ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು : ಜಮೀನಿಗೆ ನೀರು ಹಾಯಿಸಲು ಹೋದ ವೇಳೆ ಘಟನೆ
Team Udayavani, Mar 24, 2022, 4:31 PM IST
ಹರಪನಹಳ್ಳಿ : ಜಮೀನಿಗೆ ನೀರು ಹಾಯಿಸಲು ಹೋಗಿದ್ದ ವೇಳೆ ವಿದ್ಯುತ್ ತಂತಿ ತಗುಲಿ ರೈತನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಯಡಿಹಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಹೊಳಲು ಜಂಬಪ್ಪ(48) ಮೃತ ದುರ್ದೈವಿ ತಮ್ಮ ಹೊಲದಲ್ಲಿನ ಈರುಳ್ಳಿ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಸಂದರ್ಭದಲ್ಲಿ ಮೋಟಾರ್ ಆನ್ ಮಾಡುವ ವೇಳೆ ಮೋಟಾರ್ ಗೆ ಸಂಪರ್ಕ ಕಲ್ಪಿಸಿರುವ ವಿದ್ಯುತ್ ತಂತಿ ತಗುಲಿದ ಪರಿಣಾಮ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಮೃತರಿಗೆ ಪತ್ನಿ ಇಬ್ಬರೂ ಪುತ್ರರು ಸೇರಿ ಅಪಾರ ಬಂಧು ಬಳಗ ಅಗಲಿದ್ದಾರೆ.
ಮೃತ ಹೊಳಲು ಜಂಬಪ್ಪ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು, ಶಾಸಕ ಕರುಣಾಕರ ರೆಡ್ಡಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು ಎನ್ನಲಾಗಿದೆ.
ಈ ಕುರಿತು ಹಲುವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ 10 ಗಂಟೆಗೆ (ಶುಕ್ರವಾರ) ಸ್ವ-ಗ್ರಾಮ ಯಡಿಹಳ್ಳಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸುವೆ.
ಇದನ್ನೂ ಓದಿ : ಡ್ರೈವರ್ ದಿನಸಿ ಕದ್ದಿದ್ದಾನೆ ಎಂದು ಉಬರ್ ಗೆ ದೂರು ನೀಡಿದ ನಟಿ ಸ್ವರಾ ಭಾಸ್ಕರ್!
ಸಂತಾಪ…
ಶಾಸಕ ಕರುಣಾಕರ ರೆಡ್ಡಿ, ಬಿಜೆಪಿ ತಾಲೂಕು ಅಧ್ಯಕ್ಷ ಸತ್ತೂರು ಹಾಲೇಶ್, ಯಡಿಹಳ್ಳಿ ಶೇಖಣ್ಣ, ಶಿರಗಾನಳ್ಳಿ ವಿಶ್ವನಾಥ್, ಚಿರಸ್ಥಹಳ್ಳಿ ಬಸವರಾಜಪ್ಪ,ರಾಮಪ್ಪ, ಸೇರಿ ಅನೇಕ ಮುಖಂಡರು ಮೃತರಿಗೆ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.