ಭಾರೀ ಮಳೆಯಿಂದ ಗುಂಡಕರ್ಜಗಿ ರಸ್ತೆ ಹಾಳು
Team Udayavani, Sep 9, 2022, 8:06 PM IST
ಮುದ್ದೇಬಿಹಾಳ: ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ಹಾನಿಯಾಗಿರುವ ಸಿದ್ದಾಪುರ ಪಿಟಿ- ಗುಂಡಕರ್ಜಗಿ ರಸ್ತೆಯನ್ನು ಪಿಡಬ್ಲ್ಯುಡಿ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಗುರುವಾರ ಪರಿಶೀಲಿಸಿದರು.
ಈ ವೇಳೆ ರಸ್ತೆಯಲ್ಲಿ ಬಿದ್ದಿರುವ ತಗ್ಗುಗಳ ಆಳ ಪರಿಶೀಲಿಸಿ ಸಂಚಾರಕ್ಕೆ ಎಷ್ಟು ಅಪಾಯಕಾರಿಯಾಗಿದೆ ಎನ್ನುವ ಮಾಹಿತಿ ಸಂಗ್ರಹಿಸಿ ಮೇಲಧಿ ಕಾರಿಗಳಿಗೆ ವರದಿ ಸಲ್ಲಿಸಿದರು. ಈ ರಸ್ತೆಯ ಸೇತುವೆ ಕೆಳಭಾಗದಲ್ಲಿ ನೀರು ಹರಿದು ಹೋಗಲು ಹಾಕಿರುವ ಪೈಪ್‌ಗ್ಳು ಒಡೆದು ಹೋಗಿವೆ. ರಸ್ತೆ ಕೆಳಮಟ್ಟದಿಂದಲೂ ಆಂತರಿಕವಾಗಿ ನೀರು ಹರಿದು ಹೋಗುತ್ತಿದೆ. ಹೀಗಾಗಿ ಇಲ್ಲಿ ಮಳೆ ನೀರಿನ ಭೋರ್ಗರೆತ ಹೆಚ್ಚು ಸದ್ದು ಮಾಡುತ್ತಿದೆ.
ಆಕಸ್ಮಿಕವಾಗಿ ಯಾವುದೇ ವಾಹನ ರಸ್ತೆಯಲ್ಲಿ ಸಂಚರಿಸಿದರೆ ರಸ್ತೆ ಕುಸಿಯುವ ಅಪಾಯವಿದೆ ಎನ್ನುವುದನ್ನು ಮನವರಿಕೆ ಮಾಡಿಕೊಂಡರು. ಅಕ್ಕಪಕ್ಕದ ಗ್ರಾಮಗಳಿಗೆ ಮಾಹಿತಿ ರವಾನಿಸಿ ಈ ರಸ್ತೆಯಲ್ಲಿ ವಾಹನ ಸಂಚರಿಸದಂತೆ ಜಾಗ್ರತೆ ವಹಿಸಲು ಎಚ್ಚರಿಕೆ ಸಂದೇಶ ರವಾನಿಸಿದರು. ಇದಕ್ಕೂ ಮೊದಲೇ ಗ್ರಾಮದ ಕೆಲ ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ರಸ್ತೆ ಸಂಪೂರ್ಣ ಹಾಳಾಗಿರುವ ಕುರಿತು, ಈ ರಸ್ತೆಯಲ್ಲಿ ಯಾರೂ ಸಂಚರಿಸದಂತೆ ವಿಡಿಯೋ, ಫೋಟೋ ಸಮೇತ ಮಾಹಿತಿ ಹಾಕುವ ಮೂಲಕ ಜಾಗೃತಿ ಮೂಡಿಸಿದ್ದರು.
ಸದ್ಯಕ್ಕೆ ತಾತ್ಕಾಲಿಕ ದುರಸ್ತಿ: ಈ ಕುರಿತು ಪತ್ರಿಕೆಯೊಂದಿಗೆ ಪಿಡಬ್ಲ್ಯುಡಿ ಎಇಇ ಆರ್.ಎಂ. ಹುಂಡೇಕಾರ ಮಾತನಾಡಿ, ರಸ್ತೆ ಸದ್ಯಕ್ಕೆ ದುರಸ್ತಿಪಡಿಸಲಾಗದಷ್ಟು ಹದಗೆಟ್ಟಿದೆ. ನೀರಿನ ಹರಿವು ನಿಂತ ಮೇಲೆ ತಾತ್ಕಾಲಿಕವಾಗಿ ದುರಸ್ತಿ ಮಾಡಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುತ್ತದೆ. ಆ ನಂತರ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಪ್ರಯತ್ನದಿಂದ ಕೆಬಿಜೆಎನ್ನೆಲ್ ವತಿಯಿಂದ ಮಂಜೂರಾಗಿರುವ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.