ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯ ಕಾಲುವೆಗೆ ನೀರು ಹರಿಸಿ


Team Udayavani, Apr 28, 2022, 4:59 PM IST

22canel

ಸಿಂದಗಿ: ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯ ಕಾಲುವೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ತಾಂಬಾದಲ್ಲಿ ರೈತರು ಕಳೆದ 48 ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಈ ಭಾಗದ ರೈತರ ಸಮಸ್ಯೆಗೆ ಸರಕಾರ ಇಚ್ಛಾಶಕ್ತಿ ತೋರಿಸದೇ ಇರುವುದು ರೈತ ವಿರೋಧಿ ಸರಕಾರವಾಗಿದೆ ಎಂದು ಕಾಂಗ್ರೆಸ್‌ ಮುಖಂಡ ಅಶೋಕ ಮನಗೂಳಿ ಆರೋಪಿಸಿದರು.

ಪಟ್ಟಣದ ಪಕ್ಷದ ಕಾರ್ಯಾಲಯದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ನೀರಾವರಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸಿದ್ದರು. ಆದರೆ ನೀರಿಗಾಗಿ ಹೋರಾಡುತ್ತಿರುವ ರೈತರಿಗೆ ಸ್ಪಂದಿಸಲು ಹೋರಾಟ ಸ್ಥಳಕ್ಕೆ ಭೇಟಿ ನೀಡಿಲ್ಲ. ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರು ನಿರಾಸಕ್ತಿ ತೋರಿಸಿದ್ದಾರೆ. ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯಿಂದ ಕಾಲುವೆಗೆ ನೀರು ಹರಿಸುವ ಯಂತ್ರಗಳು ಕೆಟ್ಟಿವೆ. ನೀರು ಸರಬರಾಜು ಮಾಡಲು ಹೊಸ 8 ಯಂತ್ರಗಳ ಖರೀದಿಗೆ ಟೆಂಡರ್‌ ಕರೆಯಲಾಗಿದೆ ಎಂದು ಕ್ಷೇತ್ರದ ಶಾಸಕರು 3-4 ತಿಂಗಳಿನಿಂದ ಹೇಳುತ್ತ ಹೊರಟಿದ್ದಾರೆ. ಆದರೆ ಖರೀದಿ ಮಾಡಿ ಮೋಟಾರ್‌ ಅಳವಿಡಿಸಿ ಕಾಲುವೆಗೆ ನೀರು ಹರಿಸುವ ಕಾರ್ಯ ಮಾಡಿಲ್ಲ ಎಂದು ಆರೋಪಿಸಿದರು.

ಹೋರಾಟ ಮಾಡುವ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕ್ಷೇತ್ರದ ಶಾಸಕರು ರೈತರ ಪ್ರಶ್ನೆಗೆ ಕಬ್ಬು, ನಿಂಬೆ ಬೆಳೆಯುತ್ತಿರಿ ಎಂದು ಉಡಾಪೆ ಉತ್ತರ ನೀಡಿರುವುದು ಖಂಡನೀಯ. ಬಳಗಾನೂರ ಏತ ನೀರಾವರಿ ಆರಂಭಿಸಿ ಬಳಗಾನೂರ ಕೆರೆಯಿಂದ ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆಗೆ ನೀರು ಹರಿಸಿ ರೈತರ ಸಮಸ್ಯೆ ಪರಿಹರಿಸಿ ಎಂದು ಸರಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆ ಸೂಕ್ತವಾಗಿದೆ ಎಂದು ಹೇಳಿದರು.

ಶಾಸಕ ದಿ| ಎಂ.ಸಿ. ಮನಗೂಳಿ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಕಡಣಿ ಬ್ಯಾರೇಜ್‌ ಕಾಮಗಾರಿಗೆ, ಆಲಮೇಲ ಪಟ್ಟಣದಲ್ಲಿ ತೋಟಗಾರಿಕೆ ಕಾಲೇಜು ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಹಣ ಮಂಜೂರು ಮಾಡಿಸಿದ್ದರು. ಆದರೆ ಇಂದಿನ ಶಾಸಕರು ಆಸಕ್ತಿ ತೋರಿಸುತ್ತಿಲ್ಲ. ಯಾವುದೇ ಕಾಮಗಾರಿಗಳು ಮಾಡುತ್ತಿಲ್ಲ. ಅತಿವೃಷ್ಟಿ ಸಂದರ್ಭದಲ್ಲಿ ಕ್ಷೇತ್ರದ ಗ್ರಾಮಗಳ ರಸ್ತೆ ಅಭಿವೃದ್ಧಿಗಾಗಿ 88 ರಸ್ತೆಗಳ ಅಭಿವೃದ್ಧಿ, ಶಾಲೆ ಕೊಠಡಿ, ಅಂಗನವಾಡಿ ಕಟ್ಟಡ ದುರಸ್ತಿ ಕಾಮಗಾರಿಗೆ ಒಟ್ಟು 3 ಕೋಟಿ ರೂ. ಬಿಡುಗಡೆ ಮಾಡಿಸಿದ್ದರು. ಆದರೆ ಈಗ ಶಾಸಕ ಭೂಸನೂರ ಅವರ ಅವಧಿಯಲ್ಲಿ 88 ರಸ್ತೆ ಕಾಮಗಾರಿಗಳನ್ನು ಮಾಡದೇ ಬಿಲ್‌ ತೆಗೆಯುವ ಮೂಲಕ ಅನುದಾನ ದುರ್ಬಳಕೆ ಮಾಡಿದ್ದಾರೆ. ಶಾಸಕ ದಿ| ಎಂ.ಸಿ. ಮನಗೂಳಿ ಅವರು ಮಂಜೂರು ಮಾಡಿಸಿದ ಕಾಮಗಾರಿಗಳು ಶಾಸಕ ರಮೇಶ ಭೂಸನೂರ ಅವರು ಶೀಘ್ರದಲ್ಲಿ ಮಾಡಿಸಬೇಕು ಎಂದು ಆಗ್ರಹಿಸಿದರು.

ತಳವಾರ ಸಮಾಜದ ಮುಖಂಡ ಸಂತೋಷ ಹರನಾಳ ಮಾತನಾಡಿ, ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ರಾಜ್ಯ ಸರ್ಕಾರ ಅನುಸರಿಸುತ್ತಿರುವ ವಿಳಂಬ ನೀತಿ ಖಂಡನೀಯ. ಸಿಂದಗಿ ವಿಧಾನಸಭೆ ಉಪ ಚುನಾವಣೆಯಲ್ಲಿ ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವುದಾಗಿ ಮುಖ್ಯಮಂತ್ರಿ, ಸಮಾಜ ಕಲ್ಯಾಣ ಇಲಾಖೆ ಸಚಿವರು, ಶಾಸಕರು ಭರವಸೆ ನೀಡಿದ್ದರು. ಚುನಾವಣೆ ಮುಗಿದ ನಂತರ ಅವರು ನೀಡಿದ ಭರವಸೆ ಮರೆತಿದ್ದಾರೆ. ಮತ ಪಡೆಯಲು ಸುಳ್ಳು ಭರವಸೆ ನೀಡಿದ್ದಾರೆ ಎಂದು ಆರೋಪಿಸಿದರು.

ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ ಮಾತನಾಡಿ, ಶಾಸಕ ರಮೇಶ ಭೂಸನೂರ ಅವರು ಪಟ್ಟಣದಲ್ಲಿ 1.31 ಕೋಟಿ, 2 ಕೋಟಿ ರೂ. ಅನುದಾನ ನೀಡಿ ಅಂಬೇಡ್ಕರ್‌ ಭವನ ನಿರ್ಮಾಣ ಮಾಡಲಾಗಿದೆ ಎಂದು ದಿನಕ್ಕೊಂದು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಅವರ ಹಿಂದಿನ ಅಧಿಕಾರದ ಅವಧಿಯಲ್ಲಿ ಕೇವಲ 50 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ. ನಂತರ ಎಂ.ಸಿ. ಮನಗೂಳಿ ಅವರು 1 ಕೋಟಿ ರೂ. ಅನುದಾನ ಭವನಕ್ಕೆ ನೀಡಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್‌ ಮುಖಂಡರಾದ ಸುರೇಶ ಪೂಜಾರಿ, ಎಂ.ಎ. ಖತಿಬ, ಇಕ್ಬಾಲ್‌ ತಲಕಾರಿ, ಮಂಜುನಾಥ ಬಿಜಾಪುರ ಇದ್ದರು.

ಟಾಪ್ ನ್ಯೂಸ್

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.