ ಬೀಜದ ಕೊರತೆಯಾಗದಂತೆ ನೊಡಿಕೊಳ್ಳುತ್ತೇವೆ. -ಸೋಮನಗೌಡ ಬಿರಾದಾರ, ಕೃಷಿ ಅಧಿಕಾರಿ, ದೇವರಹಿಪ್ಪರಗಿ

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.