ಫಲಾನುಭವಿಗಳಿಗೆ ಅನುದಾನ ತಲುಪಿಸಿ
Team Udayavani, Jul 18, 2017, 2:38 PM IST
ವಿಜಯಪುರ: ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆಯ ಸರ್ಕಾರದ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ರಾಜ್ಯ
ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು 2017-18ನೇ ಸಾಲಿನ ಜೂನ್-2017ರ ತಿಂಗಳ ಅಂತ್ಯದವರೆಗೆ ಸಾಧಿ ಸಿದ ಪ್ರಗತಿ ವರದಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಖಜಾನೆ-2 ಆರಂಭವಾದಾಗಿನಿಂದ ಸರ್ಕಾರದಅನುದಾನ ನೇರವಾಗಿ ತಾಲೂಕು ಪಂಚಾಯತ್‌ಗಳಿಗೆ ಬರುತ್ತದೆ. ಹೀಗಾಗಿ ತಾಪಂ ಇಒಗಳು ಅನುದಾನದ ಸರಿಯಾದ ಬಳಕೆಗೆ ಕ್ರಮ ಕೈಗೊಳ್ಳಬೇಕು. ಜಿಲ್ಲಾಮಟ್ಟದ ಅಧಿಕಾರಿಗಳು ಇವರನ್ನು ಸಂಪರ್ಕಿಸಿ ಕಾಲಮಿತಿಯಲ್ಲಿ
ಅರ್ಹರಿಗೆ ಯೋಜನೆಯ ಲಾಭ ತಲುಪಿಸಿ ಎಂದು ಹೇಳಿದರು.
ಬೇಜವಾಬ್ದಾರಿಯಿಂದ ತಪ್ಪು ಮಾಹಿತಿ ಸಂಗ್ರಹಿಸುವುದು ಅಥವಾ ಸರಿಯಾಗಿ ಕೆಲಸ ನಿರ್ವಹಿಸದಿದ್ದರೆ ಜಿಲ್ಲಾಮಟ್ಟದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿ, ಪ್ರತಿ ತಿಂಗಳು ಸಿಇಒ ಎಸ್‌ಸಿಪಿ-ಟಿಎಸ್‌ಪಿ ಕಾರ್ಯಕ್ರಮ ಪರಿಶೀಲಿಸುತ್ತಾರೆ. ಅಧಿಕಾರಿಗಳು ನಿಗದಪಡಿಸಿದ ಗುರಿ ತಲುಪಲು ಪ್ರಯತ್ನಿಸಿ ವೈಯಕ್ತಿಕ ಆಸಕ್ತಿಯಿಂದ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು. ಹಣಕಾಸು ವ್ಯವಹಾರ ಆಗಿರುವ ಕಾರಣ ಪ್ರತಿ ಇಲಾಖೆ ಹಣಕಾಸು ಸಂಬಂ ಧಿತ ವ್ಯವಹಾರಗಳ ಕುರಿತು ಅಕೌಂಟ್ ರಜಿಸ್ಟರ್ ಅನ್ನು ಕ್ರಮಾನುಸಾರ ನಿರ್ವಹಿಸಬೇಕು. ಯೋಜನೆ ಕುರಿತು ಮಾಹಿತಿ ಸಲ್ಲಿಸಬೇಕು ಎಂದರು.
ವಾರ್ಷಿಕ ಪೂರ್ಣ ಗುರಿ ಸಾಧನೆ ಮಾಡಿದ ಇಲಾಖೆಗಳು, ಭವಿಷ್ಯದಲ್ಲೂ ಶ್ರಮವಹಿಸಿ ಕೆಲಸ ಮಾಡಿ ಕಡ್ಡಾಯವಾಗಿ ನಿಗದಿತ ಗುರಿ ಸಾಧನೆ ಮಾಡಲೇಬೇಕು. ಇಲ್ಲದಿದ್ದರೆ ಬೇಜವಾಬ್ದಾರಿ ಎಂದು ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಕೃಷಿ ಯೋಜನೆಗಳು, ನೀರಾವರಿ ಸೌಲಭ್ಯಗಳು, ವಿವಿಧ ಅಭಿವೃದ್ಧಿ ನಿಗಮಗಳು, ಮೀನುಗಾರಿಕೆ ಇಲಾಖೆ, ಆರೋಗ್ಯ ಇಲಾಖೆ, ಹೆಸ್ಕಾಂ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ನಿಗದಿತ ಗುರಿ ಸಾಧಿ ಸಬೇಕೆಂದು ಹೇಳಿದರು. ಸಭೆಯಲ್ಲಿ ಜಿಪಂ ಸಿಇಒ ಎಂ.ಸುಂದರೇಶಬಾಬು, ಪಾಲಿಕೆ ಆಯುಕ್ತ ಹರ್ಷಶೆಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.