ಅಧಿಕಾರಿ ಮನೆಯಲ್ಲಿ ವಿದೇಶಿ ಬಾತ್‌ಟಬ್!
ನಿರ್ಮಿತಿ ಕೇಂದ್ರದ ಅಧಿಕಾರಿ ಗೋಪಿನಾಥಸಾ ಮುಲಜಿ ಐಷಾರಾಮಿ ಬದುಕು ಅನಾವರಣ
Team Udayavani, Mar 17, 2022, 2:58 PM IST
ವಿಜಯಪುರ: ನಿರ್ಮಿತಿ ಕೇಂದ್ರದ ಅಧಿಕಾರಿ ಮನೆ ಮೇಲೆ ಬುಧವಾರ ಬೆಳಗ್ಗೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಮನೆಯಲ್ಲಿ ಐಷಾರಾಮಿ ವಿದೇಶಿ ಬಾತ್ ಟಬ್, 10ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳು ಇರುವುದನ್ನು ಪತ್ತೆ ಹಚ್ಚಿದ್ದಾರೆ.
ವಿಜಯಪುರ ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಗೋಪಿನಾಥಸಾ ಮುಲಜಿ ಕಚೇರಿ, ಕಚೇರಿಯ ಸ್ಟೋರ್ ರೂಂ, ಮನೆಗಳ ಮೆಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಇದಲ್ಲದೇ ಕಚೇರಿಯ ಓರ್ವ ಸಿಬ್ಬಂದಿ ಮನೆ ಹಾಗೂ ಬಾಗಲಕೋಟೆ ನಗರದಲ್ಲಿರುವ ಗೋಪಿನಾಥಸಾ ಸಂಬಂ ಧಿಕರ ಎರಡು ನಿವಾಸಗಳ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ಧಾರೆ.
ನಗರದ ಸೊಲ್ಲಾಪುರ ರಸ್ತೆಯಲ್ಲಿರುವ ಗೋಪಿನಾಥಸಾ ಮಲಜಿ ನಿವಾಸ, ದರ್ಗಾ ಪ್ರದೇಶದಲ್ಲಿರುವ ಕಚೇರಿ ಹಾಗೂ ಸ್ಟೋರ್ ನಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಸೊಲ್ಲಾಪುರ ರಸ್ತೆಯಲ್ಲಿರುವ ಗೋಪಿನಾಥ ಮನೆಯಲ್ಲಿ ಐಷಾರಾಮಿ ವಸ್ತುಗಳು, ಚಿನ್ನದ ಒಡವೆಗಳು, ಬೆಲೆ ಬಾಳುವ ಗೃಹ ಬಳಕೆಯ ಐಷಾರಾಮಿ ವಸ್ತುಗಳು, 10ಕ್ಕೂ ಅಧಿಕ ಬ್ಯಾಂಕ್ ಪಾಸ್ ಬುಕ್, ಇತರೆ ದಾಖಲಾತಿ ವಶಕ್ಕೆ ಪಡದು ಪರಿಶೀಲನೆ ನಡೆಸಿದ್ದಾರೆ.
ಗೋಪಿನಾಥ ಪುತ್ರಿ, ಪತ್ನಿಯ ಬ್ಯಾಂಕ್ ದಾಖಲಾತಿಗಳನ್ನು ಸಹ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಮನೆಯಲ್ಲಿ ಐಷಾರಾಮಿ ವಸ್ತುಗಳು ಮಾತ್ರವಲ್ಲದೇ ಬಾತ್ ರೂಂನಲ್ಲಿ ವಿದೇಶಿ ಮಾದರಿಯ ಸುಮಾರು 3 ಲಕ್ಷ ರೂ. ಬೆಲೆ ಬಾಳುವ ಬಾತ್‌ಟಬ್ ಇರುವುದನ್ನು ಪತ್ತೆ ಹಚ್ಚಿದ್ದಾರೆ. ದಾಳಿ ಮುಕ್ತಾಯದ ಬಳಿಕ ಅಕ್ರಮ ಆಸ್ತಿ ಬಗ್ಗೆ ನಿಖರ ಮಾಹಿತಿ ಲಭ್ಯವಾಗಲಿದೆ. ಎಸಿಬಿ ಡಿವೈಎಸ್ಪಿ ಮಂಜುನಾಥ ಗಂಗಲ್ ಹಾಗೂ ತಂಡದಿಂದ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.