ಸಂವಿಧಾನದ ಆಶಯ ಈಡೇರಿಸಿ: ಶಶಿಕಲಾ ಜೊಲ್ಲೆ
14,833 ಪ್ರಕರಣಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
Team Udayavani, Jan 27, 2021, 6:22 PM IST
ವಿಜಯಪುರ: ಭಾರತೀಯರ ಸಾಮಾಜಿಕ-ಸಾಂಸ್ಕೃತಿಕ, ಸಾಂಪ್ರದಾಯಿಕ ಆಯಾಮಗಳಿಗೆ ಸರಿ ಹೊಂದಿರುವ ನಮ್ಮ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದೆ. ಸಂವಿಧಾನ ಸ್ವೀಕೃತವಾದ ದಿನವನ್ನು ಗಣರಾಜ್ಯವಾಗಿ ಆಚರಿಸುತ್ತಿದ್ದು, ದೇಶದ ಸಾರ್ವಭೌಮತೆ ಎತ್ತಿ ಹಿಡಿಯಲು ಭಾರತೀಯ ಪ್ರಜೆಗಳು ಕಟಿಬದ್ಧರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ನಗರದ ಹೊರ ವಲಯದ ತೊರವಿ ಬಳಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ 72ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ವಿಶ್ವಕ್ಕೆ ಮಾದರಿಯಾದ ಸಂವಿಧಾನ ಕೊಡುಗೆಯಾಗಿ ನೀಡಿದ ಡಾ| ಬಿ.ಆರ್. ಅಂಬೇಡ್ಕರ್ ಅವರಿಗೆ ಭಾರತೀಯರು ಸದಾ ಚಿರಋಣಿಯಾಗಿದ್ದೇವೆ ಎಂದರು.
ಸ್ವತಂತ್ರ ಭಾರತಕ್ಕೆ ಸ್ವತಂತ್ರ ಅಧಿಕಾರ ನಡೆಸಲು ಡಾ| ಅಂಬೇಡ್ಕರ್ ರಚಿಸಿಕೊಟ್ಟ ಲಿಖೀತ ಸಂವಿಧಾನವನ್ನು ಗಣರಾಜ್ಯವಾದ ಭಾರತ 1950 ರ ಜನವರಿ 26ರಂದು ಸ್ವೀಕೃತಿ ಮಾಡಿತು. ಇದರ ಸ್ಮರಣೆಗಾಗಿ ಪ್ರತಿ ವರ್ಷ ಗಣರಾಜ್ಯೋತ್ಸವವನ್ನು ರಾಷ್ಟ್ರೀಯ ಹಬ್ಬವಾಗಿ ಆಚರಿಸಲಾಗುತ್ತದೆ ಎಂದರು.
ಬಹುಭಾಷೆ, ಬಹುಸಂಸ್ಕೃತಿ ಮತ್ತು ಹಲವು ಧರ್ಮಗಳ ಅನುಯಾಯಿ, ವಿವಿಧ ಸಾಂಸ್ಕೃತಿಗಳ ಆಚರಣೆ ಮತ್ತು ಅನುಕರಣೆಯಲ್ಲಿ ಭಾರತದ ಒಕ್ಕೂಟ ರಾಷ್ಟ್ರದಲ್ಲಿರುವ ಕರ್ನಾಟಕ ವೈವಿಧ್ಯಪೂರ್ಣ-ವರ್ಣಮಯ ಇತಿಹಾಸ ಹೊಂದಿದೆ. ಆದರೆ ಈಚಿನ ವರ್ಷಗಳಲ್ಲಿ ನಿರಂತರವಾಗಿ ಪ್ರಕೃತಿ ವಿಕೋಪಕ್ಕೆ ತುತ್ತಾಗುತ್ತಿರುವ ಕರ್ನಾಟಕದ ಜನಜೀವನ ಕಳವಳಕಾರಿ ಸಂಗತಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
21ನೇ ಶತಮಾನದ ಬಲಿಷ್ಠ ಭಾರತದ ಕನಸು ನನಸಾಗಿಸಲು ಭಾರತೀಯರೆಲ್ಲರೂ ರಾಷ್ಟ್ರೀಯ ಭಾವೈಕ್ಯದೊಂದಿಗೆ ಸಂಪೂರ್ಣ ಸಮರ್ಪಣಾ ಮನೋಭಾವ ಹಾಗೂ ಸಾಂಘಿಕ ದುಡಿಮೆ ಮಾಡಬೇಕಿದೆ. ಕಳೆದ ಸಾಲಿನ ಅತಿವೃಷ್ಟಿ ಹೊಡೆತ, ಕೋವಿಡ್-19 ಎಂಬ ಜಾಗತಿಕ ಮಹಾಮಾರಿಯಿಂದ ಜನಸಾಮಾನ್ಯರ ಬದುಕು ಅಲ್ಲೋಲ-ಕಲ್ಲೋಲಗೊಂಡಿದೆ.
ಇಂತಹ ಪ್ರಕ್ಷುಬ್ದ ಸನ್ನಿವೇಶವನ್ನು ನಮ್ಮ ಸರ್ಕಾರ ದೇಶವೇ ಮೆಚ್ಚುವಂತೆ ರಕ್ಷಣಾತ್ಮಕ ಮತ್ತು ಪರಿಣಾಮಕಾರಿಯಾಗಿ ನಿಭಾಯಿಸಿ ಸರ್ವರ ಪ್ರಶಂಸೆಗೆ ಪಾತ್ರವಾಗಿದೆ ಎಂದರು.
ಜಿಲ್ಲೆಯಲ್ಲಿ ಈವರೆಗೆ 2.76 ಲಕ್ಷ ಜನರ ಗಂಟಲು ದ್ರವ ಮಾದರಿ ತಪಾಸಣೆ ನಡೆಸಿದ್ದು, 14,833 ಪ್ರಕರಣಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರಲ್ಲಿ ಶೇ. 98.19 ರೋಗಿಗಳು ಗುಣಮುಖರಾಗಿದ್ದಾರೆ. ಇದೀಗ ಪ್ರಧಾನಿ ಮೋದಿ ಅವರ ಆತ್ಮನಿರ್ಭರ ಭಾರತದ ಪರಿಕಲ್ಪನೆಯಲ್ಲಿ ಯಶಸ್ವಿ ಸಂಶೋಧನೆ ನಡೆಸಿ, ಕೋವಿಡ್ ರೋಗಕ್ಕೆ ಕೋವ್ಯಾಕ್ಸಿನ್ ಲಸಿಕೆ ಕಂಡು ಹಿಡಿಯಲಾಗಿದೆ. ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 5676 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕುವ ಗುರಿಯಲ್ಲಿ 3755 ಕಾರ್ಯಕರ್ತರಿಗೆ ಲಸಿಕೆ ಹಾಕುವ ಮೂಲಕ ಶೇ. 66.15 ಪ್ರಗತಿ ಸಾಧಿಸಲಾಗಿದೆ ಎಂದು ಹೇಳಿದರು.
2020ರ ವೇಳೆ ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ಕೃಷಿ, ತೋಟಗಾರಿಕೆ ಬೆಳೆ ಹಾನಿಯಾಗಿದೆ. ನಮ್ಮ ಸರ್ಕಾರ 1.59
ಲಕ್ಷ ರೈತರಿಗೆ 109 ಕೋಟಿ ರೂ. ಪರಿಹಾರ ವಿತರಿಸಿದೆ ಎಂದು ವಿವರಿಸಿದರು. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ವೂಡಾ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಜಿಪಂ ಸಿಇಒ ಲಕ್ಷ್ಮೀಕಾಂತರೆಡ್ಡಿ, ಎಸ್ಪಿ ಅನುಪಮ್ ಅಗರವಾಲ, ಎಡಿಸಿ ಡಾ| ಔದ್ರಾಮ್, ಎಎಸ್ಪಿ ರಾಮ ಅರಸಿದ್ದಿ, ತಹಶೀಲ್ದಾರ್ ಮೋಹನಕುಮಾರಿ, ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ ಇದ್ದರು.
ಬಳಿಕ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳ 6 ತಂಡಗಳು ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆರ್‌ಪಿಐ ಶಂಕರಗೌಡ ಚೌಧರಿ ಕವಾಯತು ನಡೆಸಿ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಗೌರವ ವಂದನೆ ಸಲ್ಲಿಸಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.