ಗ್ರಾಮೀಣಾಭಿವೃದ್ದಿ ಯೋಜನೆಯಿಂದ ಸಹಾಯ
Team Udayavani, Feb 23, 2022, 5:44 PM IST
ಸಿಂದಗಿ: ರಾಜ್ಯದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಗಳಿಂದ ಕೈಗೊಂಡಿರುವ ಕಾರ್ಯಕ್ರಮಗಳು ಸಾರ್ವಜನಿಕರಿಗೆ ಬಹಳಷ್ಟು ಸಹಕಾರಿಯಾಗಿವೆ ಎಂದು ಧರ್ಮಸ್ಥಳ ಗ್ರಾಮೀಣ ಕ್ಷೇಮಾಭಿವೃದ್ಧಿ ಸಂಸ್ಥೆ ತಾಲೂಕು ಯೋಜನಾಧಿಕಾರಿ ಗಿರೀಶಕುಮಾರ ಹೇಳಿದರು.
ತಾಲೂಕಿನ ಯರಗಲ್ ಬಿ.ಕೆ. ಗ್ರಾಮದಲ್ಲಿ ಪ್ರಾಕೃತಿಕ ವಿಕೋಪದಲ್ಲಿ ಮನೆ ಹಾನಿಗೊಳಗಾದ ಫಲಾನುಭವಿಗಳಿಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಅಡಿಯಲ್ಲಿ ಮಂಜೂರಾದ ಧನಸಹಾಯ ಚೆಕ್ ವಿತರಿಸಿ ಅವರು ಮಾತನಾಡಿದರು.
ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯು ನೊಂದವರಿಗೆ ಆಶರೆಯಾಗಿ ಕಾರ್ಯ ನಿರ್ವಹಿಸುತ್ತಿದೆ. ಗ್ರಾಮದಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ಬಡ ಕುಟುಂಬಗಳನ್ನು ಗುರುತಿಸಿ ಅಂಥ ಫಲಾನುಭವಿಗಳಿಗೆ ಸಂಸ್ಥೆ ವತಿಯಿಂದ ಧನಸಹಾಯ ನೀಡಲಾಗುತ್ತಿದೆ. ಪ್ರತಿ ತಿಂಗಳು ಮಾಸಾಶನ ಕೊಡುವ ಕಾರ್ಯಕ್ರಮದಲ್ಲಿ 78 ಜನರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಗ್ರಾಮದ ಖುರಾನಸಾಬ ಜಟ್ನಾಳ ಸೇರಿದಂತೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸಿಬ್ಬಂದಿ ಇದ್ದರು.
ಸಿಂದಗಿ ಪಟ್ಟಣದ ಕಾಳಿಕಾನಗರದ ಕಾಳಿಕಾದೇವಿ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಾಳಿಕಾನಗರ ಒಕ್ಕೂಟದ ಪ್ರಗತಿಬಂಧು ಸ್ವಸಹಾಯ ಸಂಘಗಳ ಸದಸ್ಯರಿಗೆ ಆರೋಗ್ಯ ರಕ್ಷಾ ಕಾರ್ಡ್ ಮತ್ತು ಹಿಡುವಳಿ, ಯೋಜನೆ ಪ್ರಗತಿ ನಿಧಿ ಸಾಲ ನೇರ ಖಾತೆಗೆ ಜಮೆ ಮಾಡುವ ತರಬೇತಿ ಕಾರ್ಯಗಾರ ಆಯೋಜಿಸಲಾಗಿತ್ತು. ಒಕ್ಕೂಟದ ಅಧ್ಯಕ್ಷೆ ಮಹಾನಂದ ಬಮ್ಮಣ್ಣಿ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.
ತಾಲೂಕು ಯೋಜನಾಧಿಕಾರಿ ಗಿರೀಶಕುಮಾರ ಅವರು ತರಬೇತಿ ಕಾರ್ಯಗಾರವನ್ನು ಮಾಹಿತಿ ನೀಡಿದರು. ಆರೋಗ್ಯ ರಕ್ಷಾ ಕೇವಲ 100 ರೂ. ತುಂಬಿದರೆ ಕಾರ್ಡ್ ಮಾಡಲಾಗುವುದು. ಕಾರ್ಡ್‌ದಾರರು ಅನಾರೋಗ್ಯದ ನಿಮಿತ್ತ ಚಿಕಿತ್ಸೆಗಾಗಿ 20ರಿಂದ 50 ಸಾವಿರ ರೂ.ವರೆಗೆ ಸೌಲಭ್ಯ ಕೊಡಲು ಅವಕಾಶ ಕಲ್ಪಿಸಲಾಗುವುದು. ಜೊತೆಗೆ ವಿಶ್ರಾಂತಿ ವೇತನವು ದೊರಕುವುದು ಎಂದು ತಿಳಿಸಿದರು.
ಆರ್ಥಿಕ ಅವ್ಯವಹಾರ ತಡೆಗಟ್ಟುವ ಉದ್ದೇಶದಿಂದ ಸಾಲಗಾರ ಸದಸ್ಯರಿಗೆ ನೇರವಾಗಿ ಅವರ ಖಾತೆಗೆ ಜಮೆ ಪ್ರಗತಿ ನಿಧಿ ಸಾಲವನ್ನು ಜಮೆ ಮಾಡುವುದು. ಹಿಡುವಳಿ ಹಾಕುವುದರ ಮೂಲಕ ಒಂದು ಕುಟುಂಬದ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಮಾಹಿತಿ ನೀಡಿದರು.
ಸಿಂದಗಿ ವಲಯದ ಮೇಲ್ವಿಚಾರಕರಾದ ಸಲೀಮ, ಸೇವಾ ಪ್ರತಿನಿಧಿ ಭಾಗೀರಥಿ, ಒಕ್ಕೂಟದ ಸದಸ್ಯರಾದ ಈಶ್ವರಿ, ಅನ್ನಪೂರ್ಣ, ಗಂಗಾ, ಶ್ರೀದೇವಿ, ಸವಿತಾ, ಮಹಾನಂದ ಸೇರಿದಂತೆ ಸಂಘದ ಸದಸ್ಯರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.