ಉದ್ಯೋಗ-ವೇತನ ಭಾಗ್ಯ ನೀಡಲಿ


Team Udayavani, Aug 8, 2017, 3:22 PM IST

08-BJP-1.jpg

ವಿಜಯಪುರ: ರಾಜ್ಯದ ಜನರಿಗೆ ಹಲವು ಭಾಗ್ಯ ಕಲ್ಪಿಸಿರುವ ರಾಜ್ಯ ಸರ್ಕಾರ ಕಾರ್ಮಿಕರಿಗೆ ವೇತನ ಭಾಗ್ಯ ಹಾಗೂ ಉದ್ಯೋಗ ಭದ್ರತೆ ಭಾಗ್ಯ ಜಾರಿಗೆ ತರಬೇಕು ಎಂದು ಸಿಐಟಿಯು ಅಧ್ಯಕ್ಷೆ ಎಸ್‌. ವರಲಕ್ಷ್ಮೀ ಆಗ್ರಹಿಸಿದರು.

ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವು ಭಾಗ್ಯಗಳನ್ನು ಜಾರಿಗೊಳಿಸಿರುವ ರಾಜ್ಯ ಸರ್ಕಾರ ದುಡಿಯುವ
ಕೈಗಳಿಗೆ ಕೆಲಸ ಒದಗಿಸಲು ಉದ್ಯೋಗ ಭಾಗ್ಯ ಕಲ್ಪಿಸುವತ್ತ ಚಿತ್ತ ಹರಿಸಬೇಕು. ದುಡಿಯುವ ಶ್ರಮಿಕರಿಗೆ ಶ್ರಮಕ್ಕೆ ತಕ್ಕ ಪ್ರತಿಫಲವಾಗಿ ಕನಿಷ್ಠ
ವೇತನ ಭಾಗ್ಯ ಕಲ್ಪಿಸಬೇಕು. ಇದರಿಂದ ದುರ್ಬಲ ವರ್ಗದ ಜನರು ಕೂಡ ಆರ್ಥಿಕ ಸಬಲೀಕರಣಕ್ಕೆ ಸಾಧ್ಯವಾಗಲಿದೆ ಎಂದರು.

ಕಾರ್ಮಿಕರ ಶಕ್ತಿ ಹಾಗೂ ಧ್ವನಿ ಅಡಗಿಸಲು ಕೇಂದ್ರ ಸರ್ಕಾರ ಕಾರ್ಮಿಕ ಪರವಾದ ಕಾನೂನುಗಳನ್ನು ವ್ಯವಸ್ಥಿತವಾಗಿ ನಿರಂತರವಾಗಿ ರದ್ದು ಮಾಡುತ್ತ ಸಾಗಿದೆ. ಕಾರ್ಮಿಕ ಸಂಘಟನೆಗಳ ಹೋರಾಟ ಹತ್ತಿಕ್ಕುವ ಹುನ್ನಾರ ನಡೆಸಿದೆ. 40ಕ್ಕಿಂತ ಕಡಿಮೆ ಕಾರ್ಮಿಕರನ್ನು ಹೊಂದಿರುವ ಕೈಗಾರಿಕೆಗಳಿಗೆ ಕಾರ್ಖಾನೆ ಕಾಯ್ದೆಯಿಂದ ವಿನಾಯ್ತಿ ನೀಡಲು ಮುಂದಾಗಿದೆ. ಇದರಿಂದ ಕಾರ್ಮಿಕರು ಅನ್ಯಾಯದ ವಿರುದ್ಧ ಧ್ವನಿ ಎತ್ತದಂತೆ ಮಾಡುತ್ತಿದೆ. ದೇಶದ
ಎಲ್ಲೆಡೆ ಹೆಚ್ಚುತ್ತಿರುವ ಹೊರ ಗುತ್ತಿಗೆ ವ್ಯವಸ್ಥೆಯಿಂದ ಕಾರ್ಮಿಕರ ಶೋಷಣೆ ಮಿತಿ ಮೀರಿದ್ದು, ವೇತನ, ರಜೆ, ವೈದ್ಯಕೀಯ ಸೌಲಭ್ಯ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡುತ್ತಿಲ್ಲ. ಪ್ರಶ್ನಿಸುವ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ ಎಂದು ಕಿಡಿ ಕಾರಿದರು. ಮತ್ತೂಂದೆಡೆ ಸರ್ಕಾರಿ ಉದ್ದಿಮೆಗಳನ್ನು ಖಾಸಗೀಕರಣ ಮಾಡಲು ಮುಂದಾಗಿದೆ. ಇದರಿಂದ ಭವಿಷ್ಯದಲ್ಲಿ ನಿರುದ್ಯೋಗಿಗಳು ಉದ್ಯೋಗ ದೊರೆತರೂ ಭವಿಷ್ಯ ರೂಪಿಸಿಕೊಳ್ಳಲು ಬಂಡವಾಳಶಾಹಿ ಜನರ ಕೈಗೊಂಬೆಯಂತೆ ಜೀವನ ನಡೆಸುವಂತೆ ಮಾಡುವ ಹುನ್ನಾರ ನಡೆದಿದೆ ಎಂದು ದೂರಿದರು. ಇಂಧನ ಇಲಾಖೆ, ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಎರಡು ದಶಕಗಳಿಂದ ಗುತ್ತಿಗೆ ಆಧಾರಿತ ಸೇವೆ ಸಲ್ಲಿಸುತ್ತಿರುವರನ್ನೇ ನೇಮಿಸಬೇಕು. ಇಲ್ಲವಾದಲ್ಲಿ ವಯೋಮಿತಿ ಮೀರುತ್ತಿರುವ ಈ ನೌಕರರು ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಹೀಗಾಗಿ ಈಗಿರುವ ಸಿಬ್ಬಂದಿ ಸೇವೆಯನ್ನೇ ಮುಂದುವರಿಸಬೇಕು ಎಂದು ಆಗ್ರಹಿಸಿದರು.

ತಮಿಳುನಾಡಿನಲ್ಲಿ ಯಾವುದೇ ಕಾರ್ಮಿಕ 365 ದಿನ ಸೇವೆ ಸಲ್ಲಿಸಿದ್ದರೆ ಸೇವೆ ಕಾಯಂ ಮಾಡುವ ಕಾನೂನು ಜಾರಿಗೆ ಬಂದಿದೆ. ಅದೇ ಮಾದರಿ ಕಾನೂನು ರಾಜ್ಯದಲ್ಲೂ ಜಾರಿಗೆ ಬರಬೇಕು. ಗುತ್ತಿಗೆ ಸಂಸ್ಥೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುವ ಕಾರ್ಮಿಕರ ಸೇವೆ ಕಾಯಂ ಮಾಡಬೇಕು ಎಂದರು.

ಕಾರ್ಮಿಕ ಸಂಘಟನೆ ಮುಖಂಡರಾದ ಭೀಮಶಿ ಕಲಾದಗಿ, ಅಣ್ಣಾರಾಯ ಈಳಿಗೇರ, ಸುರೇಖಾ ರಜಪೂತ, ಲಕ್ಷ್ಮ ಣ ಹಂದ್ರಾಳ ಇದ್ದರು. 

ಟಾಪ್ ನ್ಯೂಸ್

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Leopard spotted in Vijayapura city: CCTV footage captured

Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.