ಪಾಠ ಮಾಡೋದು ಬಿಟ್ಟು ಐವರು ಶಿಕ್ಷಕರು ಹೋಗಿದ್ದೆಲ್ಲಿಗೆ ಗೊತ್ತಾ?
Team Udayavani, Jun 20, 2017, 5:51 PM IST
ವಿಜಯಪುರ: ಇದು ಬೇಲಿಯೇ ಎದ್ದು ಹೊಲ ಮೇಯ್ದ ಕಥೆ. ವಿದ್ಯಾರ್ಥಿಗಳಿಗೆ ಪಾಠ ಮಾಡೋದನ್ನು ಬಿಟ್ಟು ಐದು ಮಂದಿ ಶಿಕ್ಷಕರು ಏಕಾಏಕಿ ಕನ್ನಡದ ರಾಮಾ ರಾಮಾ ರೇ ಚಿತ್ರದ ತೆಲುಗು ಅವತರಣಿಕೆ ಶೂಟಿಂಗ್ ನೋಡಲು ಹೋದ ಘಟನೆ ಇಂಡಿ ತಾಲೂಕಿನ ಕೊಟ್ನಾಳ ಗ್ರಾಮದಲ್ಲಿ ನಡೆದಿದೆ.
ಕೊಟ್ನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಟ್ಟು ಆರು ಮಂದಿ ಶಿಕ್ಷಕರಿದ್ದರು. ಅದರಲ್ಲಿ ಒಬ್ಬರು ಶಿಕ್ಷಕಿ. ಏತನ್ಮಧ್ಯೆ ಶೂಟಿಂಗ್ ನಡೆಯುತ್ತಿದೆ ಎಂಬ ವಿಚಾರ ಕೇಳಿದ್ದೆ ತಡ ಪಾಠ ಮಾಡೋದನ್ನು ಬಿಟ್ಟು ಶೂಟಿಂಗ್ ನೋಡಲು ಹೋಗಿದ್ದರು. ಅದು ಐದು ಮಂದಿ ಶಿಕ್ಷಕರು! ಒಬ್ಬರು ಶಿಕ್ಷಕಿ ಮಾತ್ರ ಶಾಲೆಯಲ್ಲಿದ್ದರು. ಮಕ್ಕಳು ಶಿಕ್ಷಕರಿಗಾಗಿ ಕಾದು, ಕಾದು ಸುಸ್ತಾಗಿದ್ದರು. ವಿಷಯ ತಿಳಿದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಆದರೆ ಸ್ಥಳಕ್ಕೆ ಶಿಕ್ಷಣ ಇಲಾಖೆಯ ಯಾವುದೇ ಅಧಿಕಾರಿಗಳು ಬಂದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.