ವಿವಾಹಿತೆಗೆ ಮೆಸೇಜ್ ಕಳಿಸಿದ ಯುವಕ: ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ
Team Udayavani, Aug 29, 2021, 3:55 PM IST
ಮುದ್ದೇಬಿಹಾಳ: ತಾಲೂಕಿನ ರಕ್ಕಸಗಿ ಗ್ರಾಮದಲ್ಲಿ ಯುವಕನೊಬ್ಬ ವಿವಾಹಿತೆಗೆ ಮೊಬೈಲಿನಲ್ಲಿ ಮೆಸೇಜ್ ಮಾಡಿದ್ದ ಎನ್ನುವ ಕಾರಣಕ್ಕೆ ಆತನನ್ನು ವಿವಾಹಿತೆಯ ಕಡೆಯವರು ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿ ಪೊಲೀಸರಿಗೊಪ್ಪಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆದರೆ ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಬೇಕಿದ್ದ ಪೊಲೀಸರು ಮಾತ್ರ ಸಂಧಾನದ ನೆಪದಲ್ಲಿ ಪ್ರಕರಣ ದಾಖಲಿಸದೆ ಬಿಟ್ಟು ಕಳಿಸಿದ್ದಾರೆ. ಏತನ್ಮಧ್ಯೆ ಹಲ್ಲೆಗೊಳಗಾದ ಯುವಕ ಅಜ್ಞಾತ ಸ್ಥಳಕ್ಕೆ ತೆರಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳತೊಡಗಿದ್ದಾನೆ. ಯುವಕನನ್ನು ವಶಕ್ಕೆ ಪಡೆದಿದ್ದ ಪೊಲೀಸರು 2 ದಿನ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರವಾಗಿ ಇಟ್ಟುಕೊಂಡು 3ನೇ ದಿನ ಸಂಧಾನ ಆದ ಮೇಲೆ ಬಿಟ್ಟು ಕಳಿಸಿರುವುದಕ್ಕೆ ರಕ್ಕಸಗಿ ಗ್ರಾಮದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಇದನ್ನೂ ಓದಿ:ಬಸವನಬಾಗೇವಾಡಿ: ಹಳ್ಳದಲ್ಲಿ ಕೊಚ್ಚಿಹೋಗಿದ್ದ ಯುವಕ ಶವವಾಗಿ ಪತ್ತೆ
ಯುವಕ ತಪ್ಪು ಮಾಡಿದ್ದರೆ ಆತನ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಶಿಕ್ಷಿಸಬಹುದಾಗಿತ್ತು. ಆದರೆ ಕಂಬಕ್ಕೆ ಕಟ್ಟಿ ಸುತ್ತಿಗೆ, ಬಡಿಗೆ, ಹಾರೆ ಮುಂತಾದ ಮಾರಕಾಸ್ತ್ರಗಳಿಂದ ಮನಸೋ ಇಚ್ಚೇ ಥಳಿಸಿರುವುದು ತಪ್ಪು. ಅಕಸ್ಮಾತ್ ಹೊಡೆಯುವಾಗ ಯುವಕ ಸಾವನ್ನಪ್ಪಿದ್ದರೆ ಯಾರು ಹೊಣೆ? ಹಲ್ಲೆಯ ಘಟನೆಯನ್ನು ಪೊಲೀಸರು ಚಿತ್ರೀಕರಿಸಿಕೊಂಡಿದ್ದರೂ, ಯುವಕ ಮುಖ, ಮೈಮೇಲೆಲ್ಲಾ ತೀವ್ರ ಗಾಯಗಳಾಗಿ, ರಕ್ತ ಸೋರುತ್ತಿದ್ದರೂ ಆತನನ್ನು ಆಸ್ಪತ್ರೆಗೆ ಚಿಕಿತ್ಸೆಗೆ ಕಳಿಸದೆ ಅಕ್ರಮವಾಗಿ ಪೊಲೀಸ್ ಠಾಣೆಯಲ್ಲಿ ಇಟ್ಟುಕೊಂಡಿದ್ದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಹಿನ್ನೆಲೆ ತಪ್ಪಿತಸ್ತ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕು ಎನ್ನುವ ಆಗ್ರಹ ಗ್ರಾಮಸ್ಥರಿಂದ ಕೇಳಿಬರತೊಡಗಿದೆ.
ಇದಕ್ಕೆ ಸಿಪಿಐ, ಪಿಎಸೈ ಅವರು ಪ್ರತಿಕ್ರಿಯಿಸಿದ್ದು ಯಾರೂ ದೂರು ಕೊಡದಿದ್ದರೆ ನಾವೇನು ಮಾಡೋಣ ಎಂದು ಜಾರಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.