ಎಕರೆಗೆ 50 ಸಾವಿರ ಪರಿಹಾರ ಕೊಡಿ

•ಮುದ್ದೇಬಿಹಾಳದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಾಡಗೌಡ-ಸುನೀಲಗೌಡ ಆಗ್ರಹ

Team Udayavani, Aug 13, 2019, 2:03 PM IST

vp-tdy-2

ಮುದ್ದೇಬಿಹಾಳ: ಎಂಎಲ್ಸಿ ಸುನೀಲಗೌಡ ಪಾಟೀಲ, ಮಾಜಿ ಸಚಿವ ಸಿ.ಎಸ್‌. ನಾಡಗೌಡ ಅವರು ಪರಿಹಾರ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಹೊದಿಕೆ ವಿತರಿಸಿದರು.

ಮುದ್ದೇಬಿಹಾಳ: ಪ್ರವಾಹ ಪೀಡಿತ ಗ್ರಾಮ ವ್ಯಾಪ್ತಿಯಲ್ಲಿ ಆಗಿರುವ ಜಮೀನುಗಳಲ್ಲಿನ ಬೆಳೆ ಹಾನಿಗೆ ಸರ್ಕಾರಿ ಎಕರೆಗೆ ತಲಾ 50,000 ರೂ. ಪರಿಹಾರ ಧನ ವಿತರಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಸುನೀಲಗೌಡ ಪಾಟೀಲ, ಮಾಜಿ ಸಚಿವ ಸಿ.ಎಸ್‌. ನಾಡಗೌಡ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸೋಮವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರವಾಹದಿಂದ ಆಗಿರುವ ಹಾನಿ ಸಮೀಕ್ಷೆಯಲ್ಲಿ ಪ್ರವಾಹ ಇಳಿದ 30 ದಿನಗಳೊಳಗಾಗಿ ಸಮರೋಪಾದಿಯಲ್ಲಿ ನಡೆಸಿ ಸಂತ್ರಸ್ತರ ಜೀವನ ಮೊದಲಿನಂತೆ ನಡೆಯಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ವೇಳೆ ಸುನೀಲಗೌಡ ಮಾತನಾಡಿ, ಕೆಲವು ಪರಿಹಾರ ಕೇಂದ್ರಗಳಲ್ಲಿ ಹಸುಗೂಸುಗಳಿಗೆ ತೊಟ್ಟಿಲು ಕೊಡದಿರುವುದರಿಂದ ಅವುಗಳನ್ನು ನೆಲದ ಮೇಲೆ ಮಲಗಿಸುತ್ತಿರುವುದು ಕಂಡು ಬಂತು. ದನಕರುಗಳಿಗೆ ಮೇವು ಇಲ್ಲದಿರುವುದನ್ನು ಗಮನಿಸಿದ್ದೇನೆ. ಕೇಂದ್ರಗಳಲ್ಲಿ ವಿದ್ಯುತ್‌ಗಾಗಿ ಜನರೇಟರ್‌ ವ್ಯವಸ್ಥೆ ಇಲ್ಲದಿರುವುದು ಗಮನಕ್ಕೆ ಬಂದಿದೆ. ಜಿಲ್ಲಾಡಳಿತ ಪ್ರವಾಹ ಪರಿಸ್ಥಿತಿಯನ್ನು ಉತ್ತಮವಾಗಿ ಎದುರಿಸಿದ್ದರೂ ಇಂಥ ಸಣ್ಣ ಪುಟ್ಟ ಕೊರತೆಗಳನ್ನೂ ನಿವಾರಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಸಲಹೆ ನೀಡಿದರು.

ಪ್ರವಾಹದಿಂದ ಟಿಸಿ, ವಿದ್ಯುತ್‌ ಕಂಬ, ರಸ್ತೆಗಳು ಹಾಳಾಗಿದ್ದು ಸೊಳ್ಳೆಗಳ ಹಾವಳಿಯಿಂದ ಸಾಂಕ್ರಾಮಿಕ ರೋಗದ ಭೀತಿ ಉಂಟಾಗಿದ್ದು ಇವೆಲ್ಲವನ್ನು ಸರಿಪಡಿಸಬೇಕು. ಪರಿಸ್ಥಿತಿ ಪೂರ್ತಿ ನಿಯಂತ್ರಣಕ್ಕೆ ಬರುವ ತನಕ ಸಂತ್ರಸ್ತರು ಪರಿಹಾರ ಕೇಂದ್ರದಲ್ಲಿಯೇ ಇರಲು ಅವಕಾಶ ಮಾಡಿಕೊಡಬೇಕು. ಮಕ್ಕಳು ಶಾಲೆಗೆ ಹೋಗಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ವಿಶೇಷ ಯೋಜನೆ ಆರಂಭಿಸಿ ಉತ್ತಮ ಮನೆ ಜೊತೆ ಮೂಲಭೂತ ಸೌಕರ್ಯ ಒದಗಿಸಬೇಕು. ನೀರಲ್ಲಿ ಮುಳುಗಿದ ರೈತರ ಪಂಪ್‌ಸೆಟ್‌ಗೂ ಪರಿಹಾರ ಕೊಡಬೇಕು. ರೈತರ ಜಾನುವಾರುಗಳಿಗೆ 60 ದಿನಗಳ ಕಾಲ ಮೇವು ಪೂರೈಸಬೇಕು. ನೀರು ಇಳಿದ ಮೇಲೆ ಜನ ಮರಳಿ ತಮ್ಮ ಗ್ರಾಮಕ್ಕೆ ಹೋಗಿ ವಾಸಿಸುವಂತಹ ವಾತಾವರಣ ನಿರ್ಮಿಸಿಕೊಡಬೇಕು ಎಂದು ಒತ್ತಾಯಿಸಿದರು.

ಸಂತ್ರಸ್ತರಿಗೆ ಪರಿಹಾರ ಕಲ್ಪಿಸಲು ನನ್ನ ಒಂದು ತಿಂಗಳ ವೇತನವನ್ನು ಸಿಎಂ ಪರಿಹಾರ ನಿಧಿಗೆ ನೀಡಿದ್ದೇನೆ. ವೈಯಕ್ತಿಕವಾಗಿ ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಸಂತ್ರಸ್ತರಿಗೆ ಎರಡು ಸಾವಿರ ಹೊದಿಕೆ ವಿತರಿಸಲು ವ್ಯವಸ್ಥೆ ಮಾಡಿದ್ದೇನೆ. ವಿಜಯಪುರದ ಬಿಎಲ್ಡಿಇ ಸಂಸ್ಥೆಯ ನಿರ್ದೇಶಕನೂ ಆಗಿರುವುದರಿಂದ ಅಲ್ಲಿನ ವೈದ್ಯರ ತಂಡ ರಚಿಸಿ ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳ ಸಂತ್ರಸ್ತರಿಗೆ ಉಚಿತ ಆರೋಗ್ಯ ಸೇವೆಗೆ ಕಳಿಸಿದ್ದೇನೆ ಎಂದು ತಿಳಿಸಿದರು.

ಮಾಜಿ ಸಚಿವ ಸಿ.ಎಸ್‌. ನಾಡಗೌಡ ಮಾತನಾಡಿ, ಜಿಲ್ಲಾಡಳಿತದ ಪ್ರಾಥಮಿಕ ವರದಿಗಳ ಪ್ರಕಾರ ತಾಲೂಕಿನಲ್ಲಿ ಪ್ರವಾಹದಿಂದಾಗಿ 3 ಸಾವಿರ ಹೆಕ್ಟೇರ್‌ ಬೆಳೆ ಹಾನಿ ಸೇರಿ ನೂರಾರು ಕೋಟಿ ಹಾನಿ ಸಂಭವಿಸಿದೆ. ರೈತರ ಸಜ್ಜೆ, ಜೋಳ, ತೊಗರಿ, ಕಬ್ಬು, ಸೂರ್ಯಕಾಂತಿ, ಮುಂತಾದವುಗಳು ಹಾನಿ ಆಗಿದ್ದು ಈ ಬಗ್ಗೆ ಸಮಗ್ರ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಬೇಕು. ಪ್ರವಾಹ ಪರಿಸ್ಥಿತಿಯನ್ನು ತುರ್ತು ಆದ್ಯತೆ ಎಂದು ಪರಿಗಣಿಸಬೇಕು ಎಂದು ಹೇಳಿದರು.

ಎಪಿಎಂಸಿ ಅಧ್ಯಕ್ಷ ಗುರಣ್ಣ ತಾರನಾಳ, ಪುರಸಭೆ ಮಾಜಿ ಅಧ್ಯಕ್ಷ ಬಸನಗೌಡ ಪಾಟೀಲ, ಎಪಿಎಂಸಿ ನಿರ್ದೇಶಕ ವೈ.ಎಚ್. ವಿಜಯಕರ, ರಾಯನಗೌಡ ತಾತರಡ್ಡಿ, ಗೋವಾ ಕನ್ನಡಿಗರ ಹೋರಾಟ ಸಮಿತಿ ಅಧ್ಯಕ್ಷ ಸಿದ್ದಣ್ಣ ಮೇಟಿ, ನಾಗರಾಜ ತಂಗಡಗಿ,ಬಸವರಾಜ ಇಬ್ರಾಹಿಂಪುರ, ಸ್ಥಳೀಯ ಕಾಂಗ್ರೆಸ್‌ ಮುಖಂಡರು ಇದ್ದರು.

ಪತ್ರಿಕಾಗೋಷ್ಠಿಗೂ ಮುನ್ನ ಎಂಎಲ್ಸಿ ಪಾಟೀಲ, ಮಾಜಿ ಸಚಿವ ನಾಡಗೌಡ ಅವರು ತಾಲೂಕಿನ ಕೃಷ್ಣಾ ನದಿ ದಂಡೆ ಪ್ರವಾಹ ಪೀಡಿತ ತಂಗಡಗಿ, ಕಮಲದಿನ್ನಿ, ಕುಂಚಗನೂರ ಮುಂತಾದ ಗ್ರಾಮಗಳಿಗೆ ಭೇಟಿ ನೀಡಿ, ಆಯಾ ಪರಿಹಾರ ಕೇಂದ್ರದಲ್ಲಿರುವ ಸಂತ್ರಸ್ತರನ್ನು ಭೇಟಿ ನೆರವು ವಿತರಿಸಿದರು. ಸಂತ್ರಸ್ತರ ಅಳಲು ಆಲಿಸಿ ಸರ್ಕಾರದ ಗಮನ ಸೆಳೆಯುವ ಭರವಸೆ ನೀಡಿದರು.

ಟಾಪ್ ನ್ಯೂಸ್

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.