ರಾಜ್ಯದ ಹಿತದೃಷ್ಟಿಯಿಂದ ಕೈಗೆ ಮತ ನೀಡಿ

Team Udayavani, Apr 30, 2018, 4:22 PM IST

vij-1.jpg

ಸಿಂದಗಿ: ರಾಜ್ಯದ ಹಿತದೃಷ್ಟಿಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಮತನೀಡುವ ಮೂಲಕ ಬಿಜೆಪಿ-ಜೆಡಿಎಸ್‌ ಪಕ್ಷಗಳನ್ನು ಸೋಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರವಿವಾರ ಅಂಜುಮನ್‌ ಕಾಲೇಜಿನ ಮೈದಾನದಲ್ಲಿ ಸಿಂದಗಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಹಮ್ಮಿಕೊಂಡಿದ್ದ ಸಿಂದಗಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಮಲ್ಲಣ್ಣ ನಿಂಗಣ್ಣ ಸಾಲಿ ಪರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ದೇಶದ ಎಲ್ಲರ ಕಣ್ಣು ರಾಜ್ಯ ಚುನಾವಣೆ ಫಲಿತಾಂಶದ ಮೇಲಿದ್ದು 2019ರ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ನೂರಕ್ಕೆ ನೂರು ಗೆಲ್ಲುವುದು ಖಚಿತ. ಕಾಂಗ್ರೆಸ್‌ ರಾಜ್ಯದಲ್ಲಿ ಸರಕಾರ ರಚಿಸಿ ದೇಶದ ರಾಜಕಾರಣಕ್ಕೆ ಹೊಸ ತಿರುವು ನೀಡುತ್ತದೆ ಎಂದರು. 

ಬಿಜೆಪಿ-ಜೆಡಿಎಸ್‌ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಈಗಾಗಲೇ ಒಂದು ಬಾರಿ ಇಬ್ಬರೂ ಸೇರಿ ಅಧಿಕಾರ ಅನುಭವಿಸಿದ್ದಾರೆ. ಅಧಿಕಾರಕ್ಕಾಗಿ ಕಚ್ಚಾಡಿದ್ದಾರೆ ಹೊರತು ರಾಜ್ಯದ ಅಭಿವೃದ್ಧಿ ಮಾಡಿಲ್ಲ ಎಂದ ಅವರು, ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯಾಗಿ ಮಾಡುವುದು ದೇವೆಗೌಡರ ಕೊನೆ ಆಸೆ ಎಂದು ಹೇಳುತ್ತ ನಿಮ್ಮನ್ನು ಮೋಸ ಮಾಡುತ್ತಾರೆ.

ದಯಮಾಡಿ ಯಾವ ಕಾಲಕ್ಕೂ ಜೆಡಿಎಸ್‌ ಪಕ್ಷಕ್ಕೆ ಮತ ಹಾಕಬೇಡಿ ಎಂದು ಮನವಿ ಮಾಡಿಕೊಂಡರು. ನಾನು ಮುಖ್ಯಮಂತ್ರಿಯಾದ 24 ಗಂಟೆಯಲ್ಲಿ ರೈತರ ಸಾಲ ಸಂಪೂರ್ಣ ಮನ್ನಾ ಮಾಡುವುದಾಗಿ ಸುಳ್ಳು ಹೇಳುವ ಕುಮಾರಸ್ವಾಮಿ ಅವರಿಗೆ ಒಂದು ಪ್ರಶ್ನೆ ಕೇಳುತ್ತೇನೆ? ನೀವು 20 ತಿಂಗಳು ಮುಖ್ಯಮಂತ್ರಿಯಾಗಿದ್ದರಿ, ನಿಮ್ಮ ತಂದೆ ಮುಖ್ಯಮಂತ್ರಿ ಆಗಿರುವುದಲ್ಲದೇ ದೇಶದ ಪ್ರಧಾನಿಯಾಗಿದ್ದರು. ಆಗ ರೈತರ ಸಾಲ ಮನ್ನಾ ಮಾಡಲಿಲ್ಲ ಏಕೆ? ಅವರಲ್ಲಿ ಉತ್ತರ ಇಲ್ಲ ಎಂದರು.

ಕೋಮುವಾದಿ ಬಿಜೆಪಿ ಸಂವಿಧಾನ ತಿದ್ದಲು ಹೊರಟಿದೆ. ಬಿಜೆಪಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಲ್ಲ. ಹಿಂದುತ್ವದ ಹೆಸರಿನಲ್ಲಿ ಕೇಂದ್ರದಲ್ಲಿ ಅಧಿಕಾರ ಪಡೆದು ಅಧಿಕಾರ ಅನುಭವಿಸುತ್ತಿದೆ. ಸಬ್‌ ಕಾ ಸಾತ- ಸಬ್‌ ಕಾ ವಿಕಾಸ ಎನ್ನುತ್ತಾರೆ. ಅದರೇ ವಿಕಾಸವಾಗದೇ ವಿನಾಶವಾಗುತ್ತಿದೆ ಎಂದರು.

ಕಾಂಗ್ರೆಸ್‌ ಪಕ್ಷ ಟಿಕೆಟ್‌ ಹಂಚಿಕೆ ಮಾಡುವಲ್ಲಿ ಸರ್ವ ಸಮಾಜಕ್ಕೆ ಪ್ರಾಮುಖ್ಯತೆ ನೀಡಿದೆ. ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಹಾಲುಮತ ಸಮಾಜದ ಮಲ್ಲಣ್ಣ ಸಾಲಿ ಅವರಿಗೆ ನೀಡಲಾಗಿದೆ. ಒಂದು ಅವಕಾಶ ಸಿಕ್ಕಿದೆ. ಇದು ಮತ್ತೆ ಸಿಗುವುದಿಲ್ಲ. ಸಿಕ್ಕ ಅವಕಾಶದಿಂದ ವಂಚಿತರಾಗಬೇಡಿ. ಎಲ್ಲರೂ ಒಂದಾಗಿ ಮಲ್ಲಣ್ಣ ಸಾಲಿ ಅವರನ್ನು ಗೆಲ್ಲಿಸಿ. ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಶರಣಪ್ಪ ಸುಣಗಾರ ಅವರ ಹಿತಾಸಕ್ತಿ ಕಾಪಾಡುತ್ತೇವೆ. ಆದರೇ ಅವರು ಮಲ್ಲಣ್ಣ ಸಾಲಿ ಅವರನ್ನು ಗೆಲ್ಲಿಸಿ ತರಬೇಕು ಎಂದು ಮಾತಿನಲ್ಲಿ ಶರಣಪ್ಪ ಸುಣಗಾರ ಅವರಿಗೆ ಕರಾರು ಮಾಡಿದರು.

ರಾಜ್ಯದ ಅಲ್ಪಸಂಖ್ಯಾತರಿಗೆ, ಹಿಂದುಳಿದ ವರ್ಗದವರಿಗೆ, ದಲಿತರಿಗೆ, ಮಹಿಳೆಯರಿಗೆ, ರೈತರಿಗೆ ಸಾಕಷ್ಟು ಅಭಿವೃದ್ಧಿ ಪರ ಯೋಜನೆಗಳನ್ನು ಮಾಡಿದ್ದೇವೆ. ಆದರೆ ಇಂಥ ಯೋಜನೆಗಳನ್ನು ಅನುಷ್ಠಾನ ಮಾಡುವ ಕೆಲಸ ಜೆಡಿಎಸ್‌-ಬಿಜೆಪಿ ಸರಕಾರವಿದ್ದಾಗ ಏಕೆ ಮಾಡಲಿಲ್ಲ. ರಾಜ್ಯದ ಜನೆತಯ ಅಭಿವೃದ್ಧಿ ಕಾಂಗ್ರೆಸ್‌ ಪಕ್ಷದಿಂದ ಮಾತ್ರ ಸಾಧ್ಯ. ಸಿಂದಗಿ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಮುಗ್ದ ವ್ಯಕ್ತಿ ಮಲ್ಲಣ್ಣ ಸಾಲಿ ಅವರಿಗೆ ಮತ ನೀಡುವ ಮೂಲಕ ಅವರನ್ನು ಗೆಲ್ಲಿಸಿ ತರಬೇಕು. ಕ್ಷೇತ್ರದಲ್ಲಿನ ಎಲ್ಲ ಸಮಾಜದ ನಾಯಕರು ಅವರ ಗೆಲುವಿಗೆ ಶ್ರಮಿಸಬೇಕು ಎಂದರು.

ಸಿಂದಗಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಮಲ್ಲಣ್ಣ ನಿಂಗಣ್ಣ ಸಾಲಿ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಸಾಕಷ್ಟು ಅಭಿವೃದ್ಧಿ ಮಾಡಿದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಸರಕಾರ ರಚಿಸಲು ಸಿದ್ದರಾಮಯ್ಯ ಅವರ ಕೈ ಬಲ ಪಡಿಸಲು ನನ್ನನ್ನು ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು.

ಟಾಪ್ ನ್ಯೂಸ್

musk

Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್‌

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…

Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Leopard spotted in Vijayapura city: CCTV footage captured

Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

musk

Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್‌

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.