ಪೋಕ್ಸೋ ಅಡಿ 3 ಮಕ್ಕಳ ತಂದೆ ಅರೆಸ್ಟ್: ವಿದ್ಯಾರ್ಥಿನಿಗೆ ಬೆದರಿಸಿ, ಅಪಹರಿಸಿ ಅತ್ಯಾಚಾರ ಆರೋಪ


Team Udayavani, Oct 11, 2021, 1:09 PM IST

ಪೋಕ್ಸೋ ಅಡಿ 3 ಮಕ್ಕಳ ತಂದೆ ಅರೆಸ್ಟ್: ವಿದ್ಯಾರ್ಥಿನಿಗೆ ಬೆದರಿಸಿ, ಅಪಹರಿಸಿ ಅತ್ಯಾಚಾರ ಆರೋಪ

ಮುದ್ದೇಬಿಹಾಳ:  3 ಮಕ್ಕಳ ತಂದೆಯೊಬ್ಬ ತನ್ನ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ನಿತ್ಯ ಶಾಲೆಗೆ ಹೋಗಿ ಬರುತ್ತಿದ್ದ ಹೈಸ್ಕೂಲ್ ವಿದ್ಯಾರ್ಥಿನಿಯೊಂದಿಗೆ ಹೆದರಿಸಿ, ಬೆದರಿಸಿ ಅತ್ಯಾಚಾರ ಮಾಡಿರುವ ಮುದ್ದೇಬಿಹಾಳ ತಾಲೂಕಿನ ಗೋನಾಳ ಎಸ್.ಎಚ್.ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಗೋನಾಳ ಎಸ್ ಹೆಚ್ ಗ್ರಾಮದ ನಿವಾಸಿ ದ್ಯಾಮಣ್ಣ ಗುಳಬಾಳ (30) ಬಂಧಿತ ಆರೋಪಿಯಾಗಿದ್ದು, ಆತನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿ ಪೊಲೀಸರ ವಶದಲ್ಲಿದ್ದಾನೆ.

ಏನಿದು ಘಟನೆ:  ದ್ಯಾಮಣ್ಣ  ಟಾಟಾ ಏಸ್ ವಾಹನ ಓಡಿಸಿಕೊಂಡು ಜೀವನ ನಡೆಸುವಾತ. ಗೋನಾಳ ಗ್ರಾಮದಿಂದ ಮುದ್ದೇಬಿಹಾಳ ಪಟ್ಟಣಕ್ಕೆ ಶಾಲೆ ಕಲಿಯಲು ತನ್ನ ವಾಹನದಲ್ಲೇ ಬರುತ್ತಿದ್ದ ಬಾಲಕಿಯೊಂದಿಗೆ ಸಲುಗೆ ಬೆಳೆಸಿಕೊಂಡು ತನ್ನನ್ನು ಪ್ರೀತಿಸುವಂತೆ ಪೀಡಿಸಿದ್ದಾನೆ.  ಆಕೆ ನಿರಾಕರಿಸಿದಾಗ ಆಕೆಯ ತಂದೆ, ತಾಯಿಯನ್ನು ಕೊಲೆ ಮಾಡುವ ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಬಾಲಕಿ ಬಲವಂತದ ಪ್ರೀತಿಯಲ್ಲಿ ಸಿಲುಕಿದ್ದಳು. ಇದು ಕೊರೊನಾ ಹಿನ್ನೆಲೆ ಶಾಲೆ ಬಂದ್ ಆಗಿದ್ದರೂ  ಎರಡು ವರ್ಷ ಕದ್ದುಮುಚ್ಚಿ ನಡೆದಿತ್ತು. ಮನೆಯವರಿಗೆ ಈ ವಿಷಯ ತಿಳಿದರೆ ತನ್ನನ್ನು ಶಾಲೆ ಬಿಡಿಸುತ್ತಾರೆ ಎಂದು ಹೆದರಿ ಬಾಲಕಿ ವಿಷಯವನ್ನು ಮನೆಯಲ್ಲಿ ತಿಳಿಸಿರಲಿಲ್ಲ.  ಆದರೆ ಸೆ. 7 ರಂದು ಬೆಳಿಗ್ಗೆ ಬಾಲಕಿಯನ್ನು  ದ್ಯಾಮಣ್ಣ ಅಪಹರಿಸಿದ್ದಾನೆ  ಎಂದು ಗೊತ್ತಾಗಿ ಬಾಲಕಿಯ ಪಾಲಕರು ತಾಳಿಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ತನಿಖೆ ನಡೆಸಿದ ಪೊಲೀಸರು ದ್ಯಾಮಣ್ಣ ಮತ್ತು ಬಾಲಕಿಯನ್ನು ಪತ್ತೆ ಮಾಡಿ ಠಾಣೆಗೆ ಕರೆತಂದಾಗಲೇ ಬಲವಂತದ ಪ್ರೀತಿ, ಅತ್ಯಾಚಾರ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು 12 ದಿನಗಳ ಬಳಿಕ ದ್ಯಾಮಣ್ಣ ಹಾಗೂ ಬಾಲಕಿಯನ್ನು ಪತ್ತೆಹಚ್ಚಿ ಕರೆತಂದಿದ್ದಾರೆ. ಆಗ ಧೈರ್ಯ ತಂದುಕೊಂಡ ಬಾಲಕಿ ನಡೆದದ್ದೆಲ್ಲವನ್ನೂ ಪೊಲೀಸರಿಗೆ ತಿಳಿಸಿದ್ದಾಳೆ.

ಈ ಪ್ರಕರಣದಲ್ಲಿ ದ್ಯಾಮಣ್ಣನ ಎಂಟು ಜನ ಬಂಧುಗಳ ವಿರುದ್ದವೂ ಅಪಹರಣದಲ್ಲಿ ಭಾಗಿಯಾದ ಪ್ರಕರಣ ದಾಖಲಾಗಿದೆ. ಬಾಲಕಿಯ ಕುಟುಂಬದವರು ತಮಗೆ ರಕ್ಷಣೆ ನೀಡುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.