ಮಾನವೀಯ ಮೌಲ್ಯ ಅಳವಡಿಸಿಕೊಳ್ಳಿ
Team Udayavani, Feb 17, 2019, 7:34 AM IST
ಬೇಲೂರು: ಮನುಷ್ಯ ಮಾನವೀಯ ಮೌಲ್ಯ ಅಳವಡಿಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖ ಮಠದ ಶ್ರೀ ಶಂಭುನಾಥ ಸ್ವಾಮೀಜಿ ತಿಳಿಸಿದರು. ತಾಲೂಕಿನ ಕಿರಗಡಲು ಗ್ರಾಮದಲ್ಲಿ ವೀರ ಹನುಮಾನ್ ದೇವಾಲಯ ಪುನರ್‌ಪ್ರತಿಷ್ಠಾಪನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇವಾಲಯಗಳಿಂದ ನೆಮ್ಮದಿ ದೊರೆಯುತ್ತದೆ ಎಂದರು.
ಗುರುಹಿರಿಯರನ್ನು ಗೌರವಿಸಿ: ತಂದೆ ತಾಯಿಗಳಿಗೆ ಗುರುಹಿರಿಯರಿಗೆ ಮತ್ತು ಮಹಿಳೆಯರಿಗೆ ಗೌರವ ನೀಡುವುದು ಬಹು ಮುಖ್ಯವಾಗಿದ್ದು ದೇವಾಲಯಗಳ ನಿರ್ಮಾಣದಿಂದ ಮನುಷ್ಯನಿಗೆ ನೆಮ್ಮದಿ, ಶಾಂತಿ ಸಿಗಲಿದೆ ಎಂದು ಹೇಳಿದರು. ಶಾಸಕ ಕೆ.ಎಸ್.ಲಿಂಗೇಶ್ ಮಾತನಾಡಿ, ಕಿರಗಡಲು ದೇವಾಲಯಕ್ಕೆ ಶಾಸಕರ ನಿಧಿಯಿಂದ 2 ಲಕ್ಷ ನೀಡಿರುವುದಲ್ಲದೇ ಗ್ರಾಮದ ರಸ್ತೆ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹುಲ್ಲಹಳ್ಳಿ ಸುರೇಶ್ ಮಾತನಾಡಿ ಗ್ರಾಮದ ಪರಿಸರವನ್ನು ಸ್ವತ್ಛವಾಗಿಡಲು ಜನರು ಮುಂದಾಗಬೇಕು ಎಂದರು. ಈ ಸಂದರ್ಭದಲ್ಲಿ ಹೊನ್ನಾಳಿ ಹಿರೇಕಲ್ಮಠ ಶ್ರೀ ಒಡೆಯರ್ ಚನ್ನಮಲ್ಲಿಕಾರ್ಜುನ ಸ್ವಾಮೀಜಿ, ಡಿಸಿಸಿಬ್ಯಾಂಕ್ ನಿರ್ದೇಶಕ ಎಂ.ಎ.ನಾಗರಾಜ್, ಜಿಪಂ ಮಾಜಿ ಸದಸ್ಯರಾದ ಸಿ.ಎಸ್.ಪ್ರಕಾಶ್, ಬಿ.ಡಿ.ಚಂದ್ರೇಗೌಡ, ಶ್ರೀರಾಹನುಮಾನ್ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್(ರಾಜಶೆಟ್ಟಿ) ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.