ಮುಳುಗಿದ ಸೇತುವೆ ಮೇಲೆ ಬಸ್ ಸಂಚಾರ: ಸ್ಥಳೀಯರಿಂದ ತರಾಟೆ

Team Udayavani, Aug 6, 2022, 1:12 PM IST

ಮುಳುಗಿದ ಸೇತುವೆ ಮೇಲೆ ಬಸ್ ಸಂಚಾರ: ಸ್ಥಳೀಯರಿಂದ ತರಾಟೆ

ವಿಜಯಪುರ: ಜಿಲ್ಲೆಯಲ್ಲಿ ಮಳೆ ತಗ್ಗಿದರೂ ಪ್ರವಾಹ ತಗ್ಗದ ಕಾರಣ ಉಕ್ಕಿ ಹರಿಯುತ್ತಿರುವ ಡೋಣಿ ನದಿ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಳಿಸಿದೆ.

ಡೋಣಿ ನದಿ ಪ್ರವಾಹದಿಂದಾಗಿ ತಿಕೋಟಾ, ಬಬಲೇಶ್ವರ, ಬಸವನಬಾಗೇವಾಡಿ, ದೇವರಹಿಪ್ಪರಗಿ ಹಾಗೂ ತಾಳಿಕೋಟೆ ತಾಲೂಕುಗಳಲ್ಲಿ ನದಿ ತೀರದ‌ ಜನರು ಕಂಗಾಲಾಗಿದ್ದಾರೆ

ಡೋಣಿ ನದಿ ತುಂಬಿ ಹರಿಯುತ್ತಿರುವುದರಿಂದ ಬಬಲೇಶ್ವರ ತಾಲೂಕಿನ ತೊನಶ್ಯಾಳ ಬಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಗ್ರಾಮದ ಸಂಪರ್ಕ ಕಡಿತವಾಗಿದೆ. ನೆಲಮಟ್ಟದಲ್ಲಿರುವ ಸೇತುವೆ ಜಲಾವೃತವಾಗಿದ್ದು, 4-5 ಅಡಿಯಷ್ಟು ನೀರು ‌ಸೇತುವೆ ಮೇಲೆ ಹರಿಯುತ್ತಿರುವ ಕಾರಣ ಜನರು ಜೀವ ಪಣಕ್ಕಿಟ್ಟು ಸಂಚಾರ ಮಾಡುವ ದುಸ್ಥಿತಿ ಎದುರಾಗಿದೆ. ಜನರು ತುರ್ತು ಕೆಲಸಕ್ಕಾಗಿ ನೀರಿನಲ್ಲೇ ಹೋಗಿ ಬರುತ್ತಿದ್ದಾರೆ. ಇನ್ನು ಅಪಾಯ ಲೆಕ್ಕಿಸದೇ ಜಲಾವೃತ ಸೇತುವೆ ಮೇಲೆ ಸಾರಿಗೆ ಸಂಸ್ಥೆ ಬಸ್ ಚಲಾಯಿಸಿ ಚಾಲಕನೊಬ್ಬ ಆತಂಕ ಸೃಷ್ಡಿಸಿರುವ ಘಟನೆಯೂ ಜರುಗಿದೆ.

ಡೋಣಿ ಪ್ರವಾಹದಲ್ಲಿ ಸೇತುವೆ ಮುಳುಗಡೆಯಾಗಿ ತುಂಬಿ ಹರಿಯುತ್ತಿದ್ದರೂ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಸಾತಿಹಾಳ ಗ್ರಾಮದ ಜಲಾವೃತ ಸೇತುವೆ ಮೇಲೆ ಹತ್ತಾರು ಪ್ರಯಾಣಿಕರಿದ್ದ ಬಸ್ ಚಲಾಯಿಸಿದ್ದಾನೆ. ಜಲಾವೃತವಾದ ಸೇತುವೆ ಮೇಲೆ ಚಾಲಕ ಬಸ್ ಚಲಾಯಿಸಿದ್ದಾನೆ. ಈ ವೇಳೆ ಪ್ರವಾಹದ ಸೆಳೆತಕ್ಕೆ ಬಸ್ ಕೊಚ್ಚಿಕೊಂಡು ಮಗುಚಿ ಬೀಳುವ ಅಪಾಯ ಎದುರಾಗಿದ್ದಾಗ, ಸೇತುವೆ ಬಳಿ ನಿಂತಿದ್ದ ಜನರು ಚಾಲಕನಿಗೆ ಕೈ ಮಾಡಿ ಅಪಾಯದ ಪರಿಸ್ಥಿಯನ್ನು ಮನವರಿಕೆ ಮಾಡಿದ್ದಾರೆ. ತನ್ನ ನಿರ್ಲಕ್ಷ್ಯದಿಂದ ಎಚ್ಚೆತ್ತ ಚಾಲಕ ಕೋಡಲೇ ಸೇತುವೆ ಗಡಿ ಬಿಟ್ಟು ವಾಲಿದ್ದ ಬಸ್ ಸರಿದಾರಿಗೆ ಚಲಾಯಿಸಿದ್ದಾನೆ. ಇದರಿಂದ ಭಯಗೊಂಡಿದ್ದ ಬಸ್ ಪ್ರಯಣಿಕರು ಚೀರಾಟ ಆರಂಭಿಸಿದ್ದಾರೆ.

ಇದನ್ನೂ ಓದಿ:ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ : ಕೊಣಾಜೆ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಸಾವು

ಪ್ರಯಾಣಿಕರ ಜೀವದ ಜೊತೆಗೆ ಚೆಲ್ಲಾಟವಾಡಿದ ಬಸ್ ಚಾಲಕನ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಈ ಘಟನೆ ಬಳಿಕ ಸ್ಥಳೀಯರು ಯಾವೊಂದು ವಾಹನ ಸೇತುವೆಗೆ ಇಳಿಯಲು ಬಿಡುತ್ತಿಲ್ಲ. ಹೀಗಾಗಿ ಸೇತುವೆ ಮೇಲೆ ಎರಡು‌ ಬದಿಯಲ್ಲಿ ವಾಹನ ಸಾಲುಗಟ್ಟಿವೆ. ದೇವರಹಿಪ್ಪರಗಿ, ಬಸವನಬಾಗೇವಾಡಿ ಸಂಪರ್ಕಿಸುವ ರಾಜ್ಯ ಹೆದ್ದಾರಿ-41 ಸಂಚಾರ ಸಂಪೂರ್ಣ ಬಂದ್ ಆಗಿದೆ.

ಟಾಪ್ ನ್ಯೂಸ್

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

MM-Singh-Sonia

Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್‌ ಸಿಂಗ್‌

BJP-BRS

Party Donation: ಬಿಜೆಪಿಗೆ 2,244 ಕೋ.ರೂ. ದೇಣಿಗೆ ಕಳೆದ ಬಾರಿಗಿಂತ ಶೇ. 212 ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.