Vijayapura ಗುಮ್ಮಟನಗರಿಯಲ್ಲಿ ಗುಂಡಿನ ಸದ್ದು : ಒಬ್ಬನಿಗೆ ಗಾಯ
Team Udayavani, Nov 10, 2023, 8:05 PM IST
ವಿಜಯಪುರ : ವಿಜಯಪುರ ನಗರದಲ್ಲಿ ಶುಕ್ರವಾರ ಸಂಜೆ ಗುಂಡಿನ ಸದ್ದು ಕೇಳಿ ಬಂದಿದೆ. ಪಾಲಿಕೆಯ ಪತಿಯ ಹತ್ಯೆ ಪ್ರಕರಣದ ಪ್ರತಿಕಾರವಾಗಿ ಗುಂಡಿನ ದಾಳಿ ನಡೆದಿದೆ ಎನ್ನಲಾಗಿದ್ದು, ಸುದೈವಶಾತ್ ಗುಂಡಿನ ಗುರಿ ತಪ್ಪಿ, ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದಾನೆ. ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ.
ನಗರದ ವಡ್ಡರ ಓಣಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಗುರಿ ತಪ್ಪಿದ ಕಾರಣ ಶೋಯೇಬ್ ಕಕ್ಕಳಮೇಲಿ ಎಂಬವನಿಗೆ ಗುಂಡು ಕಿವಿಗೆ ತಾಗಿದ್ದು, ಗಾಯಾಳುವನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಯೇಬ್ ತನ್ನ ಸ್ನೇಹಿತರೊಂದಿಗೆ ಹೋಗುತ್ತಿದ್ದಾಗ ದುಷ್ಕರ್ಮಿಗಳು ಕಂಟ್ರೀ ಪಿಸ್ತೂಲ್ ಬಳಸಿ ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಒಂದು ಗುಂಡು ಮಾತ್ರ ಶೋಯೇಬ್ ಕಿವಿಗೆ ತಾಗಿ, ಗಾಯವಾಗಿದೆ. ದಾಳಿ ಮಾಡಿದ ಬಳಿಕ ಆರೋಪಿಗಳು ಬೈಕ್‍ಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಗಿದ್ದಾರೆ.
ಘಟನೆಯ ಪ್ರತ್ಯಕ್ಷದರ್ಶಿ ಎನ್ನಲಾದ ಶೋಯೇಬ್‍ನ ಸ್ನೇಹಿತ ಅಮಾನುಲ್ಲಾ ಲೋಣಿ ಹೇಳುವಂತೆ ಸದರಿ ಗುಂಡಿನ ದಾಳಿಗೆ ಕಾರಣವಾದವರು ಮೇ 6 ರಂದು ಹತ್ಯೆಯಾಗಿರುವ ಹೈದರ್ ನದಾಫ್‍ನ ಸಹೋದರರು.
ಮೊಹ್ಮದ್ ನದಾಫ್, ಸಹಚರ ಚಾರ್ಲೇ ಸಮೀರ ಸೇರಿದಂತೆ ಇತರರು ಜೊತೆಗಿದ್ದರು. ಆರೋಪಿಗಳು ಎರಡು ಸುತ್ತು ಗುಂಡು ಹಾರಿಸಿದ್ದು, ಒಂದು ಗುರಿ ತಪ್ಪಿದ್ದರೆ ಮತ್ತೊಂದು ಕಿವಿಗೆ ಗಾಯವಾಗಿದೆ ಎಂದು ಆರೋಪಿಸಿದ್ದಾನೆ.
ಮೇ 6 ರಂದು ನಗರದಲ್ಲಿ ಹತ್ಯೆಯಾಗಿದ್ದ ಹೈದರ್ ನದಾಫ್ ವಿಜಯಪುರ ಮಹಾನಗರ ಪಾಲಿಕೆ ಸದಸ್ಯೆ ನಿಶಾತ್ ನದಾಫ್ ಪತಿ. ಸದರಿ ಘಟನೆಯಲ್ಲಿ ಬಂಧಿತರಾಗಿರುವ ಆರೋಪಿಗಳಲ್ಲಿ ಜಾಮೀನಿನ ಮೇಲೆ ನಾಲ್ವರು ಹೊರಹೆ ಬಂದಿದ್ದಾರೆ. ಹೀಗಾಗಿ ಹಯದರ್ ಹತ್ಯೆಯ ಪ್ರತೀಕಾರಕ್ಕಾಗಿ ಶೋಯೇಬ್ ಕಕ್ಕಳಮೇಲಿ ಮೇಲೆ ದುಷ್ಕರ್ಮಿಗಳು ಗುಂಡಿ ಹಾರಿಸಿದ್ದಾರೆ ಎಂದು ದೂರಲಾಗಿದೆ.
ಘಟನೆಯ ಸುದ್ದಿ ತಿಳಿಯುತ್ತಲೇ ಎಸ್ಪಿ ಋಷಿಕೇಶ ಭಗವಾನ್ ಹಾಗೂ ಪೊಲೀಸ್ ಇತರೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡು, ಇಡೀ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿ, ತನಿಖೆ ನಡೆಸಲಿದ್ದೇವೆ ಎಂದರು.
ಘಟನಾ ಸ್ಥಳದಲ್ಲಿ ಮೂರು ಬೈಕ್‍ಗಳು ಬಿದ್ದಿದ್ದು, ಒಂದು ಬಾಧಿತನಿಗೆ ಸೇರಿರಬಹುದು. ಈ ಕುರಿತು ಸಮಗ್ರ ತನಿಖೆ ನಡೆಸುವ ಜೊತೆಗೆ ತಲೆ ಮರೆಸಿಕೊಂಡಿರುವ ಆರೋಪಿಗಳ ಶೀಘ್ರ ಬಂಧನಕ್ಕೆ ಜಾಲ ಬೀಸಲಾಗಿದೆ ಎಂದು ಎಸ್ಪಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.