ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿಗೆ ಸರ್ಕಾರ ಅಸ್ತು


Team Udayavani, Aug 27, 2022, 5:17 PM IST

14-irrigation

ವಿಜಯಪುರ: ಬರದ ನಾಡು ವಿಜಯಪುರ ಜಿಲ್ಲೆಯ ನೀರಾವರಿ ವಂಚಿತ ಪ್ರದೇಶಕ್ಕೆ ನೀರಾವರಿ ಕಲ್ಪಿಸಲು ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ರಾಜ್ಯ ಸರ್ಕಾರದ ಸಚಿವ ಸಂಪುಟ ಅನುಮೋದನೆ ನೀಡಿದ್ದಕ್ಕೆ ಜಿಲ್ಲೆಯ ರೈತರು ಕೃತಜ್ಞತೆ ಸಲ್ಲಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲೆಯ ನೀರಾವರಿ ಹೋರಾಟಗಾರ ಹಾಗೂ ಭಾರತೀಯ ಕಿಸಾನ್‌ ಸಂಘದ ರಾಜ್ಯ ಮುಖಂಡ ಗುರುನಾಥ ಬಗಲಿ, ಅಣ್ಣಪ್ಪ ಖೈನೂರ, ಸದರಿ ನೀರಾವರಿ ಯೋಜನೆ ಅನುಷ್ಠಾನದ ವಿಷಯದಲ್ಲಿ ತಾವು ಹಾಗೂ ತಮ್ಮೊಂದಿಗೆ ಹಲವು ರೈತ ಮುಖಂಡರು ನೀಡಿದ ಸಹಕಾರ ಹಾಗೂ ಹೋರಾಟವನ್ನು ವಿವರಿಸಿದರು.

ಕುಡಿಯುವ ನೀರಿಗೂ ತತ್ವಾರ ಇರುವ ನಮ್ಮ ಪ್ರದೇಶಕ್ಕೆ ಕೃಷ್ಣಾ ಮೇಲ್ದಂಡೆ ಯೋಜನೆ ಅಡಿಯಲ್ಲಿ ನೀರಾವರಿ ಕಲ್ಪಿಸಬೇಕಿತ್ತು. ಇದಕ್ಕಾಗಿ ಏತ ನೀರಾವರಿ ಯೋಜನೆ ರೂಪಿಸಿ ಎಂದು ಮೂರು ದಶಕಗಳಿಂದ ಹೋರಾಡುತ್ತಲೇ ಬಂದಿದ್ದೇವೆ. 2007ರಲ್ಲಿ ಹೊರ್ತಿ ಗ್ರಾಮದಲ್ಲಿ ಅಹರ್ನಿಸಿ ಹೋರಾಟ ನಡೆಸಿದ್ದೆವು ಎಂದು ವಿವರಿಸಿದರು.

ಇದೀಗ ನಮ್ಮ ಭಾವನೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ಮೂರು ಹಂತದಲ್ಲಿ ಯೋಜನೆ ಅನುಷ್ಠಾನಕ್ಕೆ ಒಪ್ಪಿಗೆ ಸೂಚಿಸಿ ಮೊದಲ ಹಂತದ ಯೋಜನೆಗೆ ಅನುದಾನ ನೀಡಲು ಮುಂದಾಗಿರುವುದು ಸ್ವಾಗತಾರ್ಹ ಕ್ರಮ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಸಚಿವ ಸಂಪುಟ ಎಲ್ಲ ಸಚಿವರು ಹಾಗೂ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಸದರಿ ನೀರಾವರಿ ಯೋಜನೆ ಹೋರಾಟಗಾರರು ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ನಮ್ಮ ಹೋರಾಟದ ಫಲವಾಗಿ ಇದೀಗ ಜಿಲ್ಲೆಯ ಇಂಡಿ, ವಿಜಯಪುರ, ಚಡಚಣ ತಾಲೂಕುಗಳ 55 ಹಳ್ಳಿಗಳ ನೀರಾವರಿ ಸೌಲಭ್ಯ ಪಡೆಯುವ ಅವಕಾಶ ಬಂದಿದೆ. 2638 ಕೋಟಿ ರೂ. ವೆಚ್ಚದ ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಕಲ್ಪಿಸುವ ಮೂಲಕ ಬಂಜರು ನೆಲವನ್ನು ನಂದನವನ ಮಾಡುವ ಕನಸು ನನಸಾಗುತ್ತಿರುವುದು ಸಂತಸ ಮೂಡಿಸಿದೆ ಎಂದರು.

30 ವರ್ಷಗಳಿಂದ ನಮ್ಮ ಭಾಗದ ರೈತರು ನಡೆಸುತ್ತಿದ್ದ ಹೋರಾಟಕ್ಕೆ ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಇದೀಗ ಸ್ಪಂದಿಸುವ ಮೂಲಕ ತಮ್ಮ ತವರು ಜಿಲ್ಲೆಗೆ ಮಹತ್ವಾಕಾಂಕ್ಷೆಯ ಏತ ನೀರಾವರಿ ಯೋಜನೆಗೆ ಕೊಡುಗೆ ನೀಡಿದ್ದಾರೆ. ಇದಕ್ಕಾಗಿ ಅವರನ್ನು ಅಭಿನಂದಿಸುವುದು ನಮ್ಮ ಆದ್ಯ ಕರ್ತವ್ಯವೂ ಹೌದು ಎಂದರು.

ನಮ್ಮ ಭಾಗದಲ್ಲಿ ಸಾವಿರಾರು ಅಡಿ ಆಳ ಕೊಳವೆ ಬಾವಿ ಕೊರೆದರೂ ಬೊಗಸೆ ನೀರು ಸಿಗುತ್ತಿರಲಿಲ್ಲ. ಪ್ರತಿ ರೈತರೂ ನೀರಿಗಾಗಿ ಹಪಾಹಪಿಸಿ ಹತ್ತಾರು ಕೊಳವೆ ಬಾವಿ ಕೊರೆಸಿ, ಲಕ್ಷ ಲಕ್ಷ ರೂ. ಸಾಲಗಾರರಾಗಿದ್ದರು. ಇದೀಗ ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಅನುಷ್ಠಾನದಿಂದ ನೀರಿನ ತತ್ವಾರದ ದುಸ್ಥಿತಿಗೆ ತೆರೆ ಬೀಳಲಿದೆ ಎಂದರು.

ಭಾರತೀಯ ಕಿಸಾನ್‌ ಸಂಘದ ರಾಜ್ಯಾಧ್ಯಕ್ಷ ಭೀಮಸೇನ ಕೋಕರೆ, ಜಿಲ್ಲಾಧ್ಯಕ್ಷ ಮಲ್ಲನಗೌಡ ಪಾಟೀಲ, ಪಾಲಿಕೆ ಮಾಜಿ ಸದಸ್ಯ ರವೀಂದ್ರ ಲೋಣಿ ಇದ್ದರು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.