ಪ್ರವಾಹ ಭೀತಿ:ಸುರಕ್ಷಿತ ಸ್ಥಳಕ್ಕೆ ತೆರಳಲು ಜನರಿಗೆ ಸೂಚನೆ
Team Udayavani, Aug 31, 2017, 2:59 PM IST
ಚಡಚಣ: ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಉಜನಿ ಜಲಾಶಯ ಅಪಾಯದ ಮಟ್ಟ ಮೀರಿ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಗ್ರಾಮಗಳ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಇಂಡಿ ತಹಸೀಲ್ದಾರ ಸಂತೋಷ ಮ್ಯಾಗೇರಿ ತಿಳಿಸಿದ್ದಾರೆ.
ಮಹಾರಾಷ್ಟ್ರ ಸರಕಾರ ಜಲಾಶಯದಿಂದ ಭೀಮಾನದಿಗೆ ಸುಮಾರು 15ರಿಂದ 20 ಸಾವಿರ ಕ್ಯೂಸೆಕ್ ನೀರು ಬಿಡುವ ಸಂಭವವಿದೆ. ಆ.29ರಂದು ಸುಮಾರು 6500 ಕ್ಯೂಸೆಕ್ ನೀರು ಹರಿ ಬಿಡಲಾಗಿದ್ದು, ಗುರುವಾರ ರಾಜ್ಯದ ಗಡಿ ಪ್ರವೇಶಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರದ ಗ್ರಾಮಗಳಾದ ಉಮರಜ, ದಸೂರ, ಹೊಳೆಸಂಖ, ಉಮರಾಣಿ, ಟಾಕಳಿ, ಗೋವಿಂದಪುರ, ನಿವರಗಿ ಸೇರಿದಂತೆ ಮತ್ತಿತರ ಗ್ರಾಮಗಳಲ್ಲಿ ಈಗಾಗಲೇ ಡಂಗುರ ಸಾರಲಾಗಿದ್ದು, ಸಾರ್ವಜನಿಕರು ಜಾಗೃತಿ ವಹಿಸಿ ತಮ್ಮ ದನಕರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ತಹಸೀಲ್ದಾರರು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.