ರೈತರ ಹಿತ ಕಾಯಲು ಸರ್ಕಾರ ಬದ್ಧ; ಬಿ.ಸಿ ಪಾಟೀಲ
ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದ್ದಾರೆ.
Team Udayavani, Feb 23, 2021, 1:09 PM IST
ಇಂಡಿ: ರಾಜ್ಯದ ರೈತರ ಹಿತ ಕಾಪಾಡಲು ಬಿಜೆಪಿ ಸರಕಾರ ಬದ್ಧವಾಗಿದ್ದು ನಾನು ಸಚಿವನಾಗಿ ರೈತರೊಂದಿಗೆ ಸಂಪರ್ಕದಲ್ಲಿದ್ದು ಅವರ ಸಮಸ್ಯೆ ಆಲಿಸುವ ಕಾರ್ಯ ಮಾಡುತ್ತಿದ್ದೇನೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ ಹೇಳಿದರು. ಪಟ್ಟಣದ ರೈಲು ನಿಲ್ದಾಣ ರಸ್ತೆಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ ಆಡಳಿತ ಭವನ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಾಕೃತಿಕ ಮತ್ತು ನೈಸರ್ಗಿಕ ಮಣ್ಣು ವೈವಿಧ್ಯಮಯವಾಗಿದೆ. ರೈತರು ಹಿಂದಿನ ಕೃಷಿ ಪದ್ದತಿ ಅಳವಡಿಸಿಕೊಂಡಿರುವದರಿಂದಲೆ ಆರ್ಥಿಕವಾಗಿ ಸಬಲರಾಗಿಲ್ಲ ಎಂದರು.
ಕೃಷಿಯಲ್ಲಿ ಇಸ್ರೆಲ್ ದೇಶ ಸಾಕಷ್ಟು ಮುಂದುವರಿದಿದೆ. ಅಲ್ಲಿನ ರೈತರು ವಿನೂತನ ವೈಜ್ಞಾನಿಕ ತಂತ್ರಜ್ಞಾನ, ಹೊಸ ಅವಿಷ್ಕಾರಗಳನ್ನು ಕೃಷಿಯಲ್ಲಿ ಬಳಕೆ ಮಾಡಿದ್ದರಿಂದ ಸನೃದ್ಧರಾಗಿದ್ದಾರೆ. ಕೃಷಿಯಲ್ಲಿ ಮಿಶ್ರ ಬೇಸಾಯ ಪದ್ದತಿ ಅಳವಡಿಸಿಕೊಂಡಾಗ ಮಾತ್ರ ರೈತರು ಅಭಿವೃದ್ದಿಯಾಗಲು ಸಾಧ್ಯವಾಗುತ್ತದೆ ಎಂದರು.
ಕೃಷಿ ಜೊತೆ-ಜೊತೆಗೆ ಪಶುಪಾಲನೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನು ಸಾಕಾಣಿಕೆ ಇತ್ಯಾದಿ ಮಿಶ್ರಬೇಸಾಯ ಮತ್ತು ಆವರ್ತ ಬೆಳೆ ಬೆಳೆಯಬೇಕು. ಇಂದು ಭೂಮಿಯಲ್ಲಿನ ಸತ್ವ ಕಡಿಮೆಯಾಗಿದೆ. ಬೆಳೆಗಳನ್ನು ಬೆಳೆಯುವಾಗ ರಾಸಾಯನಿಕ ಕ್ರಿಮಿ ಕೀಟನಾಶಕ ಔಷಧ ಸಿಂಪಡಣೆಯಿಂದ ಭೂಮಿ ಮೇಲಿನ ಮಣ್ಣು ಮಲೀನವಾಗಿ ಇಳುವರಿ ಕಡಿಮೆ ಬರುತ್ತಿದೆ. ರೈತರು ಸಾವಯವ ಕೃಷಿ ಪದ್ದತಿಯನ್ನು ಅಳವಡಿಸಿಕೊಳ್ಳಬೇಕು. ಪ್ರಧಾನ ಮಂತ್ರಿ ಕೃಷಿ ಸಮ್ಮಾನ ಯೋಜನೆ ಅನುಷ್ಠಾನ ಯಶಸ್ವಿಯಾಗಿದೆ. ಶೆ. 97.07 ಸಾಧನೆ ಮಾಡಿ¨ªಕ್ಕಾಗಿ ದೇಶದಲ್ಲಿಯೇ ಕರ್ನಾಟಕ ಮೊದಲನೇ ಸ್ಥಾನದಲ್ಲಿರುವದರಿಂದ ಫೆ. 24ರಂದು ಕೇಂದ್ರ ಸರಕಾರದಿಂದ ರಾಜ್ಯದ ಪರವಾಗಿ ಪ್ರಶಸ್ತಿ ಪಡೆಯುವದಾಗಿ ತಿಳಿಸಿದರು.
ಸಿಎಂ ಯಡಿಯೂಪ್ಪನವರು ಮಾಚ್ 8ರಂದು 2021-22 ನೇ ಸಾಲಿನ ಆಯುವ್ಯಯ ಮಂಡಿಸಲಿದ್ದಾರೆ. ಕೋವಿಡ್-19 ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯದ ಅನ್ನದಾತರಿಗೆ ಯಾವುದೇ ರೀತಿಯಿಂದ ಧಕ್ಕೆಯಾಗದಂತೆ ಕೃಷಿ ಕ್ಷೇತ್ರಕ್ಕೆ ನೀಡುವ ಅನುದಾನ ಡಿತಗೊಳಿಸಬಾರದು ಎಂದು ಮುಖ್ಯ ಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದರು.
ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, ವಿಜಯಪುರ ಬಾಗಲಕೋಟೆ ಜನರು ಅಪ್ಪರ್ ಕೃಷ್ಣಾ ಯೋಜನೆ ಸಲುವಾಗಿ ತಮ್ಮ ಮನೆ, ಮಠ ಕಳೆದುಕೊಂಡಿದ್ದಾರೆ. ಆದರೆ ಈ ಭಾಗದ ಜನರು ಸಮಪರ್ಕ ನೀರಿಲ್ಲದೆ ಸಂಕಷ್ಟದಲ್ಲಿದ್ದಾರೆ. ಮುಖ್ಯಮಂತ್ರಿಗಳು ಬರುವ ಬಜೆಟ್‌ನಲ್ಲಿ ಅಪ್ಪರ ಕೃಷ್ಣಾ ಯೋಜನೆಗೆ ಆದ್ಯತೆ ನೀಡಬೇಕು. ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದ್ದಾರೆ. ಇದೇ ರೀತಿ ಕೃಷ್ಣಾ ಯೋಜನೆಗೂ ರಾಷ್ಟ್ರೀಯ ಯೋಜನೆ ಮಾಡಬೇಕು.
ಕರ್ನಾಟಕ ರಾಜ್ಯ ಸರಕಾರ ಹೊಸ ಜಿಲ್ಲೆಗಳು ಮಾಡುವ ಸಂದರ್ಭ ಬಂದರೆ ಇಂಡಿಯನ್ನೆ ಜಿಲ್ಲೆ ಮಾಡಬೇಕು ಎಂದರು. ಆಲಮೇಲದಲ್ಲಿರುವ ತೋಟಗಾರಿಕೆ ವಿವಿ ಬೇರೆ ಕಡೆ ಸ್ಥಳಾಂತರಿಸುವ ಹುನ್ನಾರ ನಡೆದಿದೆ. ದಿ| ಎಂ.ಸಿ. ಮನಗೂಳಿಯವರ ಹೋರಾಟ ಹಾಗೂ ಶ್ರಮದಿಂದ ಅಲ್ಲಿ ಸ್ಥಾಪನೆಯಾಗಿದೆ.
ಇಂತಹ ಅಚಾತುರ್ಯಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಅವರಿಗೆ ಮನವಿ ಮಾಡಿದರು. ಕರ್ನಾಟಕ ಸರಕಾರದ ನವದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ, ಜಿಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ವಿಜುಗೌಡ ಪಾಟೀಲ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ ಮಾತನಾಡಿದರು. ತಾಪಂ ಅಧ್ಯಕ್ಷ ಅಣ್ಣಪ್ಪ ಬಿದರಕೋಟಿ, ಪುರಸಭೆ ಅಧ್ಯಕ್ಷೆ ಶೈಲಜಾ ಪೂಜಾರಿ, ಸುರೇಶ ಗೊಣಸಗಿ, ಡಾ| ಮಹಾದೇವ ಚಿಟ್ಟಿ, ಡಾ| ವಿ.ವೆಂಕಟಸುಬ್ರಮಣಿಯನ್, ಡಾ| ಎಸ್.ಬಿ. ಕಲಘಟಗಿ, ಕೆವಿಕೆ ಮುಖ್ಯಸ್ಥ ಡಾ| ನೆಗಳೂರ ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.