ಗುಮ್ಮಟ ನಗರಿಗೆ ರಾಜ್ಯಪಾಲ ಗೆಹ್ಲೋಟ್ ಆಗಮನ
Team Udayavani, Nov 8, 2021, 5:25 PM IST
ವಿಜಯಪುರ : ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಘಟಿಕೋತ್ಸವ ದಲ್ಲಿ ಪಾಲ್ಗೊಳ್ಳಲು ವಿಜಯಪುರ ನಗರಕ್ಕೆ ಆಗಮಿಸಿದ್ದಾರೆ.
ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕರ್ನಾಟಕ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಡಾ.ತುಳಸಿಮಾಲಾ ಇವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ, ಹೂಗುಚ್ಛ ನೀಡಿ ಸ್ವಾಗತಿಸಿದರು.
ಸೋಮವಾರ ಸಂಜೆ ವಿಜಯಪುರ ನಗರಕ್ಕೆ ಆಗಮಿಸಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ನ. 9 ರಂದು ನಡೆಯಲಿರುವ ಮಹಿಳಾ ವಿವಿ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ವಿಜಯಪುರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್, ಸೋಮವಾರ ಸಂಜೆ ನಗರದಲ್ಲಿರುವ ಗೋಲಗುಮ್ಮಟ, ಬಾರಾಕಮಾನ್ ವಿಶ್ವವಿಖ್ಯಾತ ಐತಿಹಾಸಿಕ ಸ್ಮಾರಕ ವೀಕ್ಷಣೆ ಮಾಡಲಿದ್ದಾರೆ.
ರಾಜ್ಯಪಾಲ ಗೆಹ್ಲೋಟ್ ನಗರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅತಿಥಿ ಗೃಹದಿಂದ ಗೋಲಗುಮ್ಮಟ ಸ್ಮಾರಕ ವೀಕ್ಷಣೆ ಹಿನ್ನೆಲೆಯಲ್ಲಿ ಗೋಲಗುಮ್ಮಟದ ವರೆಗೂ ಝಿರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿದೆ.
ರಾಜ್ಯಪಾಲರು ಸಂಚರಿಸುವ ರಸ್ತೆಯಲ್ಲಿ ಝಿರೋ ಟ್ರಾಫಿಕ್ ಜೊತೆಗೆ ಮಾರ್ಗದುದ್ದಕ್ಕೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ರಾಜ್ಯಪಾಲರು ಪೊಲೀಸ್ ಭದ್ರತೆಯಲ್ಲಿ ಗೋಲಗುಮ್ಮಟ ವೀಕ್ಷಣೆಗೆ ಮಾಡಲಿದ್ದಾರೆ. ರಾಜ್ಯಪಾಲರ ಭೇಟಿ ಹಿನ್ನೆಲೆಯಲ್ಲಿ ಕರ್ನಾಟಕ ರಾಜಭವನದ ಸಿಬ್ಬಂದಿ ಹಾಗೂ ಇತರೆ ಅಧಿಕಾರಿಗಳು, ಮಹಿಳಾ ವಿಶ್ವವಿದ್ಯಾಲಯದ ಅಧಿಕಾರಿಗಳು ಸ್ಥಳದಲ್ಲಿದ್ದು, ಪರಿಸ್ಥಿತಿ ಮೇಲೆ ನಿಗಾ ಇರಿಸಿದ್ದಾರೆ.
ರಾಜ್ಯಪಾಲರ ವೀಕ್ಷಣೆ ಹಿನ್ನೆಲೆಯಲ್ಲಿ ಗೋಲಗುಮ್ಮಟ ಪ್ರವೇಶ ದ್ವಾರದ ವರೆಗೂ ರಾಜ್ಯಪಾಲರ ವಾಹನ ಸಾಗಿದೆ.
ರಾಜ್ಯಪಾಲರು ನಗರದ ಐತಿಹಾಸಿಕ ಸ್ಮಾರಕಗಳ ವೀಕ್ಷಣೆ ಸಂದರ್ಭದಲ್ಲಿ ಮಾಧ್ಯಮದವರು ಸೇರಿದಂತೆ ಸಾರ್ವಜನಿಕರಿಗೆ ಗೋಲಗುಮ್ಮಟ ಆವರಣ ಪ್ರವೇಶಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.