ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಬೆಂಕಿ ಪೊಟ್ಟಣ ಸಾಗಿಸುತ್ತಿದ್ದ ಲಾರಿ
Team Udayavani, Feb 22, 2020, 9:08 AM IST
ವಿಜಯಪುರ: ತಮಿಳುನಾಡಿನಿಂದ ಮಹಾರಾಷ್ಟ್ರದ ಸೋಲಾಪುರಕ್ಕೆ ಬೆಂಕಿ ಪೊಟ್ಟಣ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾದ ಘಟನೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ವಿಜಯಪುರ ತಾಲೂಕಿನ ಅರಕೇರಿ ತಾಂಡಾ ಬಳಿ ಶನಿವಾರ ಬೆಳಗಿನ ಜಾವ TN28-AR0993 ನೋಂದಣಿಯ ಲಾರಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದ ಘಟನೆ ಜರುಗಿದೆ.
ತಮ್ಮ ಲಾರಿಗೆ ಬೆಂಕಿ ಹೊತ್ತಿಕೊಂಡುದನ್ನು ಕಂಡ ಚಾಲಕ ಹಾಗೂ ಕ್ಲೀನರ್ ಇಬ್ಬರೂ ಲಾರಿಯಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.
ಕ್ಷಣಾರ್ಧದಲ್ಲಿ ಇಡೀ ಲಾರಿ ಸುಟ್ಟು ಹೋಗಿದೆ. ಈ ಅಗ್ನಿದುರಂತದಲ್ಲಿ ಬೆಂಕಿಯ ಕೆನ್ನಾಲಿಗೆ ಆಗಸದೆತ್ತರಕ್ಕೆ ಚಿಮ್ಮಿದ್ದು, ಸುಮಾರು ಒಂದು ಗಂಟೆಗೂ ಹೆಚ್ಚುಕಾಲ ಲಾರಿ ಹೊತ್ತಿ ಉರಿದ ಕಾರಣ ವಿಜಯಪುರ-ಸೋಲಾಪುರ ಮಧ್ಯದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಸ್ಥಗಿತಗೊಂಡಿತ್ತು. ಪರಿಣಾಮ ಇಕ್ಕೆಲಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.
ಅಗ್ನಿ ಅವಘಡ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿದ ವಿಜಯಪುರ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.