ಕಾಂಗ್ರೆಸ್‌ ಪರ ಮಾಜಿ ಸಚಿವ ಮಹಾದೇವಪ ಮತಯಾಚನೆ

Team Udayavani, Oct 23, 2021, 11:16 AM IST

8vote

ಸಿಂದಗಿ: ಕಾಂಗ್ರೆಸ್‌ ಪಕ್ಷದ ಉದ್ದೇಶ ಅಭಿವೃದ್ಧಿ. ಆದರೆ ಇಂದಿನ ರಾಜಕೀಯ ವ್ಯವಸ್ಥೆ ನೋಡಿದಾಗ ಜಾತಿ, ಧರ್ಮ, ವೈಯಕ್ತಿಕ ಟೀಕೆ ಮಾಡುವುದು ಕಂಡು ಬರುತ್ತಿವೆ. ಇವೆಲ್ಲ ಪ್ರಜಾಪ್ರಭುತ್ವಕ್ಕೆ ಮಾರಕವಾಗಿವೆ. ಅಭಿವೃದ್ಧಿಗೆ ಕಂಠಕವಾಗಿವೆ. ಆದ್ದರಿಂದ ಅಭಿವೃದ್ಧಿ ಚಿಂತನೆ ಬಯಸುವ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿ ಎಂದು ಮಾಜಿ ಸಚಿವ ಡಾ| ಎಚ್‌.ಸಿ. ಮಹಾದೇವಪ್ಪ ಹೇಳಿದರು.

ಶುಕ್ರವಾರ ತಾಲೂಕಿನ ಕೋರಹಳ್ಳಿ ಗ್ರಾಮದಲ್ಲಿ ಉಪಚುನಾವಣೆ ನಿಮಿತ್ತ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಪರ ಮತಯಾಚನೆ ಮಾಡಿ ಅವರು ಮಾತನಾಡಿದರು.

ಧರ್ಮ ಆಧಾರಿತ ರಾಜಕಾರಣದಿಂದ ರಾಜಕೀಯ ನಿಯಂತ್ರಣ ಮಾಡುವುದು. ಈ ಹಿನ್ನೆಲೆಯಲ್ಲಿ ಭಾರತದ ಸಂವಿಧಾನ ಅಪಾಯದಲಿದೆ. ಪ್ರಜಾಪ್ರಭುತ್ವ ವಿಫವಾಗುತ್ತಿದೆ. ಬಿಜೆಪಿ ಕೋಮುವಾದದ ಆಡಳಿತ ನಡೆಸುತ್ತಿದೆ. ಕೇಸರಿಕರಣ ಮಾಡುತ್ತಿದೆ. ಆದ್ದರಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿ ಅಭ್ಯರ್ಥಿ ಅಶೋಕ ಮನಗೂಳಿ ಅವರನ್ನು ಗೆಲ್ಲಿಸಿ ಎಂದು ಹೇಳಿದರು.

ಬಿಜೆಪಿ ಸರಕಾರ ಸುಳ್ಳು ಹೇಳುವ ಸರಕಾರ. ಈ ಸರಕಾರದಲ್ಲಿ ಜನ ಸಾಮಾನ್ಯರು ಬದುಕುವುದು ಕಷ್ಟಕರವಾಗಿದೆ. ಆದ್ದರಿಂದ ಜನಸಾಮಾನ್ಯರ ಪಕ್ಷ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿಕೊಂಡರು.

ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ ಮಾತನಾಡಿ, ಸಿಂದಗಿ ಉಪಚುನಾವಣೆಯು ಸಿಂದಗಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಜೆಡಿಎಸ್‌ ಲೆಕ್ಕಕ್ಕಿಲ್ಲ. ಕ್ಷೇತ್ರದಲ್ಲಿ ಜೆಡಿಎಸ್‌ ಪಕ್ಷ ಮತಗಳೇನು ಇಲ್ಲ. ಎಂ.ಸಿ. ಮನಗೂಳಿ ಅವರು ತಮ್ಮ ವರ್ಚಸ್ಸಿನ ಮೇಲೆ ಮತಗಳನ್ನು ಪಡೆದಿದ್ದರು. ಅವರು ಕ್ಷೇತ್ರದಲ್ಲಿ ಎಲ್ಲ ಸಮಾಜ ಮತ್ತು ಧರ್ಮದವರೊಂದಿಗೆ ಒಳ್ಳೆ ಬಾಂಧವ್ಯವನ್ನು ಹೊಂದಿದ್ದರು. ಕ್ಷೇತ್ರಕ್ಕೆ ತಮ್ಮದೆಯಾದ ಕೊಡುಗೆಯನ್ನು ನೀಡಿದ್ದಾರೆ. ಅವರಂತೆ ಅವರ ಮಗ ಅಶೋಕ ಮನಗೂಳಿ ಕಾಂಗ್ರೆಸ್‌ ಪಕ್ಷದಿಂಧ ಸ್ಪರ್ಧಿಸಿದ್ದು ಅವರಿಗೆ ಮತ ನೀಡಿ ಎಂದು ಹೇಳಿದರು.
ವೈ.ಸಿ. ಮಯೂರ, ಚಂದ್ರಕಾಂತ ಸಿಂಗೆ, ರಮೇಶ ಮೋರಟಗಿ, ಶಿವಪುತ್ರ ಗಬಸಾವಳಗಿ, ರಾಜು, ಭಾರತಿ ಹೊಸಮನಿ ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.