ಜ್ಞಾನಯೋಗಾಶ್ರಮದಲ್ಲಿ ಗುರುಪೂರ್ಣಿಮೆ
Team Udayavani, Jul 6, 2020, 9:47 AM IST
ವಿಜಯಪುರ: ಕೋವಿಡ್ ಹಿನ್ನೆಲೆಯಲ್ಲಿ ಇಲ್ಲಿನ ಜ್ಞಾನಯೋಗಾಶ್ರಮದಲ್ಲಿ ಗುರುಪೂರ್ಣಿಮೆಯಲ್ಲಿ ಭಕ್ತರ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ ಶ್ರದ್ಧಾ-ಭಕ್ತಿ ಪೂರ್ವಕವಾಗಿ ರವಿವಾರ ಗುರುಪೂರ್ಣಿಮೆ ಆಚರಿಸಲಾಯಿತು.
ವೇದಾಂತ ಕೇಸರಿ ಮಲ್ಲಿಕಾರ್ಜುನ ಶಿವಯೋಗಿಗಳ ಗದ್ದುಗೆಗೆ ವಿಶೇಷ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪ್ರದಾಯದಂತೆ ನೆರವೇರಿದವು. ಭಾನುವಾರ ಬೆಳಗ್ಗೆ ಸೂರ್ಯೋದಯಕ್ಕೆ ಮುನ್ನವೇ ಗುರುಪೂರ್ಣಿಮೆ ಪೂಜೆ, ಗದ್ದುಗೆ ಬಳಿ ಜಪಯಜ್ಞಗಳು ಆರಂಭಗೊಂಡಿದ್ದವು. ಹಿಂದಿನಂತೆ ಗುರುಪೂರ್ಣಿಮೆ ದಿನ ಜ್ಞಾನಯೋಗಾಶ್ರಮದಲ್ಲಿ ಕಂಡುಬರುತ್ತಿದ್ದ ಭಕ್ತರ ದಂಡು ಇರಲಿಲ್ಲ. ಮನೆಯಲ್ಲಿಯೇ ಜಪ ಮಾಡಿ, ಮೊಬೆ„ಲ್‌ನಲ್ಲೇ ಗುರುಪೂರ್ಣಿಮೆಯ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿತ್ತು. ಯೂ ಟ್ಯೂಬ್ ಮೂಲಕ ನೇರ ಪ್ರಸಾರ ಮಾಡಲಾಯಿತು. ಇದರಿಂದಾಗಿ ಭಕ್ತರು ಮನೆಗಳಲ್ಲೇ ಕುಳಿತು ಆಧುನಿಕ ತಂತ್ರಜ್ಞಾನದ ನೆರವಿನಿಂದ ಗುರು ಪೂರ್ಣಿಮೆಯ ದೃಶ್ಯಾವಳಿಗಳನ್ನು ಭಕ್ತರು ಕಣ್ತುಂಬಿಕೊಂಡರು. ವೇದಾಂತ ಕೇಸರಿ ಶ್ರೀಮಲ್ಲಿಕಾರ್ಜುನ ಶಿವಯೋಗಿಗಳ ಪ್ರವಚನದ ಧ್ವನಿ ಸುರುಳಿಯನ್ನೂ ಪ್ರಸಾರ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
Waqf ಜೆಪಿಸಿ ಅಧ್ಯಕ್ಷ ಭೇಟಿ ಹಿನ್ನೆಲೆ: ವಿಜಯಪುರಕ್ಕೆ ಬಂದ ಜೊಲ್ಲೆ ದಂಪತಿ, ಜಾರಕಿಹೊಳಿ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
MUST WATCH
ಹೊಸ ಸೇರ್ಪಡೆ
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.