ಮೋದಿ ನೇತೃತ್ವದಲ್ಲಿ ಉತ್ತಮ ಆಡಳಿತ
Team Udayavani, Apr 4, 2021, 7:41 PM IST
ತಾಳಿಕೋಟೆ: ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ದೇಶದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಎಲ್ಲ ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತ, ಒಳ್ಳೆಯ ಆಡಳಿತ ನೀಡುತ್ತಾ ಸಾಗಿದೆ ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ, ಶಾಸಕ ಎ.ಎಸ್. ಪಾಟೀಲ(ನಡಹಳ್ಳಿ) ಹೇಳಿದರು. ಪಟ್ಟಣದ ವಿಠ್ಠಲ ಮಂದಿರ ಸಭಾಭವನದಲ್ಲಿ ಶನಿವಾರ ಬಿಜೆಪಿಯಿಂದ ಆಯೋಜಿಸಲಾದ ಮುದ್ದೇಬಿಹಾಳ ಮಂಡಲದ ಕಾರ್ಯಕಾರಣಿ ಸಭೆಯಲ್ಲಿ ಅವರು ಮಾತನಾಡಿದರು.
ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಮಾತನಾಡಿ, ರಾಜಕೀಯದಲ್ಲಿ ಸ್ಥಾನಮಾನ ಸಿಕ್ಕಿದೆ ಎಂಬ ಗರ್ವ ಬೇಡ. ಆ ಗೆಲುವಿನ ಹಿಂದೆ ಕಾರ್ಯಕರ್ತರ ಶ್ರಮ ಅಡಗಿರುತ್ತದೆ. ಆ ಶ್ರೇಯಸ್ಸು ಕಾರ್ಯಕರ್ತರಿಗೆ ಸಲ್ಲುತ್ತದೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ(ಕೂಚಬಾಳ) ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಮಂಡಲ ಅಧ್ಯಕ್ಷ ಪರಶುರಾಮ ಪವಾರ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಚಂದ್ರಶೇಖರ ಕವಟಗಿ, ಸಂಗನಗೌಡ ಚಿಕ್ಕೊಂಡ, ತಾಪಂ ಅಧ್ಯಕ್ಷ ರಾಜುಗೌಡ ಕೊಳೂರ, ಪ್ರಭು ಕಡಿ, ನಗರ ಘಟಕ ಅಧ್ಯಕ್ಷ ರಾಘವೇಂದ್ರ ಚವ್ಹಾಣ, ಪುರಸಭಾ ಅಧ್ಯಕ್ಷ ಸಂಗಮೇಶ ಇಂಗಳಗಿ, ಕಾಶಿಬಾಯಿ ರಾಂಪೂರ, ಎಸ್.ಎನ್. ಡಿಸಲೆ, ಎಂ.ಡಿ. ಕುಂಭಾರ, ಪ್ರಭುಗೌಡ ಬಿರಾದಾರ ಮೊದಲಾದವರು ಇದ್ದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ ಶೆಟ್ಟಿ ನಿರೂಪಿಸಿದರು. ಕಾಶಿನಾಥ ಅರಳಿಚಂಡಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.