ಇಂಡಿಯಲ್ಲಿ ಜನರಿಂದ ಉತ್ತಮ ಸ್ಪಂದನೆ
Team Udayavani, Jan 10, 2022, 10:56 PM IST
ಇಂಡಿ: ಕೊರೊನಾ ನಿಯಂತ್ರಣಕ್ಕೆ ಸರಕಾರ ಘೋಷಿಸಿರುವ ವಾರಾಂತ್ಯದ ಕರ್ಫ್ಯೂಗೆ ಎರಡನೇ ದಿನವಾದ ರವಿವಾರ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಜನತೆ ಸ್ಪಂದಿಸಿದ್ದಾರೆ. ಎರಡು ದಿನಗಳಲ್ಲಿ ಬಸ್ ಸಂಚಾರ ಕಡಿಮೆಯಾಗಿ 20 ಲಕ್ಷ ರೂ. ಹಾನಿಯಾಗಿದೆ.
ಬಸ್ ಸಂಚಾರ ವಿರಳವಾಗಿತ್ತು. ಬಸ್ ನಿಲ್ದಾಣದಲ್ಲಿ ಜನರೂ ಅಷ್ಟಾಗಿ ಬರಲಿಲ್ಲ. ಪ್ರಯಾಣಿಕರ ಸಂಖ್ಯೆ ನೋಡಿ ಬಸ್ ಗಳ ಕಾರ್ಯಾಚರಣೆ ನಡೆಸಲಾಯಿತು. 97 ಬಸ್ ಗಳಲ್ಲಿ 26 ಬಸ್‌ಗಳ ಕಾರ್ಯಾಚರಣೆ ನಡೆಸಿದ್ದು ಜನರಿಲ್ಲದೇ ಇರುವ ಕಾರಣ ಹಾನಿಯಾಗಿದೆ. ಆಟೋ ಚಾಲಕರ ಗೋಳು: ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಸಂಕಷ್ಟಗೊಳಗಾದ ಆಟೋ ಚಾಲಕರು ಪ್ರಯಾಣಿಕರಿಲ್ಲದೆ ಪರದಾಡಿದರು. ಪ್ರತಿ ದಿನ 800ರಿಂದ ಸಾವಿರ ರೂ. ಗಳಿಸುವ ಚಾಲಕರು ನೂರು ರೂ.ಗೂ ಪರದಾಡಬೇಕಾಯಿತು.
ಹೂವಿನ ಅಂಗಡಿ: ಹೂವಿನ ಅಂಗಡಿಯವರು ವಿಜಯಪುರ ಮತ್ತಿತರ ಕಡೆಯಿಂದ ಬಸ್ ನಿಲ್ದಾಣ ಹತ್ತಿರ ಇರುವವರು 5000 ರೂ. ಹೂವು ತರಿಸಿದ್ದರು. ಯಾವದೇ ವ್ಯಾಪಾರವಿಲ್ಲದೆ ತುಂಬ ನಷ್ಟ ಅನುಭವಿಸಬೇಕಾಯಿತು. ಎರಡು ದಿನದಲ್ಲಿ ಹೂಗಳು ಬಾಡುವ ನಿಮಿತ್ತ ಮಾರಲು ಬರದ ಪರಿಸ್ಥಿತಿ ಇತ್ತು. ಒಮಿಕ್ರಾನ್, ಕೊರೊನಾ ಸೋಂಕಿನ ಆತಂಕದ ಹಿನ್ನೆಯಲ್ಲಿ ಸಾರ್ವಜನಿಕದಲ್ಲಿ ಜಾಗೃತಿ ಮೂಡಿಸಿದರು. ಪುರಸಭೆಯಿಂದ ಮೈಕ್ ಮೂಲಕ ಜಾಗೃತಿ ಮೂಡಿಸಲಾಯಿತು.
ಕರ್ಫ್ಯೂ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದಿದ್ದವರಿಗೆ ಪೊಲೀಸರು ದಂಡ ವಿಧಿ ಸಿದರು. ಬಳಿಕ ಎಚ್ಚರಿಕೆ ನೀಡಿ ಕಳುಹಿಸಿದರು. ಜತೆಗೆ ಅನವಶ್ಯಕವಾಗಿ ಹೊರಗಡೆ ಬಂದವರಿಗೆ ಕ್ಲಾಸ್ ತೆಗೆದುಕೊಂಡ ಖಾಕಿ ಪಡೆ ರೋಗ ಅಂಟಿಸಿಕೊಂಡು ಮನೆ ಮಂದಿಗೆ ತೊಂದರೆ ಕೊಡುತ್ತೀರಿ ಎಂದು ಬುದ್ಧಿವಾದ ಹೇಳುತ್ತಿರುವುದು ಕಂಡು ಬಂತು. ತಾಲೂಕಿನ ಮೂರು ಚೆಕ್ ಪೋಸ್ಟ್‌ಗಳಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಗೃಹ ರಕ್ಷಕ ದಳದವರಿಂದ ತಪಾಸಣೆ ಚುರುಕುಗೊಳಿಸಲಾಗಿತ್ತು. ಪಟ್ಟಣದಲ್ಲಿ ಬಹುತೇಕ ಮುಚ್ಚಿದ ಮಳಿಗೆಗಳು ಮತ್ತು ಅಗತ್ಯ ಸೇವೆಗಳಿಗೆ ಅಡ್ಡಿ ಇರಲಿಲ್ಲ. ಸಾರ್ವಜನಿಕರು ವೀಕೆಂಡ್ ಕರ್ಫ್ಯೂಗೆ ಸ್ಪಂದಿಸಿ ಹೊರ ಬರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.