ಕ್ಷೇತ್ರಕ್ಕೆ ಕೇಳಿದಷ್ಟು ಅನುದಾನ ನೀಡಿದ್ದಾರೆ ಸಿಎಂ
Team Udayavani, Nov 11, 2017, 4:35 PM IST
ಇಂಡಿ: ಅಭಿವೃದ್ಧಿಯಿಂದ ವಂಚಿತವಾದ ಇಂಡಿ ಮತಕ್ಷೇತ್ರದ ಅಭಿವೃದ್ಧಿಗೆ ನಾನು ಕೇಳಿದಷ್ಟು ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ. ಅದರಿಂದಲೇ ಇಷ್ಟು ಪ್ರಮಾಣದಲ್ಲಿ ಮತಕ್ಷೇತ್ರ ಅಭಿವೃದ್ಧಿಯಾಗಲು ಸಾಧ್ಯವಾಯಿತು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಪೊಲೀಸ್ ಪರೇಡ್ ಮೈದಾನದಲ್ಲಿ ಇಂಡಿ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ಇಲಾಖೆಗಳ ಪೂರ್ಣಗೊಂಡ ಕಾಮಗಾರಿಗಳ ಲೋಕಾರ್ಪಣೆ, ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ ಅವರು ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಅದರಿಂದ ಇಂದು ಈ ಭಾಗದ 31 ಹಳ್ಳಿಗಳಿಗೆ ಕುಡಿಯುವ ನೀರಿನ ಅನುಕೂಲವಾಗಲಿದೆ. ಈಗ ಭುಂಯ್ನಾರ ಯೋಜನೆಯ ಮೂಲಕ 40 ಹಳ್ಳಿಗಳಿಗೆ ಕುಡಿಯುವ ನೀರಿನ ಅನುಕೂಲವಾಗಲಿದೆ. ಈಗ ಆ ಯೋಜನೆಗೆ ಅನುಮತಿ ದೊರೆತಿದೆ ಎಂದರು.
ಇಂಡಿ ಭಾಗದ ನೀರಾವರಿಗೆ ಇಂಡಿ ಬ್ರ್ಯಾಂಚ್ ಕೆನಾಲ್, ಗುತ್ತಿ ಬಸವಣ್ಣ ಯೋಜನೆ, ಚಿಮ್ಮಲಗಿ ಏತ ನೀರಾವರಿ
ಯೋಜನೆ, ಮುಳವಾಡ ಏತ ನೀರಾವರಿ ಯೋಜನೆಗಳ ಮೂಲಕ ತಾಲೂಕಿನ ಬಹುತೇಕ ಹಳ್ಳಿಗಳಿಗೆ ನೀರಾವರಿ
ಮಾಡಲಾಗುತ್ತಿದೆ ಎಂದರು. ಪಟ್ಟಣದಲ್ಲಿನ ಬಡವರಿಗೆ ಅನುಕೂಲ ಕಲ್ಪಿಸಲು ಇಂದಿರಾ ಕ್ಯಾಂಟೀನ್ ಕಾರ್ಯಾರಂಭ
ಮಾಡಲಾಗುತ್ತಿದೆ. ಅದರಲ್ಲಿ ಕೇವಲ 10 ರೂ.ಗೆ ಊಟ, 5 ರೂ.ಗೆ ಬೆಳಗಿನ ಉಪಹಾರ ಸಿಗಲಿದೆ ಎಂದ ಅವರು,
2018ರ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದ್ದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.