ಕೋವಿಡ್ ವಾರಿಯರ್ಸ್ ಸೇವೆಗೆ ನಡಹಳ್ಳಿ ಮೆಚ್ಚುಗೆ
Team Udayavani, May 2, 2020, 5:20 PM IST
ಹೂವಿನಹಿಪ್ಪರಗಿ: ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರಿಗೆ ಶಾಸಕ ನಡಹಳ್ಳಿ ದಂಪತಿ ಆಹಾರಧಾನ್ಯದ ಕಿಟ್ ವಿತರಿಸಿದರು.
ಹೂವಿನಹಿಪ್ಪರಗಿ: ಕೊರೊನಾ ಸೋಂಕು ತಡೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಸೈನಿಕರಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಹೇಳಿದರು.
ಸ್ಥಳೀಯ ಎಂ.ಜಿ. ಕೋರಿ ಹಾಗೂ ಡಾ| ಬಿ.ಜಿ. ಬ್ಯಾಕೋಡ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಗುರುವಾರ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಿಸಿ ಅವರು ಮಾತನಾಡಿದರು. ಆಶಾ ಕಾರ್ಯಕರ್ತೆಯರ ಸಂಬಳವನ್ನು 8ರಿಂದ 10 ಸಾವಿರಕ್ಕೇರಿಸಬೇಕು. ಜನಪ್ರತಿನಿಧಿಗಳ ಸಂಬಳ, ಭತ್ಯೆ ಕಡಿತಗೊಳಿಸಿ ಕೊರೊನಾ ವಾರಿಯರ್ಸ್ ಗೆ ನೀಡುವಂತೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಮಾಡುವುದುಆಗಿ ಹೇಳಿದರು. ಬೇರೆ ರಾಜ್ಯಗಳಿಗೆ ದುಡಿಯಲು ಹೋಗಿ ಈಗ ಸ್ವಗ್ರಾಮಕ್ಕೆ ಮರಳುತ್ತಿರುವ ಕಾರ್ಮಿಕರ ಆರೋಗ್ಯದತ್ತ ನಿಗಾ ವಹಿಸಬೇಕು. ನಿರ್ಗತಿಕ ಕುಟುಂಬಗಳ ಬಗ್ಗೆ ಮಾಹಿತಿ ನೀಡಿದಲ್ಲಿ ಅವರಿಗೆ ಅಗತ್ಯ ನೆರವು ನೀಡುವುದಾಗಿ ಹೇಳಿದರು.
ಈ ವೇಳೆ ಮಾತನಾಡಿದ ಶಾಸಕರ ಪತ್ನಿ ಮಹಾದೇವಿ ಪಾಟೀಲ, ದೇವರಹಿಪ್ಪರಗಿ ಕ್ಷೇತ್ರದ ಜನತೆ ಎ.ಎಸ್. ಪಾಟೀಲರನ್ನು ಎರಡು ಬಾರಿ ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ ದೇವರಹಿಪ್ಪರಗಿ ಹಾಗೂ ಮುದ್ದೇಬಿಹಾಳ ಎರಡು ಕ್ಷೇತ್ರದ ಜನರ ಹಿತ ಕಾಪಡುವುದು ನಮ್ಮ ಕರ್ತವ್ಯವಾಗಿದೆ ಎಂದರು. ತಾಲೂಕು ವೈದ್ಯಾಧಿಕಾರಿ ಡಾ| ಎಸ್.ಎಸ್. ಓತಗೇರಿ, ಡಾ|ಬಿ.ಎಸ್. ಸಂದಿಮನಿ, ರಾಜಶೇಖರ ಚಿಂಚೋಳಿ, ಡಾ| ಕಲ್ಪನಾ ಬಸವರಾಜ, ಮಾಜಿ ಸೈನಿಕ ರಾಮನಗೌಡ ಬಿರಾದಾರ, ಎಸ್.ಎಸ್. ತಾಳಿಕೋಟಿ, ಸಂಗಮ್ಮ ದೇವರಹಳ್ಳಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.