ವಿಜಯಪುರ: ಸಿಡಿಲಿಗೆ ಜೋಡೆತ್ತು ಬಲಿ; ಬಿರುಗಾಳಿಗೆ ನೆಲಕ್ಕುರುಳಿದ ಬಾಳೆ
Team Udayavani, Jun 1, 2022, 11:45 AM IST
ವಿಜಯಪುರ: ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆ ಸಂದರ್ಭದಲ್ಲಿ ಸಿಡಿಲಿಗೆ ಜೋಡೆತ್ತು ಹಾಗೂ ಬಿರುಗಾಳಿಗೆ ಬಾಳೆ ಬೆಳೆ ನೆಲಕ್ಕುರುಳಿ ಹಾನಿಯಾದ ಘಟನೆಗಳು ವರದಿಯಾಗಿವೆ.
ಸಿಡಿಲಿಗೆ ಜೋಡೆತ್ತು ಬಲಿ :
ಸಿಡಿಲು ಬಡಿದು ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಸಮೀಪದ ಖಾನಿಕೇರಿ ಗ್ರಾಮದ ಗದ್ಯಪ್ಪ ಬಸನಗೌಡ ಪಾಟೀಲ ಎಂಬವರಿಗೆ ಸೇರಿದ ಜೋಡೆತ್ತು, ಮೃತಪಟ್ಟುವೆ. ಈ ಎರಡು ಎತ್ತುಗಳ ಸಾವಿನಿಂದ ರೈತ ಗದ್ಯಪ್ಪ ಅವರಿಗೆ ಸುಮಾರು 80 ಸಾವಿರ ರೂ. ನಷ್ಟವಾಗಿದೆ.
ಸ್ಥಳಕ್ಕೆ ಕಂದಾಯ ನಿರೀಕ್ಷಕ ಎನ್.ಬಿ ದೂರೆ, ಎಎಸ್ಐ ಎ.ಎಸ್. ನ್ಯಾಮಣ್ಣವರ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಲಕ್ಷಾಂತರ ಮೌಲ್ಯದ ಬಾಳೆ ಹಾನಿ :
ಕಳೆದ ರಾತ್ರಿ ಸುರಿದ ಭಾರಿ ಮಳೆ ಹಾಗೂ ಗಾಳಿಗೆ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ರೈತ ಈರಪ್ಪ ಮಲ್ಲಪ್ಪ ಕಸಬೇಗೌಡರ ಇವರಿಗೆ ಸೇರಿದ ತೋಟದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣ ನೆಲಕ್ಕೆ ಉರುಳಿ, ಭಾರಿ ನಷ್ಟವಾಗಿದೆ.
ಒಂದೂವರೆ ಎಕರೆ ತೋಟದಲ್ಲಿ ರೈತ ಈರಪ್ಪ ಕಸಬೇಗೌಡರ ಸುಮಾರು 350 ಬಾಳೆ ಬೆಳೆದಿದ್ದರು. ಇನ್ನು 2-3 ವಾರಗಳಲ್ಲಿ ಕೊಯ್ಲಿಗೆ ಬರಲಿದ್ದ ಬಾಳೆ ಇದೀಗ ನೆಲಕ್ಕೆ ಉರಳಿದೆ.
ಸಂಪೂರ್ಣ ಬಾಳೆ ನೆಲಕ್ಕುರುಳಿದ ಕಾರಣ ಹತ್ತಾರು ಸಾವಿರ ರೂ. .ಖರ್ಚು ಮಾಡಿ ಬೆಳದ ಬಾಳೆಯಿಂದ ಲಕ್ಷಾಂತರ ರೂ.ಆದಾಯದ ನಿರೀಕ್ಷೆಯಲ್ಲಿದ್ದ ಸಂಕಷ್ಟ ಎದುರಾಗಿದೆ.
ಪರಿಹಾರಕ್ಕೆ ಆಗ್ರಹ :
ಸರ್ಕಾರ ವಿಳಂಬ ಮಾಡದೇ ಜೋಡೆತ್ತು ಕಳೆದುಕೊಂಡಿರುವ ಗದ್ಯಪ್ಪ ಪಾಟೀಲ, ಬಾಳೆ ಬೆಳೆ ಹಾನಿಯಿಂದ ನಷ್ಟ ಅನುಭಸಿರುವ ಈರಪ್ಪ ಕಸಬೇಗೌಡರ ಇವರಿಗೆ ಪ್ರಕೃತಿ ವಿಕೋಪ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.