ವಿಜಯಪುರ ಫುಡ್ ಪಾರ್ಕ್ ಗಾಗಿ ಬಜೆಟ್ ನಲ್ಲಿ ಆದ್ಯತೆ: ಸಚಿವ ಬಿ.ಸಿ.ಪಾಟೀಲ್


Team Udayavani, Feb 22, 2021, 1:35 PM IST

ವಿಜಯಪುರ ಫುಡ್ ಪಾರ್ಕ್ ಗಾಗಿ ಬಜೆಟ್ ನಲ್ಲಿ ಆದ್ಯತೆ: ಸಚಿವ ಬಿ.ಸಿ.ಪಾಟೀಲ್

ವಿಜಯಪುರ: ರಾಜ್ಯದಲ್ಲಿ ಸಾವಯವ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸರ್ಕಾರ ಚಿಂತನೆ ನಡೆಸಿದೆ. ಆದರೆ ಸ್ಥಳ ನಿಗದಿಯಾಗಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಸೋಮವಾರ ಉದ್ದೇಶಿತ ಇಟ್ಟಂಗಿಹಾಳ ಫುಡ್ ಪಾರ್ಕ್ ಗೆ ಸ್ಥಳ ಪರಿಶೀಲನೆ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ, ಧಾರವಾಡ, ವಿಜಯಪುರ ಜಿಲ್ಲೆ ಹೀಗೆ ಸಾವಯವ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ಯಾವ ಜಿಲ್ಲೆಯನ್ನೂ ಅಯ್ಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು

ಬರುವ ಬಜೆಟ್ ನಲ್ಲಿ ವಿಜಯಪುರ ಹೊರ ವಲಯದ ಇಟ್ಟಂಗಿಹಾಳ ಪ್ರದೇಶದಲ್ಲಿ ಫುಡ್ ಪಾರ್ಕ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತದೆ. ಈ ಹಿಂದೆ ಬಬಲೇಶ್ವರ ಶಾಸಕರಾದ ಎಂ.ಬಿ. ಪಾಟೀಲ ಅವರು ಫುಡ್ ಪಾರ್ಕ್ ನ ನಿರ್ಮಾಣಕ್ಕಾಗಿ ಸರ್ಕಾರಕ್ಕೆ ಪತ್ರ ಬರೆದಿದ್ದರು.  ಹೀಗಾಗಿ ಸ್ಥಳ ಪರಿಶೀಲನೆಗೆ ಆಗಮಿಸಿದ್ದೇನೆ. ಇಟ್ಟಂಗಿಹಾಳ ಪ್ರದೇಶದಲ್ಲಿ ವೈನ್ ಪಾರ್ಕ್ ಹಾಗೂ ಫುಡ್ ಪಾರ್ಕ್ ಎರಡೂ ಯೋಜನೆಗೆ ಒಂದ ಕಡೆಗೆ ಸ್ಥಳ ಮೀಸಲು ಇರಿಸಲಾಗಿದೆ. ಹೀಗಾಗಿ ಈ ಸ್ಥಳದಲ್ಲಿ ಕೃಷಿಗೆ ಸಂಬಂಧಿಸಿದಂತೆ ಶಾಸಕ ಎಂ.ಬಿ.ಪಾಟೀಲ ಅವರ ಸಲಹೆ ಮೇರೆಗೆ ಬಹುಪಯೋಗಿ ಕೃಷಿ ಪಾರ್ಕ್ ನಿಮಾರ್ಣಕ್ಕೆ ಚಿಂತಿಸಲಾಗುತ್ತಿದೆ ಎಂದರು.

ಇದನ್ನೂ ಓದಿ:ಸ್ಥಳೀಯರಿಗೆ ಟೋಲ್ ವಿನಾಯತಿಗಾಗಿ ಕೋಟ ಬಂದ್ ಯಶಸ್ವಿ; ಸಾವಿರಾರು ಮಂದಿಯಿಂದ ಪ್ರತಿಭಟನಾ ಸಭೆ

ವಿಜಯಪುರ ಜಿಲ್ಲೆ ದ್ರಾಕ್ಷಿ, ದಾಳಿಂಬೆ, ತೊಗರಿ ಸೇರಿದಂತೆ ಇತರೆ ಪ್ರಮುಖ ಕೃಷಿ, ತೋಟಗಾರಿಕೆ ಬೆಳೆ ಪ್ರದೇಶ ಹೆಚ್ಚಾಗಿದೆ. ವೈನ್-ಫುಡ್ ಪಾರ್ಕ್ ಗೆ ಒಂದೇ ಕಡೆ ಗುರುತಿಸಿ, ಸೂಕ್ತ ಸ್ಥಳ ಮೀಸಲು ಇರಿಸಿದ್ದಾರೆ. ಎಲ್ಲ ಬಗೆಯ ಕೃಷಿ ಉತ್ಪನ್ನಗಳ ದಾಸ್ತಾನು, ಶೈತ್ಯಾಗಾರ, ಕೌಶಲ್ಯ ತರಬೇತಿಯಂಥ ಕಾರ್ಯಕ್ರಮಕ್ಕೆ ಅನುಕೂಲ ಆಗಲಿದೆ. ತ್ವರಿತವಾಗಿ ಪ್ರಸ್ತಾವನೆ ಸಿದ್ದಪಡಿಸಿ, ಬಜೆಟ್ ನಲ್ಲಿ ಅಗತ್ಯ ಅನುದಾನ ಘೋಷಣೆ ಸಿಎಂಗೆ ಮನವಿ ಮಾಡುವುದಾಗಿ ಭರವಸೆ ನೀಡಿದರು.

ಹಿಟ್ನಳ್ಳಿ ಕೃಷಿ ವಿಸ್ತರಣಾ ಕೇಂದ್ರವನ್ನು ಮುದ್ದೇಬಿಹಾಳ ಸ್ಥಳಾಂತರ ವಿಚಾರ ಇಲಾಖೆಗೆ‌ ಮುಂದಿಲ್ಲ. ಕಳೆದ ಎರಡು ವರ್ಷಗಳ ಹಿಂದೆ ಈ ಕುರಿತು ಚರ್ಚೆ ನಡೆಸಿದ್ದಾಗಿ ಇಲ್ಲಿ ಬಂದಮೇಲೆ ತಿಳಿಯಿತು. ಇದನ್ನು ಸ್ಥಳಾಂತರ ಮಾಡದೇ ಅಗತ್ಯ ಬಿದ್ದರೆ ಮುದ್ದೇಬಿಹಾಳಕ್ಕೆ ಹೊಸದಾಗಿ ಕೃಷಿ ವಿಸ್ತರಣಾ ಕೇಂದ್ರ ಮಂಜೂರು ಮಾಡುವುದಾಗಿ ಹೇಳಿದರು.

ವಿಜಯಪುರ ಸೂಕ್ತ: ಮಾಜಿ ಸಚಿವ, ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಮಾತನಾಡಿ, ಜಿಲ್ಲೆಯಲ್ಲಿ ತೋಟಗಾರಿಕೆ, ಲಿಂಬೆ, ದ್ರಾಕ್ಷಿ ಸೇರಿದಂತೆ ತೋಟಗಾರಿಕೆ ಉತ್ಕೃಷ್ಟ ಗುಣಮಟ್ಟದ ಬೆಳೆ ಬೆಳೆಯಲಾಗುತ್ತದೆ. ಹೀಗಾಗಿ ಜಿಲ್ಲೆಯಲ್ಲಿ ಫುಡ್ ಪಾರ್ಕ್ ನಿರ್ಮಾಣ ಅಗತ್ಯವಿದೆ. ಇದಕ್ಕಾಗಿ ಸರ್ಕಾರಕ್ಕೆ ನಾನು ಮಾಡಿಕೊಂಡ ಮನವಿ ಮೇರೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಂದಿಸಿ, ಸ್ಥಳ ಪರಿಶೀಲನೆ ಮಾಡಿದ್ದಾರೆ. ಅಲ್ಲದೇ ಪ್ರಸಕ್ತ ಬಜೆಟ್ ನಲ್ಲಿ ಯೋಜನೆ ಘೋಷಿಸಿ ಸೂಕ್ತ ಅನುದಾನ ನೀಡುವ ಭರವಸೆ ನೀಡಿದ್ದಾರೆ ಎಂದರು.

ಇದನ್ನೂ ಓದಿ:ಯತ್ನಾಳ್ ರಿಗೆ ದೆಹಲಿಗೆ ಬುಲಾವ್ ನೀಡಿರುವ ಬಗ್ಗೆ ನನಗೆ ಗೊತ್ತಿಲ್ಲ: ಸಚಿವ ಬಿ.ಸಿ.ಪಾಟೀಲ್

ರಾಜ್ಯ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್, ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ್, ಲಿಂಬೆ ಅಭಿವೃದ್ಧಿ ಮಂಡಳಿ‌ ಅಧ್ಯಕ್ಷ ಅಶೋಕ ಅಲ್ಲಾಪುರ, ಜಿಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Vijayapura-waqf

Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ

Vijayapura: Protest against Waqf led by many Seers

Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ

Waqf Issue:  Must Be Get Protected from Land Terrorism, Land Jihad: Shobha Karandlaje

Waqf Issue: ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವಾಗಬೇಕು: ಶೋಭಾ ಕರಂದ್ಲಾಜೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

2

Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.