ಹೊರ್ತಿ ಶಾಲಾ ಪ್ರಾರಂಭೋತ್ಸವ
Team Udayavani, Jun 1, 2018, 11:49 AM IST
ಇಂಚಗೇರಿ: ಹೊರ್ತಿ ಗ್ರಾಮದಲ್ಲಿ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭೋತ್ಸವ ಜರುಗಿತು. ಶಾಲೆ ಪ್ರಾರಂಭೋತ್ಸವ ಅಂಗವಾಗಿ ವಿದ್ಯಾರ್ಥಿಗಳು ಗ್ರಾಮದಲ್ಲಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.
ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ ಘೋಷಣೆಯೊಂದಿಗೆ ಜಾಗೃತಿ ಮೂಡಿಸಲಾಯಿತು. ನಂತರ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಜರುಗಿತು. ಗ್ರಾಪಂ ಮಾಜಿ ಸದಸ್ಯ ಶರಣಬಸು ಡೊಣಗಿ ಮಾತನಾಡಿ, ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುವ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಮಕ್ಕಳ ಹಾಜರಾತಿ ಹೆಚ್ಚಳ ಇರುವ ಕಾರಣ ಈಗಾಗಲೆ ಉತ್ತಮ ಶಾಲೆ ಎಂದು ಹೆಸರು ಪಡೆದಿದೆ ಎಂದರು.
ಶಿಕ್ಷಕರು ಎ.ಕೆ. ಬಾಗಾಯತ್ ಮಾತನಾಡಿ, ಶಾಲೆ ಆರಂಭವಾದ ದಿನದಿಂದಲೇ ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಮಕ್ಕಳ ಕಲಿಕೆಗೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದರು.
ಶಾಲೆಯಲ್ಲಿ ದೊರೆಯುವ ಸೌಲಭ್ಯ ಪಡೆದು ಗುಣಮಟ್ಟದ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗೈರಾಗದಂತೆ
ಪಾಲಕರು ಗಮನ ಹರಿಸಬೇಕು. ಶಿಕ್ಷಕರೊಂದಿಗೆ ಪಾಲಕರು ಕೈಜೋಡಿಸಿದಾಗ ಮಾತ್ರ ಗುಣಮಟ್ಟದ ಶಿಕ್ಷಣ ಸಿಗುವುದರೊಂದಿಗೆ ಉತ್ತಮ ಶಾಲೆ ಎನಿಸಿಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಪಾಲಕರ ಸಹಕಾರ ಅಗತ್ಯವಿದೆ ಎಂದು ಹೇಳಿದರು ಕಾರ್ಯ ಕ್ರಮದಲ್ಲಿ ಗುರಪ್ಪ ಪೂಜಾರಿ, ಚಂದ್ರಶೇಖರ ವಡೆಯರ್, ಎಸ್. ಬಿ. ಬಳ್ಳೊಳಿ, ಸೋಮಶೇಖರ ಮಕಣಾಪುರ, ಆರ್.ಕೆ. ಉಟ್ಟಿಗಿ, ಎಚ್. ಎಚ್. ಹೂಗಾರ, ಎಚ್.ಎಚ್. ಹುಸೇನನಾಯಕ, ಎಸ್.ಆರ್. ಕಟ್ಟಿಮನಿ, ವಿದ್ಯಾರ್ಥಿಗಳು, ಪಾಲಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.