ಅಪಘಾತ ತಡೆಗೆ ಹೆದ್ದಾರಿ ತಡೆದು ಪ್ರತಿಭಟನೆ
Team Udayavani, Dec 4, 2021, 6:11 PM IST
ನಿಡಗುಂದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ಪದಾಧಿಕಾರಿಗಳು ಪಟ್ಟಣದ ಬಸ್ ನಿಲ್ದಾಣದ ಬಳಿ ಕೆಲ ಕಾಲ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಸತೀಶ ಕೊಡಲಗಿ ಹಾಗೂ ಪಿಎಸ್‌ಐ ಅವರಿಗೆ ಮನವಿ ಸಲ್ಲಿಸಿದರು.
ರೈತ ಮುಖಂಡ ಬಸವರಾಜ ಕುಂಬಾರ, ರೈತ ಸಂಘದ ತಾಲೂಕು ಅಧ್ಯಕ್ಷ ತಿರುಪತಿ ಬಂಡಿವಡ್ಡರ ಮಾತನಾಡಿ, ಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಗಾಗ ಅಪಘಾತಗಳು ಸಂಭವಿಸುತ್ತಿವೆ. ಆದರೂ ಸಂಬಂಧಿಸಿದ ಅ ಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ನಿಡಗುಂದಿ ಪಟ್ಟಣ ತಾಲೂಕು ಕೇಂದ್ರವಾಗಿದ್ದರಿಂದ ತಾಲೂಕಿನ ಎಲ್ಲ ಗ್ರಾಮಸ್ಥರು, ರೈತರು ಆಗಮಿಸುತ್ತಾರೆ. ಜತೆಗೆ ಪ್ರವಾಸಿತಾಣವಾದ ಆಲಮಟ್ಟಿ ಹಾಗೂ ಯಲಗೂರು, ಯಲ್ಲಮ್ಮನ ಬೂದಿಹಾಳ ಸೇರಿದಂತೆ ವಿವಿಧ ಸುಕ್ಷೇತ್ರಗಳಿಗೆ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ವಿದ್ಯಾಭ್ಯಾಸಕ್ಕಾಗಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸುತ್ತಿದ್ದು, ಜೀವ ಕೈಯಲ್ಲಿ ಹಿಡಿದು ಈ ಹೆದ್ದಾರಿ ದಾಟುವಂತಾಗಿದೆ. ಹೀಗಾಗಿ ಕೂಡಲೇ ಬೃಹದಾಕಾರದ ರೋಡ್ ಬ್ರೇಕ್ ಅಳವಡಿಸಿ ಬಿಳಿ ಬಣ್ಣದ ಪಟ್ಟಿ ಹಾಕಬೇಕು. ಅಲ್ಲದೇ ಸಿಗ್ನಲ್ ಅಳವಡಿಸುವಂತೆ ಆಗ್ರಹಿಸಿದರು.
ಈ ವೇಳೆ ಶಿವಪ್ಪ ಪಾಟೀಲ, ಸುಭಾಷ ಚೌಪಡೆ, ಮಲ್ಲಯ್ಯ ನಾಗೂರಮಠ, ಶಿವಪ್ಪ ಬೇವಿನಮಟ್ಟಿ, ಪೀರಸಾಬ ನದಾಫ್, ಮುದುಕಪ್ಪ ವಾಲಿಕಾರ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.