ಹಲಸಂಗಿಯಲ್ಲಿ ನಾಡಹಬ್ಬ ಆಚರಿಸಲು ನಿರ್ಧಾರ
Team Udayavani, Jul 7, 2020, 12:12 PM IST
ವಿಜಯಪುರ: ಹಲಸಂಗಿ ಗೆಳೆಯರ ಬಳಗ ಪ್ರತಿಷ್ಠಾನದ 2020-21ನೇ ಸಾಲಿನ ಕ್ರಿಯಾ ಯೋಜನೆ ರೂಪಿಸಬೇಕು. ಜಿಲ್ಲಾಡಳಿತದ ಸಹಯೋಗದಲ್ಲಿ ಹಲಸಂಗಿ ಗ್ರಾಮದಲ್ಲಿ ನಾಡಹಬ್ಬ ಆಚರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಹಲಸಂಗಿ ಗೆಳೆಯರ ಬಳಗ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಹಲಸಂಗಿ ಗೆಳೆಯರ ಬಳಗ ಪ್ರತಿಷ್ಠಾನದಿಂದ ನಾಡಿನ ಶ್ರೇಷ್ಠ ಕವಿಗಳ ಕುರಿತು ಪ್ರಚಾರ ಮಾಡಲು ಹಾಗೂ ಸಾಹಿತ್ಯದ ಆಸಕ್ತಿಯನ್ನು ಜನರಲ್ಲಿ ಮೂಡಿಸುವಂತಾಗಬೇಕು. ಈ ನಿಟ್ಟಿನಲ್ಲಿ ಒಂದು ವ್ಯವಸ್ಥಿತ ಕ್ರಿಯಾ ಯೋಜನೆ ರೂಪಿಸುವಂತೆ ಅವರು ಸಂಬಂಧಿತ ಸದಸ್ಯ ಬಳಗಕ್ಕೆ ಸೂಚಿಸಿದರು. ಪ್ರತಿ ವರ್ಷ ಹಲಸಂಗಿ ಗೆಳೆಯರ ಬಳಗದಿಂದ ಮಧುರ ಚನ್ನರ ಹುಟ್ಟೂರು ಹಲಸಂಗಿ ಗ್ರಾಮದಲ್ಲಿ ಸಾಹಿತ್ಯ, ಸಂಗೀತ ಹಾಗೂ ಮಧುರ ಚನ್ನರ ವಿಚಾರಗಳನ್ನು ಇಂದಿನ ಪೀಳಿಗೆಗೆ ಮನವರಿಕೆ ಮಾಡಲು 10 ದಿನಗಳ ಕಾಲ ಜಿಲ್ಲಾಡಳಿತದ ಸಹಯೋಗದಲ್ಲಿ ನಾಡಹಬ್ಬ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಹೇಶ ಪೋತದಾರ, ಡಾ| ಓಂಕಾರ ಕಾಕಡೆ, ಎಸ್.ಕೆ. ಕೊಪ್ಪಾ, ಎಂ.ಎಸ್. ಮಧಬಾವಿ, ಚೆನ್ನಪ್ಪ ಕಟ್ಟಿ, ಆರ್. ಸುನಂದಮ್ಮ, ಎ.ಎ.ಪಾರ್ಸಿ, ಡಿ.ಬಿ. ಭಜಂತ್ರಿ, ಆರ್.ಎನ್. ಸಿಂಪಿ, ಸೋಮಶೇಖರ ವಾಲಿ, ಜಗದೀಶ ಗಲಗಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.