Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Team Udayavani, May 1, 2024, 2:23 PM IST
ವಿಜಯಪುರ : ಇಬ್ಬರು ಯುವಕರು ಗೃಹಿಣಿಯೊಬ್ಬಳಿಗೆ ಜೀವ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದಾರೆ. ಘಟನೆಯನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಸಂತ್ರಸ್ತೆ ತನ್ನ ಮಗನೊಂದಿಗೆ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಜಿಲ್ಲೆ ಬಸವನಬಾಗೇವಾಡಿ ತಾಲೂಕಿನಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲೇ ಘಟನೆ ನಡೆದಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ.
32 ವರ್ಷದ ಗೃಹಿಣಿಯನ್ನು ಅದೇ ಗ್ರಾಮದ ಇಬ್ಬರು ಆರೋಪಿಗಳಲ್ಲಿ ಒಬ್ಬನ ಮನೆಗೆ ಕರೆದೊಯ್ದು ಜೀವಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದಾಗಿ ದೂರಲಾಗಿದೆ.
ಆಕಾಶ ಹಡಗಲಿ ಹಾಗೂ ಅಭಿಷೇಕ ಸಜ್ಜನ ಎಂಬ ಇಬ್ಬರು ಗೃಹಿಣಿಯನ್ನು ಬೆದರಿಸಿ ಆಕಾಶ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಅತ್ಯಾಚಾರ ಘಟನೆಯನ್ನು ಚಿತ್ರೀಕರಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಹರಿಬಿಟ್ಟಿದ್ದಾರೆ.
ಅತ್ಯಾಚಾರ ಹಾಗೂ ವಿಡಿಯೋ ಮಾಡಿರುವುದನ್ನು ಯಾರಿಗಾದರೂ ಹೇಳಿದರೆ ಸಾಮಾಜಿಕ ಜಾಲತಾಣದ ಮೂಲಕ ವಿಡಿಯೋ ಹಂಚುವುದಾಗಿ ಹಾಗೂ ಕೊಲೆ ಮಾಡಿ ಶವವೂ ಸಿಗದಂತೆ ಮಾಡುವುದಾಗಿ ಬೆದರಿಕೆ ಹಾಕಿದ್ದಾಗಿ ಆರೋಪಿಸಲಾಗಿದೆ.
ಸದರಿ ಲೈಂಗಿಕ ದೌರ್ಜನ್ಯದ ವಿಡಿಯೋ ಬೇರೆ ಊರಿನಲ್ಲಿ ನೆಲೆಸಿರುವ ಸಂತ್ರಸ್ತೆಯ ಸಹೋದರನ ಮೊಬೈಲ್ ಗೂ ಹರಿದು ಹೋಗಿದೆ. ಕೂಡಲೇ ಸಂತ್ರಸ್ತೆಯ ಸಹೋದರ ತನ್ನ ತಾಯಿಗೆ ವಿಡಿಯೋ ತೋರಿಸಿದಾಗ ಇಡೀ ಘಟನೆ ಬೆಳಕಿಗೆ ಬಂದಿದೆ.
ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಕೃತ್ಯ ಮನೆಯವರಿಗೆ ಗೊತ್ತಾಗುತ್ತಲೇ ಸಂತ್ರಸ್ತೆ ತನ್ನ 6 ವರ್ಷದ ಮಗನೊಂದಿಗೆ ನಾಪತ್ತೆಯಾಗಿದ್ದಾಳೆ ಎಂದು ಸಂತ್ರಸ್ತೆಯ ತಾಯಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ವಿವರಿಸಿದ್ದಾಳೆ.
ಈ ಕುರಿತು ಏ.27 ರಂದೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.