ಇಂದು ಹೈವೋಲ್ಟೇಜ್ ಪ್ರಚಾರ
Team Udayavani, May 8, 2018, 12:30 PM IST
ವಿಜಯಪುರ: ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ದಿನ ಹತ್ತಿರವಾಗುತ್ತಿದ್ದಂತೆ ವಿಜಯಪುರ ಜಿಲ್ಲೆಯಲ್ಲಿ ಪ್ರಚಾರದ ಕಾವು ಜೋರಾಗುತ್ತಿದೆ. ಮಂಗಳವಾರ ಮೇ 8ರಂದು ಒಂದೇ ದಿನ ಕೇವಲ 20 ಕಿ.ಮೀ. ಅಂತರದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಬಲಾಬಲ ಪ್ರದರ್ಶನಕ್ಕೆ ವೇದಿಕೆ ಸಿದ್ಧಪಡಿಸಿವೆ. ಬಿಜೆಪಿ ಪರ ಪ್ರಧಾನಿ ಮೋದಿ, ಕಾಂಗ್ರೆಸ್ ಪರ ಸೋನಿಯಾ ಗಾಂಧಿ ಪ್ರಚಾರ ಕಣಕ್ಕೆ ಇಳಿದಿದ್ದು ಜಿಲ್ಲೆಯಲ್ಲಿ ಹೈವೋಲ್ಟೆಜ್ ಸೃಷ್ಟಿಸಿದೆ.
ಸಚಿವ ಎಂ.ಬಿ. ಪಾಟೀಲ ಸ್ಪ ರ್ಧಿಸುತ್ತಿರುವ ಬಬಲೇಶ್ವರ ಕ್ಷೇತ್ರ ವ್ಯಾಪ್ತಿಯ ಸಾರವಾಡ ಗ್ರಾಮದಲ್ಲಿ ಮೇ 8ರಂದು ಬೆಳಗ್ಗೆ
10ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪರ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಂಡು
ಮಾತನಾಡಲಿದ್ದಾರೆ. ಮತ್ತೂಂದೆಡೆ ಕೆಲವೇ ಗಂಟೆಗಳಲ್ಲಿ ವಿಜಯಪುರ ನಗರಕ್ಕೆ ಬಂದಿಳಿಯುವ ಕಾಂಗ್ರೆಸ್ ವರಿಷ್ಠ ನಾಯಕಿ ಸೋನಿಯಾ ಗಾಂಧಿ, ನಗರದ ಎಎಸ್‌ಪಿ ವಾಣಿಜ್ಯ ಕಾಲೇಜು ಮೈದಾನದಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ.
ಅತಿ ಭದ್ರತೆ ಬಯಸುವ ಆಡಳಿತ ಹಾಗೂ ವಿಪಕ್ಷದ ರಾಷ್ಟ್ರೀಯ ಪಕ್ಷಗಳ ಇಬ್ಬರು ಅತಿಗಣ್ಯ ನಾಯಕರು ಜಿಲ್ಲೆಗೆ ಆಗಮಿಸುತ್ತಿರುವ ಕಾರಣ ಎಸ್‌ಪಿಜಿ ತಂಡ ಹದ್ದಿನ ಕಣ್ಣಿಟ್ಟು, ಭದ್ರತೆ ಕಾರ್ಯದ ಬಿಗಿ ಸಿದ್ಧತೆ ನಡೆಸಿದೆ. ಪದೇ ಪದೇ ಭದ್ರತೆ ಪರಿಶೀಲನೆ ನಡೆಸುತ್ತಿದೆ. ಸ್ಥಳೀಯ ಪೊಲೀಸರು ಎಸ್‌ಪಿಜಿ ಕಮಾಂಡೋಗಳಿಗೆ ನೆರವು ನೀಡುತ್ತಿದ್ದಾರೆ.
ಸಾರವಾಡದಲ್ಲಿ ಸಿದ್ಧತೆ: ಪ್ರಧಾನಿ ಮೋದಿ ಪಾಲ್ಗೊಳ್ಳುವ ಸಾರವಾಡ ಸಮಾವೇಶದ ಸಿದ್ಧತೆ ಪರಿಶೀಲಿಸಲು ನವದೆಹಲಿಯಿಂದ ದೆಹಲಿ ರಾಜ್ಯ ವಿಧಾನಸಭೆ ವಿಪಕ್ಷ ನಾಯಕ ವಿಜಯೇಂದ್ರ ಗುಪ್ತಾ ಉಸ್ತುವಾರಿಯಲ್ಲಿ ವಿಜಯಪುರ ಜಿಲ್ಲಾ ಚುನಾವಣಾ ಉಸ್ತುವಾರಿ ಅಶೋಕ ಅಲ್ಲಾಪುರ ಸಾರಥ್ಯದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಿ ಭಾಷಣ ಮಾಡುವ ವೇದಿಕೆ 32 ಉದ್ದ-60 ಅಗಲದ ಬೃಹತ್ ವೇದಿಕೆ ರೂಪಿಸಿದೆ. 1.50 ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಹಿನ್ನೆಲೆಯಲ್ಲಿ ವೇದಿಕೆ ಮುಂಭಾಗ 70 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರು, ಗಣ್ಯರು, ಅತಿ ಗಣ್ಯರಿಗೆ ಪ್ರತ್ಯೇಕ ಭಾಗದ ಮೂಲಕ ಆಸನದ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗೂ ಇಡಿ ಕಾರ್ಯಕ್ರಮದ ಸ್ಪಷ್ಟ ವೀಕ್ಷಣೆಗಾಗಿ 3 ಸಾವಿರ ಜನರಿಗೆ ಒಂದರಂತೆ 35 ಬೃಹತ್ ಎಲ್‌ಡಿಇ ಪರದೆ ಅಳವಡಿಸಿದೆ.
ಇತ್ತ ಸಮಾವೇಶಕ್ಕೆ ಸುಮಾರು 5 ಸಾವಿರ ವಾಹನಗಳು ಆಗಮಿಸುವ ನಿರೀಕ್ಷೆ ಇರುವ ಕಾರಣ ವಾಹನ ನಿಲುಗಡೆಗೆ ದದಾಮಟ್ಟಿ ಹಾಗೂ ಡೋಣಿ ಬಳಿ ಬಳಿ ಶಿಸ್ತಿನ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಬಬಲೇಶ್ವರ ಭಾಗದಿಂದ ಬರುವ ವಾಹನಗಳ ನಿಲುಗಡೆಗೆ ಡೋಣಿ ವಿಶಾಲ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ವೇದಿಕೆ ಮುಂಭಾಗದಲ್ಲಿ ಸಾರ್ವಜನಿಕರು ಬಿಸಿಲಿನ ಧಗೆ, ಮಳೆಯಿಂದ ರಕ್ಷಿಸಿಕೊಳ್ಳಲು ಪೆಂಡಾಲ್ ಹಾಕಲಾಗಿ¨
ಸೋನಿಯಾ ಆಗಮನಕ್ಕೆ ವೇದಿಕೆ: ಚುನಾವಣೆ ಪ್ರಚಾರ ಕಾರ್ಯದಿಂದ ಸುಮಾರು ಒಂದೂವರೆ ವರ್ಷದಿಂದ ದೂರವೇ ಇದ್ದ ಕಾಂಗ್ರೆಸ್ ವರಿಷ್ಠ ನಾಯಕಿ ಸೋನಿಯಾ ಗಾಂಧಿ, ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಸಮ್ಮತಿ ಸೂಚಿಸಿದ್ದಾರೆ. ಇದಕ್ಕಾಗಿ ವಿಜಯಪುರ ಜಿಲ್ಲೆಯನ್ನೇ ಆಯ್ಕೆ ಮಾಡಿಕೊಂಡಿರುವ ಅವರು, ಮೇ 8ರಂದು ಮಧ್ಯಾಹ್ನ 3ಕ್ಕೆ ನಗರಕ್ಕೆ ಬರುತ್ತಿದ್ದಾರೆ.
ನಗರದ ಸೊಲ್ಲಾಪುರ ರಸ್ತೆಯಲ್ಲಿರುವ ಬಿಎಲ್ ಡಿಇ ಸಂಸ್ಥೆಯ ಎಎಸ್‌ಪಿ ನೂತನ ಕಾಲೇಜು ಕ್ಯಾಂಪಸ್‌ನಲ್ಲಿ ಸೋನಿಯಾ ಆಗಮನಕ್ಕಾಗಿ ಕಾಂಗ್ರೆಸ್ ಸಮಾವೇಶಕ್ಕೆ ಸಕಲ ಸಿದ್ಧತೆ ನಡೆದಿದೆ. 30 ಉದ್ದ-60 ಅಗಲದ ಬೃಹತ್ ವೇದಿಕೆ ರೂಪಿಸಿದ್ದು ವೇದಿಕೆ ಮುಂಭಾಗದಲ್ಲಿ 50 ಸಾವಿರ ಜನರು ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದೆ.
ಸಮಾವೇಶಕ್ಕೆ ಆಗಮಿಸುವ ಕಾಯಕರ್ತರಿಗೆ ಬಿಸಿಲಿನ ಧಗೆ ನೀಗಿಸಿಕೊಳ್ಳಲು ಕುಡಿಯುವ ನೀರಿನ ಜೊತೆಗೆ ಮಜ್ಜಿಗೆ ವ್ಯವಸ್ಥೆ ಮಾಡಿದೆ. ಸಮಾವೇಶದ ಸಿದ್ಧತೆ ಉಸ್ತುವಾರಿ ನೋಡಿಕೊಳ್ಳಲು ಎಐಸಿಸಿ ಕಾರ್ಯದರ್ಶಿ ಮಾಣಿಕಂ ಠಾಗೋರ ರವಿವಾರವೇ ನಗರಕ್ಕೆ ಆಗಮಿಸಿದ್ದು, ಸಚಿವ ಎಂ.ಬಿ.ಪಾಟೀಲ ಅವರೊಂದಿಗೆ ಸಿದ್ಧತೆಗಳ ಪರಿಶೀಲನೆ ನಡೆಸಿದ್ದಾರೆ.ಪುತ್ರ ರಾಹುಲ್ ಗಾಂಧಿ ಅವರಿಗೆ ಪಕ್ಷದ ಹೊಣೆ ಹೊರಿಸಿದ ಬಳಿಕ ಚುನಾವಣಾ ಪ್ರಚಾರದಿಂದ ಸೋನಿಯಾ ಗಾಂಧಿ ಬಹುತೇಕ ದೂರವೇ ಉಳಿದಿದ್ದರು. ಆದರೆ ಕಾಂಗ್ರೆಸ್ ಪಾಲಿಗೆ ಅಸ್ತಿತ್ವ ಉಳಿಸಿಕೊಳ್ಳಲು ಕರ್ನಾಟಕದಲ್ಲಿ ಚುನಾವಣೆ ಗೆಲ್ಲುವ ಅನಿವಾರ್ಯ ಹಾಗೂ ಅಗತ್ಯವಿದೆ. ಇದಕ್ಕಾಗಿ ಪಕ್ಷದ ಗೆಲುವಿಗಾಗಿ ತಮ್ಮ ಆಗಮನ ಸ್ಫೂರ್ತಿ ನೀಡುವ ನಿರೀಕ್ಷೆಯಿಂದ ಸೋನಿಯಾ ಗಾಂಧಿ ಕರ್ನಾಟಕಕ್ಕೆ ಏಕೈಕ ಪ್ರಚಾರಕ್ಕೆ ಹೊರಟು ನಿಂತಿದ್ದಾರೆ. ಇದಕ್ಕಾಗಿ ಉತ್ತರ ಕರ್ನಾಟಕದ ಪ್ರಚಾರಕ್ಕೆ ಬಸವ ಜನ್ಮಭೂಮಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಭದ್ರತೆ ಹಾಗೂ ಸಮಯದ ಉಳಿತಾಯಕ್ಕಾಗಿ ಸೋನಿಯಾ ಅವರ ಹೆಲಿಕಾಪ್ಟರ್ ಇಳಿಸಲು ಸಮಾವೇಶ ವೇದಿಕೆ ಪಕ್ಕದಲ್ಲೇ ಹೆಲಿಪ್ಯಾಡ್ ನಿರ್ಮಿಸಲಾಗಿದೆ.
2.50 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಸೂಕ್ತ ಆಸನದ ವ್ಯವಸ್ಥೆ ಮಾಡಲಾಗಿದೆ. ಕಾಲೇಜು ಮೈದಾನದಲ್ಲೇ ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಹಾಗೂ ಬಬಲೇಶ್ವರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ.ಪಾಟೀಲ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
MUST WATCH
ಹೊಸ ಸೇರ್ಪಡೆ
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.