Vijayapura; ಬರ ಪರಿಸ್ಥಿತಿಯನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ: ಸಿದ್ದರಾಮಯ್ಯ
Team Udayavani, Nov 20, 2023, 2:07 PM IST
ವಿಜಯಪುರ: ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಿಸುವಲ್ಲಿ ನಮ್ಮ ಸರ್ಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ದುಡಿಯುವ ಕೈಗಳಿಗೆ ಕೆಲಸ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸೋಮವಾರ ನಗರದಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ನಗರದ ಆಗಮಿಸಿದಾಗ ಸೈನಿಕ ಶಾಲೆ ಹೆಲಿಪ್ಯಾಡಿನಲ್ಲಿ ಮಾತನಾಡಿದ ಅವರು, ಬರ ಪರಿಸ್ಥಿತಿ ಸಂದರ್ಭದಲ್ಲಿ 150 ದಿನ ಕೆಲಸ ನೀಡುವುದು ಕಡ್ಡಾಯ. ಕೇಂದ್ರ ಸರ್ಕಾರ ಇದಕ್ಕೆ ಅನುಮತಿ ನೀಡಬೇಕು. ಇದಕ್ಕಾಗಿ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಆದರೆ ಕೇಂದ್ರ ಸರ್ಕಾರ ಈವರೆಗೂ ಪ್ರತಿಕ್ರಿಯಿಸುವ ಸೌಜನ್ಯ ತೋರಿಲ್ಲ ಎಂದರು.
ಕೇಂದ್ರ ಬರ ಅಧ್ಯಯನ ತಂಡ ರಾಜ್ಯದ ಬರ ಪರಿಸ್ಥಿತಿ ಅಧ್ಯಯನ ನಡೆಸಿ ಹೋಗಿ ತಿಂಗಳಾದರೂ ರಾಜ್ಯದ ಪರ ನಿರ್ವಹಣೆಗೆ ಒಂದು ಪೈಸೆ ಅನುದಾನ ನೀಡಿಲ್ಲ. ಎನ್.ಡಿ.ಆರ್.ಫ್. ಮಾರ್ಗಸೂಚಿಯಲ್ಲಿ ಮಾರ್ಪಾಡಿಗೆ ಬರೆದಿರುವ ಪತ್ರಕ್ಕೂ ಕೆಂದ್ರ ಉತ್ತರಿಸಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.