ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿಗೆ ರಾಜ್ಯ ಸರ್ಕಾರದಿಂದ ಗೌರವ
Team Udayavani, Jul 26, 2017, 12:40 PM IST
ವಿಜಯಪುರ: ಭಾರತ ಮಹಿಳಾ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದು ಮಹಿಳಾ ವಿಶ್ವಕಪ್‌ನಲ್ಲಿ ತಂಡವನ್ನು ಅಂತಿಮ ಘಟ್ಟಕ್ಕೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ವಿಜಯಪುರದ ಬೌಲರ್ ರಾಜೇಶ್ವರಿ ಗಾಯಕವಾಡ ಅವರಿಗೆ ರಾಜ್ಯ ಸರ್ಕಾರ ವಿಶೇಷ ಗೌರವ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಂ.ಬಿ. ಪಾಟೀಲ ತಿಳಿಸಿದ್ದಾರೆ. ಗುಮ್ಮಟ ನಗರಿ ಬಾಲೆ ರಾಜೇಶ್ವರಿ ಗಾಯಕವಾಡ ಸಾಧನೆ ಕುರಿತು ಹೆಮ್ಮೆ ಎನಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿರುವ ಸಚಿವರು, ರಾಜೇಶ್ವರಿ ಬಿಎಲ್‌ಡಿಇ ಸಂಸ್ಥೆಯ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿ ಆಗಿದ್ದಾಗಲೇ ಕ್ರಿಕೆಟ್ ಆಟದಲ್ಲಿ ಮಿಂಚಿದ್ದರು. ಬಡ ಕುಟುಂಬದಿಂದ ಬಂದು ಇಡಿ ದೇಶವೇ ಬೆರಗಾಗುವಂತೆ ಸಾಧನೆ ತೋರಿದ ರಾಜೇಶ್ವರಿಯ ಕ್ರೀಡಾ ಕಾರ್ಯಗಳಿಗೆ ಬಿಎಲ್‌ಡಿಇ ಸಂಸ್ಥೆ ಅಗತ್ಯ ಪ್ರೋತ್ಸಾಹ ನೀಡಿತ್ತು ಎಂದಿದ್ದಾರೆ. ರಾಜ್ಯ ಸರ್ಕಾರ ಗೌರವ ಮಾತ್ರವಲ್ಲದೇ ವಿಜಯಪುರ ನಗರದಲ್ಲೂ ಶೀಘ್ರವೇ ಸನ್ಮಾನಿಸುವುದಾಗಿ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.