ಗ್ಯಾರಂಟಿ ಯೋಜನೆಗಳು ಆಪ್‌ನಿಂದ ಕದ್ದಂಥವು: ಮುಖ್ಯಮಂತ್ರಿ ಚಂದ್ರು
Team Udayavani, Dec 27, 2023, 2:25 PM IST
ಮುದ್ದೇಬಿಹಾಳ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಉಚಿತ ಯೋಜನೆಗಳು ಆಮ್ ಆದ್ಮಿ ಪಕ್ಷವು ದೆಹಲಿಯಲ್ಲಿ ಜಾರಿಗೊಳಿಸಿರುವ ಯೋಜನೆಗಳ ಕಾಪಿ ಆಗಿದೆ. ಅವರು ನಮ್ಮಿಂದ ಕದ್ದ ಮಾಲನ್ನು ಇಟ್ಟುಕೊಂಡು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ಆಪ್ ರಾಜ್ಯಾಧ್ಯಕ್ಷ, ವಿಧಾನ ಪುರಿಷತ್ ಮಾಜಿ ಸದಸ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಚಲನಚಿತ್ರ ರಂಗದ ಹಿರಿಯ ನಟ, ಮುಖ್ಯಮಂತ್ರಿ ಚಂದ್ರು ಎಂದೇ ಗುರ್ತಿಸಲ್ಪಡುವ ಎಚ್.ಎನ್.ಚಂದ್ರಶೇಖರ ಲೇವಡಿ ಮಾಡಿದರು.
ಇಲ್ಲಿನ ಪುರಸಭೆಯ 18ನೇ ವಾರ್ಡಗೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ನೂರಅಹ್ಮದ್ ಶಿವಣಗಿ
ವಕೀಲರ ಪುರ ಪ್ರಚಾರ ನಡೆಸಲು ಸೋಮವಾರ ಇಲ್ಲಿಗೆ ಆಗಮಿಸಿದ್ದ ಅವರು ಪ್ರಚಾರಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು. ಈಗ ಉಚಿತ ಯೋಜನೆ ಜಾರಿಗೊಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷದ ಹಿಂದೆಯೂ ಮುಖ್ಯಮಂತ್ರಿಯಾಗಿದ್ದರು. ಆವಾಗ ನೀರು, ಅಕ್ಕಿ, ವಿದ್ಯುತ್ ಸಮಸ್ಯೆ ಇರುವುದು ಅವರಿಗೆ ಗೊತ್ತಿರಲಿಲ್ಲವೇ? 5
ವರ್ಷದ ಹಿಂದೆಯೇ ಇದನ್ನೇಕೆ ಜಾರಿಗೊಳಿಸಲಿಲ್ಲ. ಚುನಾವಣೆಗೋಸ್ಕರ ಇದನ್ನು ಮಾಡಿದ್ದಾರೆ ಎಂದು ಟೀಕಿಸಿದರು.
ಜಾತಿವಾದಿ, ಕೋಮುವಾದಿ, ಕುಟುಂಬ ರಾಜಕಾರಣ ಹೆಚ್ಚಾಗುತ್ತಿರುವ ಮತ್ತು ಆರ್ಥಿಕವಾಗಿ ಭದ್ರರಾಗಿರುವ ಕುಟುಂಬ, ಪಕ್ಷಗಳ ಜೊತೆಗೆ ಈ ದಿನಗಳಲ್ಲಿ ಜನಸಾಮಾನ್ಯರ ಪಕ್ಷವಾಗಿರುವ ಆಪ್ ಹೋರಾಟಕ್ಕಿಳಿಯಬೇಕಾಗಿದೆ. ಸಾಮಾನ್ಯ ಜನರನ್ನು ಕಣಕ್ಕಿಳಿಸಿ ಸಾಮಾನ್ಯರ ರೀತಿಯಲ್ಲಿ ಕೆಲಸ ಮಾಡಿ ಗೆಲ್ಲಬೇಕು ಅನ್ನೋದು ನಮ್ಮ ಗುರಿ. ಆದರೆ ಇಂದಿನ ಸ್ಥಿತಿಯಲ್ಲಿ ಇದು ಕಷ್ಟವಾಗಿದೆ.
ಆದರೂ ಆಮ್ ಆದ್ಮಿ ಪಕ್ಷ ದೆಹಲಿ, ಪಂಜಾಬ್ ರಾಜ್ಯಗಳಲ್ಲಿ ಪಾರದರ್ಶಕ ಆಡಳಿತವನ್ನು ಯಶಸ್ವಿಯಾಗಿ ನೀಡುತ್ತಿದೆ ಎಂದರು.
ಈಚೆಗೆ ನಡೆದ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದಕ್ಕೋಸ್ಕರ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೆವು. ಗೆಲ್ಲಲಾಗದಿದ್ದರೂ ಬಿಜೆಪಿಯನ್ನು
ಅಧಿಕಾರದಿಂದ ದೂರ ಇಡುವುದರಲ್ಲಿ ಮತ್ತು ಮತ ಗಳಿಸುವುದರಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದರು.
ಅಭ್ಯರ್ಥಿ ನೂರಅಹ್ಮದ ಶಿವಣಗಿ ಮಾತನಾಡಿ, ನಮ್ಮ ಬಡಾವಣೆಯಲ್ಲಿ ಇಲ್ಲಿಯವರೆಗೆ ಗೆದ್ದು ಬಂದಂತವರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಇವತ್ತಿಗೂ ಮಹಿಳೆಯರು ಬಯಲು ಶೌಚಾಲಯಕ್ಕೆ ಹೋಗುತ್ತಾರೆ.
ಕುಡಿಯುವ ನೀರಿನ ಸೌಕರ್ಯ, ಒಳ್ಳೆಯ ರಸ್ತೆ ಇಲ್ಲ. ಇದನ್ನೆಲ್ಲ ನೋಡಿ ಬೇಸತ್ತು ಇಂದು ನಾನು ಆಮ್ ಆದ್ಮಿ ಪಕ್ಷದಿಂದ ಸ್ಪರ್ಧೆ ಮಾಡಿದ್ದೇನೆ. ನಮ್ಮ ಬಡಾವಣೆಗೆ ಬೇಕಾದ ಎಲ್ಲಾ ಸೌಕರ್ಯಗಳನ್ನು ಆರಿಸಿ ಬಂದ ಕೆಲವೇ ದಿನಗಳಲ್ಲಿ ಈಡೇರಿಸುತ್ತೇನೆ. ಜನರು ನನ್ನನ್ನು ಆರಿಸಿ ತರುತ್ತಾರೆ ಎಂಬ ನಂಬಿಕೆ ನನಗಿದೆ ಎಂದರು.
ಇದೇ ವೇಳೆ 18ನೇ ವಾರ್ಡ್ ನ ಮನೆಮನೆಗೆ ತೆರಳಿ ಪಕ್ಷದ ಚಿಹ್ನೆ ಕಸಬರಿಗೆ ಪ್ರದರ್ಶಿಸಿ ತಮ್ಮ ಪಕ್ಷದ ಅಭ್ಯರ್ಥಿಗೇ ಮತ ಹಾಕಿ ಗೆಲ್ಲಿಸುವಂತೆ ಮನವಿ ಮಾಡಿದರು. ಪಕ್ಷದ ರಾಜ್ಯ ಉಪಾಧ್ಯಕ್ಷ ವಿಜಯ್ ಶರ್ಮಾ, ವಿಜಯಪುುರ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪೂರ, ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಡಾ| ಗೀತಾ, ಜಿಲ್ಲಾ ಘಟಕದ ಅಧ್ಯಕ್ಷೆ ಅನ್ನಪೂರ್ಣ ಬೆಳ್ಳೆನ್ನವರ್,
ತಾಲೂಕು ಉಸ್ತುವಾರಿ ಮಹಿಬೂಬ ಹಡಲಗೇರಿ, ಸಂಜು ಶೆಟಗಾರ, ವೀರೇಶ ಹಿರೇಮಠ, ಮಹ್ಮದ ರಫೀಕ ಗೊಳಸಂಗಿ,
ಕಾರ್ಯಕರ್ತರು ಇದ್ದರು. ಚಿತ್ರನಟರೊಬ್ಬರು ತಮ್ಮ ಮನೆಗೆ ಬಂದಿದ್ದನ್ನು ಕಂಡು ಹರ್ಷಗೊಂಡ ಅವರ ಅಭಿಮಾನಿಗಳು ಸೆಲ್ಪಿàಗೆ ಮುಗಿಬಿದ್ದ ದೃಶ್ಯ ಸಾಮಾನ್ಯವಾಗಿತ್ತು.
ದೇಶದ 28 ರಾಷ್ಟ್ರೀಯ ಪಕ್ಷಗಳು ಒಗ್ಗೂಡಿ ಬಿಜೆಪಿ ಎದುರು ಸೆಡ್ಡು ಹೊಡೆದು ನಿಂತಿವೆ. ಬಂದಿದೆ ಎಂದರು. ಆಪ್ ಕೂಡಾ ಇವರ ಜೊತೆಗಿದೆ. ಇದು ಲೋಕಸಭೆ ಚುನಾವಣೆಗೆ ಮಾತ್ರ ಸೀಮಿತ. ಈಗ ನಡೆದಿರುವ ಸ್ಥಳೀಯ ಸಂಸ್ಥೆ, ಮುಂಬರುವ ತಾಪುಂ, ಜಿಪಂ, ಬಿಬಿಪಿಎಂಪಿ ಮತ್ತು ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗಳಲ್ಲಿ ನಮ್ಮ ಪಕ್ಷ ಸ್ವತಂತ್ರ ಶಕ್ತಿಯ ಮೇಲೆ ಸ್ಪ ರ್ಧಿಸುತ್ತದೆ.
*ಮುಖ್ಯಮಂತ್ರಿ ಚಂದ್ರು, ರಾಜ್ಯಾಧ್ಯಕ್ಷ, ಆಮ್ ಆದ್ಮಿ ಪಾರ್ಟಿ, ಬೆಂಗಳೂರು
ವಿಧಾನ ಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ನಮ್ಮ ಪಕ್ಷದ ಖಾತೆ ತೆಗೆಯಬೇಕು ಅನ್ನೋ ಕಾರಣಕ್ಕೆ ಸ್ಥಳೀಯ ಸಂಸ್ಥೆಗಳ ಮರು ಚುನಾವಣೆಯಲ್ಲಿ ಮೈಸೂರು ಜಿಲ್ಲೆ ನಂಜನಗೂಡು, ತುಮಕೂರು ಜಿಲ್ಲೆ ಶಿರಾ ತಾಲೂಕು, ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮತ್ತು ಮಂಗಳೂರ ಹೀಗೆ 4 ಕಡೆ ಪಕ್ಷದ ಅಭ್ಯರ್ಥಿ ನಿಲ್ಲಿಸಿದ್ದೇವೆ. ನಮ್ಮದು ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಚುನಾವಣೆ ನಡೆಸುವ ಪಕ್ಷವಲ್ಲ. ಎಲ್ಲ ಅನುಕೂಲ ಹೊಂದಿರುವ ರಾಜಕೀಯ ಪಕ್ಷಗಳು, ವ್ಯಕ್ತಿಗಳೊಂದಿಗೆ ಹೋರಾಡಬೇಕಿದೆ. ಸಿರಾ ಮತ್ತು ಮುದ್ದೇಬಿಹಾಳದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಕಂಡು ಬಂದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.