ಸುಧಾರಣೆ ಕಾಣಲಿ ವಾಸ್ತುಶಿಲ್ಪ ವೈಭವ
Team Udayavani, Aug 8, 2017, 3:28 PM IST
ವಿಜಯಪುರ: ವಿಜಯಪುರದ ವಾಸ್ತುಶಿಲ್ಪದ ವೈಭವವನ್ನು ಜಗತ್ತಿಗೆ ಪರಿಚಯಿಸುವ ಕೆಲಸ ನಡೆಯಬೇಕಿದೆ. ಜೊತೆಗೆ ಇದರಲ್ಲಿ ಇನ್ನೂ ಸುಧಾರಣೆ ಕಾಣಬೇಕಿದೆ ಎಂದು ಪ್ರಾಚ್ಯವಸ್ತು ಇಲಾಖೆ ವಿಶ್ರಾಂತ ನಿರ್ದೇಶಕ ಡಾ| ಎಸ್.ವಿ.ಪಿ. ಹಳಕಟ್ಟಿ ಹೇಳಿದರು.
ನಗರದ ಬಿಎಲ್‌ಡಿಇ ಸಂಸ್ಥೆ ವಚನ ಪಿತಾಮಹ ಡಾ| ಫ.ಗು. ಹಳಕಟ್ಟಿ ತಾಂತ್ರಿಕ ಮಹಾವಿದ್ಯಾಲಯದ ವಾಸ್ತುಶಿಲ್ಪ ವಿಭಾಗದಲ್ಲಿ ಪ್ರಾರಂಭಿಸಲಾದ ಉನ್ನತಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆ ಶ್ರೀಮಂತ ವಾಸ್ತುಶಿಲ್ಪಕ್ಕೆ ವಿಶ್ವದಲ್ಲೇ ಮಾನ್ಯತೆ ಪಡೆದಿದ್ದು, ಜಾಗತಿಕ ವಾಸ್ತು ತಜ್ಞರು ಪಾರಂಪರಿಕ ನಮ್ಮ ನೆಲದ ತಂತ್ರಜ್ಞಾನದ ಕುರಿತು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ ಎಂದು ಬಣ್ಣಿಸಿದರು.
ವಿಜಯಪುರ ಜಿಲ್ಲೆಯ ಗೋಲಗುಮ್ಮಟ, ಇಬ್ರಾಹಿಂ ರೋಜಾ ಸೇರಿದಂತೆ ವಾಸ್ತುಶಿಲ್ಪದ ಹಾಗೂ ಭವ್ಯ ಐತಿಹಾಸಿಕ ಸ್ಮಾರಕಗಳೇ ಇಲ್ಲಿನ ವಾಸ್ತುಶಿಲ್ಪದ ಶ್ರೀಮಂತ ವೈಭವ ಸಾರುತ್ತವೆ. ನಗರೀಕರಣದಿಂದಾಗಿ ಐತಿಹಾಸಿಕ ಪರಂಪರೆ ಬಿಂಬಿಸುವ ಕಟ್ಟಡಗಳು ತಮ್ಮ ವೈಶಿಷ್ಟತೆ ಕಳೆದುಕೊಳ್ಳುತ್ತಿರುವುದು ಖೇದದ ಸಂಗತಿ. ಪಾರಂಪರಿಕ ಸ್ಮಾರಕಗಳು ಮರೆಯಾದರೆ ಐತಿಹಾಸಿಕ ಶ್ರೀಮಂತ ವಾಸ್ತು ಗತವೈಭವಕ್ಕೂ ಕುತ್ತು ಬರಲಿದೆ ಎಂದು ಕಿಡಿ ಕಾರಿದರು. ವಿಶ್ವ ಪರಂಪರೆ ಪಟ್ಟಿಯಲ್ಲಿ ವಿಜಯಪುರದ ಸೇರ್ಪಡೆಗೆ ಸಂಬಂಧಿಸಿದಂತೆ ಸಾಧಕ- ಬಾಧಕಗಳೇನು, ಪೂರ್ವ ತಯಾರಿಗಳೇನು ಎಂಬ ಮಹತ್ವ ಸಂಗತಿಗಳ ಕುರಿತು ಸಮಗ್ರ ಚಿಂತನ-ಮಂಥನ ನಡೆಯಬೇಕಿದೆ. ಇದಕ್ಕಾಗಿ ಸ್ಥಳೀಯ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯಬೇಕಿದೆ ಎಂದರು.
ವಾಸ್ತುಶಿಲ್ಪ ವಿಭಾಗದ ವಿ.ಪಿ. ಟಂಕಸಾಲಿ ಪ್ರಾಸ್ತಾವಿಕ ಮಾತನಾಡಿದರು.ವಿಭಾಗದ ನೂತನವಾಗಿ ಪ್ರಾರಂಭಿಸಲಾಗಿರುವ ಕೇಂದ್ರದ ಕಾರ್ಯಉದ್ದೇಶ,
ವಾಸ್ತುಶಿಲ್ಪಕ್ಕೆ ಸಂಬಂಧಿಸಿದ ವಿಷಯದ ಕುರಿತು ವಿವರಿಸಿದರು. ಕಾರ್ಯಗಾರದಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಸಂಪನ್ಮೂಲ ವ್ಯಕ್ತಿಗಳು ವಿಷಯ ಮಂಡಿಸಿದರು. ವಿಚಾರಗೋಷ್ಠಿ, ಶಿಬಿರಗಳು, ಕಿರು ತರಬೇತಿ ಕಾರ್ಯಾಗಾರಗಳ ಆಯೋಜನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಇದೇ ಸಂದರ್ಭದಲ್ಲಿ ಚರ್ಚೆ ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.