ಮತಕ್ಷೇತ್ರದ ಅಭಿವೃದ್ಧಿಗೆ ಅತಿ ಹೆಚ್ಚು ಅನುದಾನ: ಸಾಸನೂರ

ಸೌಲಭ್ಯಗಳನ್ನು ಕಲ್ಪಿಸಲು ಸಾಕಷ್ಟು ಅನುದಾನವನ್ನು ತಂದು ಕೆಲಸ ಮಾಡುತ್ತಿದ್ದೇನೆ

Team Udayavani, Sep 19, 2022, 6:38 PM IST

ಮತಕ್ಷೇತ್ರದ ಅಭಿವೃದ್ಧಿಗೆ ಅತಿ ಹೆಚ್ಚು ಅನುದಾನ: ಸಾಸನೂರ

ತಾಳಿಕೋಟೆ: ದೇವರಹಿಪ್ಪರಗಿ ಮತಕ್ಷೇತ್ರದ ಸಮಗ್ರ ಅಭಿವೃದ್ಧಿ ದೃಷ್ಟಿಕೋನದಿಂದ ಕೆಲಸಗಳನ್ನು ಮಾಡುತ್ತ ಬಂದಿದ್ದೇನೆ ಅದರಂತೆ ಕುಡಿಯುವ ನೀರು, ಗ್ರಾಮೀಣ ರಸ್ತೆ, ನೀರಾವರಿ ಯೋಜನೆಗಳಿಗೆ ಒತ್ತು ನೀಡಿದ್ದೇನೆಂದು ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಹೇಳಿದರು.

ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಉಪ ವಿಭಾಗ ಮುದ್ದೇಬಿಹಾಳ 2021-22ನೇ ಲೆಕ್ಕ ಶಿರ್ಷಿಕೆ 5054 ಅಂಪೇಂಡಿಕ್ಸ್‌-ಇ ರಾಜ್ಯ ಹೆದ್ದಾರಿ ರಸ್ತೆ ಸುಧಾರಣೆ ತಾಳಿಕೋಟೆ ತಾಲೂಕಿನ ಹುನಗುಂದ-ಸುರಪುರ-ರಾಜ್ಯ ಹೆದ್ದಾರಿ 60 ಕಿ.ಮೀ. 70.23 ರಿಂದ 73.20ರವರೆಗೆ ಅಭಿವೃದ್ಧಿಪಡಿಸುವ 495.00 ಲಕ್ಷ ರೂ. ರಸ್ತೆ ಕಾಮಗಾರಿಗೆ ಹಾಗೂ 4 ಕೋಟಿ ರೂ. ವೆಚ್ಚದಲ್ಲಿಯ ಭಂಟನೂರ ಗ್ರಾಮದಲ್ಲಿ ನಡೆದ ಗೊಟಗುಣಕಿ-μàರಾಪುರ ವ್ಹಾಯಾ ಭಂಟನೂರ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ದೇವರಹಿಪ್ಪರಗಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 120 ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳಾದ ನೀರು, ರಸ್ತೆ, ವಿದ್ಯುತ್‌, ಹಾಗೂ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸಲು ಸಾಕಷ್ಟು ಅನುದಾನವನ್ನು ತಂದು ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ದನಾಗಿದ್ದೇನೆ. ವಿಜಯಪುರ ಮುಖ್ಯ ಕಾಲುವೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ.

ಇನ್ನೂ ಉಪ ಕಾಲುವೆ ಹಾಗೂ ಹೊಲಗಾಲುವೆಗಳ ನಿರ್ಮಾಣಕ್ಕೆ ಸರ್ಕಾರದಿಂದ 524 ಕೋಟಿ ರೂ. ಮಂಜೂರಾತಿ ಸಿಕ್ಕಿದೆ. ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಗೊಳ್ಳಲಿದೆ ಅದರಂತೆ ಬೂದಿಹಾಳ-ಫೀರಾಪುರ ಏತ ನೀರಾವರಿಗೆ ಸಂಬಂದಿಸಿ ಹೊಲಗಾಲುವೆ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಕೊಡಗಾನೂರ ಗ್ರಾಮಕ್ಕೆ ಆಗಮಿಸಿದಾಗ ನೀಡಿದ ಭರವಸೆಯಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಅದರಂತೆ 152 ಕೋಟಿ ರೂ. ಮಂಜುರಾತಿಯನ್ನು ಅ ವೇಶನದೊಳಗೆ ನೀಡುವದಾಗಿ ತಿಳಿಸಿದ್ದಾರೆ, ಗ್ರಾಮೀಣ ರಸ್ತೆ ಸಂಪರ್ಕ ರಸ್ತೆಗಳ ನಿರ್ಮಾಣಕ್ಕೆ ಒತ್ತು ನೀಡಲಾಗಿದ್ದು ತಾಳಿಕೋಟೆಯಿಂದ ಕೊಡಗಾನೂರ-ಫೀರಾಪುರ, ತಾಳಿಕೋಟೆ-ಗಡಿಸೋಮನಾಳ-ಗೊಟಗ ‌ುಣಕಿ ವ್ಹಾಯಾ ಫೀರಾಪುರ ಕ್ರಾಸ್‌ವರೆಗೆ ರಸ್ತೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು ಕೆಲವು ಕಾಮಗಾರಿಗಳು ಟೆಂಡರ್‌ ಹಂತದಲ್ಲಿವೆ.

ಇನ್ನೂ ಕೆಲವು ಕಾಮಗಾರಿಗಳ ಟೆಂಡರ್‌ ಮುಗಿದಿದ್ದು ಶೀಘ್ರದಲ್ಲಿ ಕಾಮಗಾರಿಗಳನ್ನು ಆರಂಭಿಸಲಾಗುವದು. ತಾಳಿಕೋಟೆಯಿಂದ ಬಿಳೇಭಾವಿ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ನಿರ್ಮಾಣದ ಟೆಂಡರ್‌ ಪ್ರಕ್ರಿಯೆ ಮುಗಿದಿದ್ದು 15 ದಿನಗಳಲ್ಲಿ ಕಾಮಗಾರಿಗೆ ಚಾಲನೆ ನೀಡಲಿದ್ದೇನೆಂದ ಅವರು,. ಮತಕ್ಷೇತ್ರದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಎಲ್ಲ ಗ್ರಾಮಗಳಿಗೆ ಜಲ ಜೀವನ್‌ ಮಶೀನ ಅಡಿಯಲ್ಲಿ ಪ್ರತಿ ಮನೆಗಳಿಗೆ ನಳ ಸಂಪರ್ಕ ಕಾರ್ಯ ನಡೆಯುತ್ತಿದೆ ಅವುಗಳು ಮುಕ್ತಾಯಗೊಂಡರೆ ಕುಡಿಯುವ ನೀರಿನ ತಾಪತ್ರೆಯ ಸಂಪೂರ್ಣ ದೂರಾಗಲಿದೆ ಎಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಭುಗೌಡ ಬಿರಾದಾರ (ಅಸ್ಕಿ), ಸಂಗನಗೌಡ ಹೆಗರಡ್ಡಿ, ಮಂಡಲ ಅಧ್ಯಕ್ಷ ಭೀಮನಗೌಡ ಸಿದರಡ್ಡಿ, ಶೇಖರಗೌಡ ತಂಗಡಗಿ, ಬಸನಗೌಡ ಪಾಟೀಲ (ಲಕ್ಕುಂಡಿ), ಮುತ್ತು ದೇಸಾಯಿ ಶಂಕರಗೌಡ ದೇಸಾಯಿ, ಸೋಮನಗೌಡ ಹಾದಿಮನಿ, ಸಿದ್ದು ಬುಳ್ಳಾ, ಜಿಪಂ ಮಾಜಿ ಸದಸ್ಯ ಸಾಹೇಬಣ್ಣ ಆಲ್ಯಾಳ, ಪ್ರಶಾಂತ ಹಾವರಗಿ, ಪ್ರಧಾನ ಕಾರ್ಯದರ್ಶಿ ಬೀಮನಗೌಡ ಲಚ್ಯಾಣ, ಗುರುಗೌಡ ಗುರಡ್ಡಿ, ನಿಂಗನಗೌಡ ಕೊಡಗಾನೂರ, ಮುತ್ತುಗೌಡ ಮಾಳಿ, ಗುತ್ತಿಗೆದಾರ ರಮೇಶ ಕವಲಗಿ, ಮಾಜಿ ಟಿ.ಪಿ ಬಸನಗೌಡ ಪೀರಾಪೂರ, ಬಿ.ಎಂ. ಪಾಟೀಲ (ತಮದಡ್ಡಿ), ಕಿರಿಯ ಅಭಿಯಂತರ ಡಿ.ಬಿ. ಕಲಬುರ್ಗಿ ಇದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.