ಮಣ್ಣಿನ ಸಣ್ಣ ಗಣಪನಿಗೆ ಸರಳ ಪೂಜೆ

Team Udayavani, Aug 24, 2020, 4:35 PM IST

vp-tdy-1

ವಿಜಯಪುರ: ಹಿಂದೂ ಧರ್ಮೀಯರ ದೊಡ್ಡ ಹಬ್ಬಗಳಲ್ಲಿ ಒಂದಾದ ಅದರಲ್ಲೂ ಯುವ ಸಮೂಹದ ಸಂಭ್ರಮದ ಹಬ್ಬಗಳಲ್ಲಿ ಪ್ರಮುಖವಾದ ಗಣೇಶ ಹಬ್ಬಕ್ಕೂ ಕೋವಿಡ್‌ ಕಾರ್ಮೋಡ ಕವಿದಿದೆ. ಹಿಂದಿನಂತೆ ದೊಡ್ಡ ದೊಡ್ಡ ಪೆಂಡಾಲ್‌, ಬೃಹತ್‌ ಗಣೇಶ ಮೂರ್ತಿ, ಪಟಾಕಿ ಸದ್ದು, ಅಬ್ಬರದ ಧ್ವನಿವರ್ಧಕ ಹಾಗೂ ಸಂಗೀತ-ಹಾಸ್ಯೋತ್ಸವದಂಥ ಸಾಂಸ್ಕೃತಿಕ ಕಾರ್ಯಕ್ರಮಗಳಿಲ್ಲ. ಸಣ್ಣ ಮಣ್ಣಿನ ಗಣಪನಿಗೆ ಸರಳ ರೀತಿಯಲ್ಲೇ ಪೂಜೆ ಸಲ್ಲಿಸಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಗಣೇಶ ಹಬ್ಬ ಎಂದರೆ ಮನೆ ಮನೆಗಳಲ್ಲಿ ಸಂಭ್ರಮ. ಓಣಿಗಲ್ಲಿ ಸದ್ದು ಗದ್ದಲಸಾಮಾನ್ಯ. ಕಳೆದ ಆರು ತಿಂಗಳಿಂದ ಬಹುತೇಕ  ಎಲ್ಲ ಧರ್ಮಿಯರ ಹಬ್ಬ-ಉತ್ಸವಗಳನ್ನು ಬಲಿ ಪಡೆದಿರುವ ಕೋವಿಡ್‌-19 ಕಾರ್ಮೋಡ ಗಣೇಶ ಉತ್ಸವದ ಮೇಲೂ ಆಗಿದೆ. ಸರ್ಕಾರ ಕೋವಿಡ್‌ ನಿಗ್ರಹಕ್ಕಾಗಿ ಗಣೇಶ ಉತ್ಸವವನ್ನು ಅದರಲ್ಲೂ ಸಾರ್ವಜನಿಕ ಗಣೇಶ ಪ್ರತಿ‚ಷ್ಠಾಪನೆಗೆ ಸಂಪೂರ್ಣ ನಿರ್ಬಂಧ ಹೇರಿತ್ತು. ಹಿಂದೂಪರ ವಿವಿಧ ಸಂಘಟನೆಗಳ ಹೋರಾಟದಿಂದಾಗಿ ಷರತ್ತು ಬದ್ಧ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿದೆ. ಸರ್ಕಾರ ಪರವಾನಿಗೆ ನೀಡಿದರೂಗಣೇಶ ಉತ್ಸವದ ಸಂಭ್ರಮ ಮಾತ್ರ ಅದ್ಧೂರಿತನ  ಕಳೆದುಕೊಂಡು ಸರಳವಾಗಿಯೇ ನಡೆದಿದೆ.

ವಿಜಯಪುರ ಮಹಾನಗರ ಒಂದರಲ್ಲೇ ಸುಮಾರು 200ಕ್ಕೂ ಹೆಚ್ಚು ಗಣೇಶ ಉತ್ಸವ ಸಮಿತಿಗಳಿದ್ದು, ಮಹಾ ಮಂಡಳವೂ ಇದೆ. ಇದಲ್ಲದೇ ಮುದ್ದೇಬಿಹಾಳ, ತಾಳಿಕೋಟೆ, ಸಿಂದಗಿ, ದೇವರಹಿಪ್ಪರಗಿ, ಆಲಮೇಲ, ಇಂಡಿ, ಚಡಚಣ, ತಿಕೋಟಾ, ಬಬಲೇಶ್ವರ, ಬಸವನಬಾಗೇವಾಡಿ, ನಿಡಗುಂದಿ, ಕೊಲ್ಹಾರ ಸೇರಿದಂತೆ ವಿವಿಧ ತಾಲೂಕು ಕೇಂದ್ರಗಳಲ್ಲಿ 10ರಿಂದ 30ರವರೆಗೆ ಹಾಗೂ ಜಿಲ್ಲೆಯ ದೊಡ್ಡ ದೊಡ್ಡ ಗ್ರಾಮಗಳಲ್ಲೂ ನಾಲ್ಕಾರು ಕಡೆಗಳಲ್ಲಿ ಸಾರ್ವಜನಿಕ ಬೃಹತ್‌ ಗಣೇಶ ಮೂರ್ತಿ ಪ್ರತಿಷ್ಠಾಪನೆ ಇದ್ದೇ ಇರುತ್ತಿತ್ತು. ಐದರಿಂದ ಹನ್ನೊಂದು ದಿನಗಳವರೆಗೆ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯೂ ಇರುತ್ತಿತ್ತು. ಗಲ್ಲಿ ಗಲ್ಲಿಗಳ ರಸ್ತೆಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ವೇದಿಕೆ ಸಿದ್ಧಗೊಳ್ಳುತ್ತಿದ್ದವು. ಎಲ್ಲರಿಗಿಂತ ವೈವಿಧ್ಯ ಹಾಗೂ ಆಕರ್ಷಣೀಯವಾಗಿ ತಮ್ಮ ಗಣೇಶ ಕಾಣಬೇಕೆಂದು ಹತ್ತಾರು ಲಕ್ಷ ರೂ. ಖರ್ಚು ಮಾಡಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವುದು ಸಾಮಾನ್ಯವಾಗಿತ್ತು.

ಆದರೆ ಕೋವಿಡ್‌ ಕಾರಣಕ್ಕೆ ಸರ್ಕಾರ ವಿಧಿಸಿರುವ ಷರತ್ತು, ನಿರ್ಬಂಧಗಳ ಕಾರಣಕ್ಕೆ ಜಿಲ್ಲೆಯಲ್ಲಿ ಈ ಬಾರಿ ನಗರ-ಗ್ರಾಮೀಣ ಪ್ರದೇಶಗಳಲ್ಲಿ ಶೇ. 50ರಷ್ಟೂ ಕಡೆಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೊಂಡಿಲ್ಲ. ಪ್ರತಿಷ್ಠಾಪನೆ ಆಗಿರುವ ಗಣೇಶ ಮೂರ್ತಿಗಳು ಕೂಡ ಸಣ್ಣ ಟೆಂಟ್‌ನಲ್ಲಿವೆ. ಹಲವು ದಶಕಗಳ ಬಳಿಕ ಜಿಲ್ಲೆಯಲ್ಲಿ ಮಣ್ಣಿನ ಗಣೇಶ ಮೂರ್ತಿಗಳೇ ಹೆಚ್ಚು ಪ್ರತಿಷ್ಠಾಪನೆಗೊಂಡಿದ್ದು, ಬಹುತೇಕ ಸಾರ್ವಜನಿಕ ಗಣೇಶ ಮೂರ್ತಿಗಳು ಮೊದಲ ದಿನವೇ ವಿಸರ್ಜನಗೊಂಡಿವೆ.

ಜಿಲ್ಲೆಯಲ್ಲಿ ಈ ಬಾರಿ ಬಹುತೇಕ ಎಲ್ಲಿಯೂ ದೊಡ್ಡ ಪ್ರಮಾಣದ ಮಾತಿರಲಿ ಸಣ್ಣ ಪಟಾಕಿ ಸದ್ದು ಕೇಳಿ ಬಂದಿಲ್ಲ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲದ ಕಾರಣ ಅಲ್ಲಲ್ಲಿ ಭಜನೆ, ಸರಳ ಪೂಜೆಗಳು ಮಾತ್ರ ಪ್ರಧಾನವಾಗಿ ಕಂಡು ಬಂದವು. ಒಟ್ಟಾರೆ ಸಂಖ್ಯೆಯಲ್ಲೂ ಕುಸಿತ, ಅಬ್ಬದರಲ್ಲೂ ಕ್ಷೀಣವಾಗಿ ಸರಳವಾಗಿ-ಸಣ್ಣ ಸಣ್ಣ ಮಣ್ಣಿನ ಗಣೇಶ ಮೂರ್ತಿಗಳು ಪ್ರತಿಷ್ಠಾಪಿಸಿ ಹಬ್ಬ ಮುಗ್ಗದಂತೆ ನೋಡಿಕೊಂಡಿದ್ದಾರೆ.

– ಜಿ.ಎಸ್‌. ಕಮತರ

ಟಾಪ್ ನ್ಯೂಸ್

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

sidda

Vijayapura: ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವುದು ನಮ್ಮ ನಿಲುವು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.