ಸೂರಿಲ್ಲದವರಿಗೆ ಶೀಘ್ರ ಮನೆ ನೀಡಿ: ಸುನೀಲಕುಮಾರ
Team Udayavani, Feb 10, 2022, 5:16 PM IST
ವಿಜಯಪುರ: ಜಿಲ್ಲೆಯ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಸತಿ ರಹಿತರಿಗೆ ಅತಿ ಅಗತ್ಯ ಮೂಲಭೂತ ಸೌಕರ್ಯವಾದ ವಸತಿ ಸೌಲಭ್ಯವ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಹೇಳಿದರು.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಮಟ್ಟದ ಅಲೆಮಾರಿ, ಅರೆ ಅಲೆಮಾರಿ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ನಿರ್ದಿಷ್ಟ ನೆಲೆ ಇಲ್ಲದೇ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ವಲಸೆ ಹೋಗುವ ಕಾರಣ, ಈ ಜನಾಂಗವು ಶೈಕ್ಷಣಿಕ ಮತ್ತು ಆರ್ಥಿಕವಾಗಿ ಅತ್ಯಂತ ಹಿಂದುಳಿದಿದೆ. ಇವರಿಗೆ ವಸತಿ ಸೌಲಭ್ಯವನ್ನು ಕಲ್ಪಿಸಿ, ಒಂದು ಸ್ಥಳದಲ್ಲಿ ನೆಲೆ ನಿಲ್ಲಲು ಅವಕಾಶ ಮಾಡಿಕೊಡಬೇಕು ಎಂದು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಜನರು ಹೆಚ್ಚಾಗಿ ವಾಸಿಸುತ್ತಿರುವ ಕಾಲೋನಿಗಳಲ್ಲಿ ಹಾಗೂ ಹೊಸದಾಗಿ ನಿರ್ಮಾಣ ಮಾಡಿದ ಬಡಾವಣೆಗಳಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣವನ್ನು ಮಾಡಿ, ನಾಗರಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕೆಂದು ನಿರ್ದೇಶನ ನೀಡಿದರು.
ಇಂಥ ಸಮುದಾಯದವರು ಹೆಚ್ಚಿರುವ ಪ್ರದೇಶಗಳಲ್ಲಿ ಕಂದಾಚಾರ, ಮೂಢನಂಬಿಕೆ ಪದ್ಧತಿಗಳನ್ನು ಕೊನೆಗಾಣಿಸಲು ಕ್ರಮ ಕೈಗೊಳ್ಳಬೇಕು. ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಈರಪ್ಪ ಆಶಾಪುರ ಅವರು ಮೆಟ್ರಿಕ್ ಪೂರ್ವದ ವಿಶೇಷ ಪ್ರೋತ್ಸಾಹಧನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅರ್ಹತಾ ವಿದ್ಯಾರ್ಥಿ ವೇತನ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಸಭೆಯಲ್ಲಿ ವಿಷಯ ಮಂಡಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.