ಶಿವಣಗಿ ಸರ್ಕಾರಿ ಶಾಲೆಗಳಿಗೆ ಹೈಟೆಕ್ ಬೋಧನಾ ಸೌಲಭ್ಯ
Team Udayavani, Feb 5, 2022, 5:18 PM IST
ವಿಜಯಪುರ: ಹೈಟೆಕ್ ತಂತ್ರಜ್ಞಾನದ ಸೌಲಭ್ಯ ಪಡೆದಿರುವ ವಿಜಯಪುರ ತಾಲೂಕಿನ ಶಿವಣಗಿ ಗ್ರಾಮದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳು ಇದೀಗ ಸಾರ್ವಜನಿಕರ ಗಮನ ಸೆಳೆಯುತ್ತಿವೆ.
ಶಿವಣಗಿ ಗ್ರಾಪಂ 14ನೇ ಹಣಕಾಸು ಯೋಜನೆಯಲ್ಲಿ ಗ್ರಾಮಲ್ಲಿರುವ 9 ಸರ್ಕಾರಿ ಶಾಲೆಗಳಿಗೆ ಆಧುನಿಕ ತಂತ್ರಜ್ಞಾನದ ಸ್ಮಾರ್ಟ್ ಕ್ಲಾಸ್ ಬೋಧನಾ ಸೌಲಭ್ಯ ಕಲ್ಪಿಸಲಾಗಿದೆ. ಸ್ಮಾರ್ಟ್ ಕ್ಲಾಸ್ ಗಾಗಿ ಪ್ರೋಜೆಕ್ಟರ್ ಪರದೆ, ಕಾರ್ಡಲೆಸ್ ಮೈಕ್, ಸೌಂಡ್ ಬಾಕ್ಸ್, ರಿಮೋಟ್ ಕಂಟ್ರೋಲ್ ಆಧಾರಿತ ವ್ಯವಸ್ಥೆಯ ಎಲ್ಲ ಸೌಲಭ್ಯಗಳನ್ನೂ ಅಳವಡಿಸಲಾಗಿದೆ.
ಪಿಡಿಒ ಆರ್.ಆರ್. ಬಿರಾದಾರ ಅವರ ವಿಶೇಷ ಕಾಳಜಿಯಿಂದ ಅಲ್ಲಿನ ಸರ್ಕಾರಿ ಶಾಲೆಗಳಿಗೆ ಹೈಟೆಕ್ ಸ್ಪರ್ಶದ ಮೂಲಕ ಸ್ಮಾಟ ನೀಡಲಾಗಿದೆ. ಶಿವಣಗಿಯ ಯುಬಿಎಸ್, ಎಂಪಿಎಸ್, ಕೆಜಿಎಸ್, ಜೀರಗಾಳ ವಸ್ತಿ ಶಾಲೆ, ಹೂವಿನಹರಿ ಶಾಲೆ, ಸೈಯ್ಯದ್ ವಸ್ತಿ ಶಾಲೆ, ಎಚ್. ಕೆ. ಸ್ಕೂಲ್, ಶಿವಣಗಿ ತಾಂಡಾ ಸ್ಕೂಲ್, ಶಿವಣಗಿಯ ಉರ್ದು ಶಾಲೆ ಸೇರಿದಂತೆ 9 ಸರ್ಕಾರಿ ಶಾಲೆಗಳಿಗೆ ಈ ಪರಿಕರ ಅಳವಡಿಸಲಾಗಿದ್ದು ವಿದ್ಯಾರ್ಥಿಗಳು ಆಸಕ್ತಿಯಿಂದ ಬೋಧನೆಯನ್ನು ಆಲಿಸುತ್ತಿದ್ದಾರೆ. ಇದಲ್ಲದೇ ಶಿವಣಗಿ ಗ್ರಾಮದಲ್ಲಿರುವ 11 ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳಿಗೆ ಆಟವಾಡಲು ಗುಣಮಟ್ಟದ ಆಟಿಕೆಗಳನ್ನು ನೀಡಲಾಗಿದೆ.
ಪ್ರತಿ ಅಂಗನವಾಡಿ ಕೇಂದ್ರಗಳಲ್ಲೂ ಗುಣಮಟ್ಟದ 25 ಸಣ್ಣ ಚೇರ್, ಕುದುರೆ, ಸೈಕಲ್ ಗಾಡಿ ಒದಗಿಸಲಾಗಿದೆ. ಆ ಮೂಲಕ ಚಿಣ್ಣರು ಸಂತೋಷದಿಂದ ಆಟಿಕೆಗಳ ಆಟದೊಂದಿಗೆ ಅಕ್ಷರ ಕಲಿಕೆಯಲ್ಲಿ ತೊಡಗಿದ್ದಾರೆ. ಗ್ರಾಪಂ ಚುನಾಯಿತ ಸದಸ್ಯರ ಅವಧಿ ಮುಗಿದಿದ್ದ ಸಂದರ್ಭದಲ್ಲಿ ಆಡಳಿತಾಧಿಕಾರಿ ಎಸ್.ಎಸ್. ನದಾಫ್ ಅವರ ಅವಧಿಯಲ್ಲಿ ಪಿಡಿಒ ಆರ್.ಆರ್. ಬಿರಾದಾರ ಈ ಹೊಸ ತಾಂತ್ರಿಕತೆಯ ಶೈಕ್ಷಣಿಕ ಸೌಲಭ್ಯ ಕಲ್ಪಿಸುವ ಕುರಿತು ಯೋಜಿಸಿದ್ದರು. ಸ್ಥಳೀಯರಿಂದಲೂ ಇದಕ್ಕೆ ಉತ್ತಮ ಸ್ಪಂದನೆ ಸಿಕ್ಕಿತ್ತು. ಪರಿಣಾಮ ಇದೀಗ ಶಿಗಣಗಿ ಸರ್ಕಾರಿ ಶಾಲೆ ಮಾದರಿ ಶಾಲೆಯಾಗಿ ರೂಪುಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.