Government scheme ಅನುದಾನ ದುರ್ಬಳಕೆ: ಶಿಕ್ಷಣ ಇಲಾಖೆ ಮೂವರು ಅಧಿಕಾರಿಗಳ ಅಮಾನತು
Team Udayavani, Jan 30, 2024, 9:22 PM IST
ವಿಜಯಪುರ: ದಶಕದ ಹಿಂದೆ ಶಿಕ್ಷಣ ಇಲಾಖೆಯಲ್ಲಿನ ಐಇಡಿಎಸ್‌ಎಸ್ ಯೋಜನೆ ಅನುಷ್ಠಾನದ ಸಂದರ್ಭದಲ್ಲಿ ಅಸ್ತಿತ್ವದಲ್ಲೇ ಇಲ್ಲದ ಸರ್ಕಾರೇತರ ಸಂಸ್ಥೆ (ಎನ್‌ಜಿಒ)ಗಳಿಗೆ ನಿಯಮ ಬಾಹಿರವಾಗಿ ಅನುದಾನ ಬಿಡುಗಡೆ ಮಾಡಿರುವ ಆರೋಪದಲ್ಲಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೇರಿ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಇಲಾಖೆ ಹಿರಿಯ ಅಧಿಕಾರಿಗಳ ಶಿಫಾರಸು ಆಧರಿಸಿ ಅಮಾನತು ಆದೇಶ ಹೊರಡಿಸಿದ್ದಾರೆ.
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ವಿಜಯಪುರ ಜಿಲ್ಲೆಯ ಉಪ ನಿರ್ದೇಶಕರಾಗಿದ್ದ ಬಸವನಬಾಗೇವಾಡಿ ಹಿಂದಿನ ಬಿಇಒ ಆಗಿದ್ದ ಎನ್.ಎಚ್.ನಾಗೂರ, ಇಂಡಿ ಬಿಇಒ ಆಗಿದ್ದ ಹಾಲಿ ವಿಜಯಪುರ ಡೈಟ್ ಹಿರಿಯ ಉಪನ್ಯಾಸಕ ಎ.ಎಚ್.ಹತ್ತಳ್ಳಿ, ಸಿಂದಗಿ ಬಿಇಒ ಆಗಿದ್ದ ವಿಜಯಪುರ ಡೈಟ್ ಹಾಲಿ ಉಪನ್ಯಾಸಕ ಎಸ್.ಎ.ಮುಜಾವರ ಅಮಾನತಾಗಿರುವ ಅಧಿಕಾರಿಗಳು.
2009-10, 2011-12ನೇ ಸಾಲಿನಲ್ಲಿ ಸರ್ಕಾರದ ಐಇಡಿಎಸ್‌ಎಸ್ ಯೋಜನೆ ಅನುಷ್ಠಾನದ ಸಂದರ್ಭದಲ್ಲಿ ಈ ಅಧಿಕಾರಿಗಳು ಅಸ್ತಿತ್ವದಲ್ಲೇ ಇಲ್ಲದ 18 ಸರ್ಕಾರೇತರ ಸಂಸ್ಥೆಗಳಿಗೆ ಶಿಫಾರಸು ಮಾಡಿರುವ ಹಾಗೂ ಅನುದಾನ ಬಿಡುಗಡೆ ಮಾಡಿ ಸರ್ಕಾರದ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಅಮಾನತು ಮಾಡಲಾಗಿದೆ. ಅಧಿಕಾರಿಗಳು ಸರ್ಕಾರದ ಅನುದಾನ ದುರ್ಬಳಕೆ ಮಾಡಿಕೊಂಡ ಕುರಿತು 2019ರಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಆಕ್ಷೇಪಿಸಿದೆ.
ಸದರಿ ಪ್ರಕರಣದಲ್ಲಿ ಬೆಳಗಾವಿ ಜಿಲ್ಲೆಯ ಅಧಿಕಾರಿಗಳು ಸೇರಿದ್ದು ಸೇವಾ ನಿವೃತ್ತಿ ಹೊಂದಿರುವ ಮೂವರು ಅಧಿಕಾರಿಗಳ ವಿರುದ್ಧ ಸಿವಿಲ್ ಮೊಕದ್ದಮೆ ಹೂಡಿ ಸರ್ಕಾರಕ್ಕೆ ವಂಚಿಸಿರುವ ಹಣದ ಮರು ಪಾವತಿಗೆ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
Waqf Issue: ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವಾಗಬೇಕು: ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.