ಶಸ್ತ್ರ ಚಿಕಿತ್ಸೆಗೆ ಆರ್ಥಿಕ ನೆರವು
Team Udayavani, Oct 23, 2017, 12:01 PM IST
ತಾಳಿಕೋಟೆ: ಬಡವರ, ದೀನ ದಲಿತರ, ಅಲ್ಪಸಂಖ್ಯಾತರ ಮತ್ತು ನೊಂದವರ ಕಣ್ಣೀರು ಒರಿಸುವ ಕಾರ್ಯವನ್ನು ಶಾಸಕ ಎ.ಎಸ್. ಪಾಟೀಲ ಮಾಡುತ್ತಿದ್ದಾರೆ ಎಂದು ಜಿಪಂ ಸದಸ್ಯ ಬಸನಗೌಡ ವಣಕ್ಯಾಳ ಹೇಳಿದರು. ರವಿವಾರ ಪಟ್ಟಣದ ಸಗರಪೇಟ ಬಡಾವಣೆಯಲ್ಲಿ ಎ.ಎಸ್. ಪಾಟೀಲ ನಡಹಳ್ಳಿ ಗೆಳೆಯರ ವತಿಯಿಂದ ದೀಪಾ ಧಡೇದ ಎಂಬ ಬಡ ಮಹಿಳೆ ಶಸ್ತ್ರ ಚಿಕಿತ್ಸೆಗೆ 20 ಸಾವಿರ ರೂ. ನೀಡಿ ಮಾತನಾಡಿದ ಅವರು, ದಡೇಡ ಕುಟುಂಬದ ಮಹಿಳೆಗೆ ಶಸ್ತ್ರ ಚಿಕಿತ್ಸೆ ಜೊತೆಗೆ ವೈದ್ಯಕೀಯ ಸೌಲಭ್ಯ ಉಚಿತವಾಗಿ ಒದಗಿಸಿದ್ದಾರೆ ಎಂದರು.
ಜಿಲ್ಲೆಯ ವಿವಿಧಡೆ ಸಾಮೂಹಿಕ ವಿವಾಹ ಮೂಲಕ ಸಾವಿರಾರು ಮಹಿಳೆಯರಿಗೆ ಕಂಕಣಭಾಗ್ಯ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ಮತ್ತು ಬೂದಿಹಾಳ-ಫಿರಾಪುರ ನೀರಾವರಿ ಯೋಜನೆ ಅನುಷ್ಠಾನಕ್ಕಾಗಿ ನಡಹಳ್ಳಿ ಅವರು ಹೋರಾಟಗಳನ್ನು ಮಾಡಿ ಯಶಸ್ಸು ಕಂಡಿದ್ದಾರೆಂದರು. ಸತೀಶ ಸರಶೆಟ್ಟಿ ಮಾತನಾಡಿ, ಮಹಿಳೆ ದೀಪಾ ಧಡೇದ ಅವರು ಶಸ್ತ್ರಚಿಕಿತ್ಸೆ ಯಶಸ್ವಿಯಾಗಲಿ. ಮುಂದಿನ ದಿನಗಳಲ್ಲಿ ತಮ್ಮ ಕುಟುಂಬವನ್ನು ಈ ಮಹಿಳೆ ಸಮರ್ಥವಾಗಿ ನಿಭಾಯಿಸಿ ಸಮಾಜದ ಕೀರ್ತಿ ಹೆಚ್ಚಿಸಲಿ ಎಂದು ಹಾರೈಸಿದರು.
ವಾಸುದೇವ ಹೆಬಸೂರ, ಅರುಣ ದಢೇದ, ರಾಮನಗೌಡ ಬಾಗೇವಾಡಿ, ಅಮರಣ್ಣ ಗೋನಾಳ, ವಿರೇಶ ಬಾಗೇವಾಡಿ, ಅಶೋಕ ಚಿನಗುಡಿ, ಬಸವರಾಜ ಹೊಟ್ಟಿ, ಮಲ್ಲು ಭಟ್ಟ, ಬಾಬು ಕಾರಜೋಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Australia vs Pakistan T20: ಪಾಕ್ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.