ಮಕ್ಕಳ ಹಾಲಿನ ಪುಡಿ ನುಂಗಿದ ಮೂವರು ಸಿಡಿಪಿಒ ಜೈಲು ಪಾಲು
Team Udayavani, Mar 4, 2021, 9:10 PM IST
ವಿಜಯಪುರ: ಸರ್ಕಾರ ಅಂಗನವಾಡಿ ಮಕ್ಕಳಿಗೆ ನೀಡಿದ್ದ ಹಾಲಿನ ಪುಡಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಸಂಗ್ರಹಿಸಿದ್ದ ಪ್ರಕರಣದಲ್ಲಿ ಜಿಲ್ಲೆಯ ಇಬ್ಬರು ಸೇರಿದಂತೆ ಮೂವರು ಸಿಡಿಪಿಒ ಅಧಿಕಾರಿಗಳು ಜೈಲುಪಾಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಅಂಗನವಾಡಿ ಮಕ್ಕಳಿಗೆ ಸರ್ಕಾರ ನೀಡಿದ್ದ ಹಾಲಿನ ಪುಡಿಯನ್ನು ವಿಜಯಪುರ ನಗರ ಹಾಗೂ ಗ್ರಾಮೀಣ ಸಿಡಿಪಿಒಗಳು ಅಕ್ರಮವಾಗಿ ಮಾರಾಟಕ್ಕೆ ಮುಂದಾಗಿದ್ದರು. ಇದಕ್ಕಾಗಿ ಹಾಲಿನ ಪುಡಿಯನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದಾಗ ಸಿಕ್ಕಿ ಬಿದ್ದಿದ್ದರು.
ಸದರಿ ಪ್ರಕರಣ 2020 ಅಕ್ಟೋಬರ್ 21ರಂದು ಖಚಿತ ಮಾಹಿತಿ ಮೇರೆಗೆ ಪೊಲೀಸರ ಸಹಾಯದಿಂದ ದಾಳಿ ನಡೆಸಿದ್ದ ಜಮಖಂಡಿ ಸಿಡಿಪಿಒ ಅನುರಾಧಾ ಹಾದಿಮನಿ, ಅಕ್ರಮವಾಗಿ ಹಾಲಿನ ಪುಡಿಯನ್ನು ಪತ್ತೆ ಹಚ್ಚಿದ್ದರು. ಜಮಖಂಡಿ ನಗರದ ಗೋಪಾಲ ತೇಲಿಎಂಬವರ ಕಟ್ಟಡದಲ್ಲಿ ಗಿರೀಶ ತೇಲಿ ಹಾಗೂ ಮಹಾದೇವ ತೇಲಿ ಎಂಬವರು ಅಕ್ರಮವಾಗಿ ದಾಸ್ತಾನು ಮಾಡಿದ್ದಾಗಿ ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿತ್ತು. ಈ ಕುರಿತು ಜಮಖಂಡಿ ಶಹರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣದಲ್ಲಿ ದೂರು ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಜಮಖಂಡಿಯಲ್ಲಿ ಪತ್ತೆಯಾದ ಅಂಗನವಾಡಿ ಮಕ್ಕಳಿಗೆ ವಿತರಿಸಬೇಕಿದ್ದ ಹಾಲಿನ ಪುಡಿ ವಿಜಯಪುರ ನಗರ ಹಾಗೂ ಗ್ರಾಮೀಣ ವಲಯಕ್ಕೆ ಸೇರಿದ್ದು ಎಂಬುದನ್ನು ಪತ್ತೆ ಮಾಡಿದ್ದಾರೆ. ಅಲ್ಲದೇ ಪ್ರಕರಣದಲ್ಲಿ ಮಕ್ಕಳಿಗೆ ವಿತರಿಸಬೇಕಿದ್ದ ಹಾಲಿನ ಪುಡಿಯನ್ನು ಇಲ್ಲಿನ ವಿಜಯಪುರ ನಗರ ಸಿಡಿಪಿಒ ನಿರ್ಮಲಾ ಸುರಪುರ ಹಾಗೂ ಗ್ರಾಮೀಣ ಸಿಡಿಪಿಒ ಗೀತಾ ಗುತ್ತರಗಿಮಠ ಇಬ್ಬರೂ ಅಕ್ರಮವಾಗಿ ಮಾರಾಟ ಮಾಡಲು ಜಮಖಂಡಿಯಲ್ಲಿ ದಾಸ್ತಾನು ಮಾಡಿದ್ದು ಕೂಡ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ:ಕಲಾಪದಲ್ಲಿ ‘ಒಂದು ದೇಶ- ಒಂದು ಚುನಾವಣೆ ಚರ್ಚೆ’: ಡಿ ಕೆ ಶಿವಕುಮಾರ್ ಆಕ್ರೋಶ
ಹೀಗಾಗಿ ಸದರಿ ಪ್ರಕರಣದಲ್ಲಿ ವಿಜಯಪುರ ಸಿಡಿಪಿಒಗಳಾದ ನಿರ್ಮಲಾ ಸುರಪುರ ಹಾಗೂ ಗೀತಾ ಗುತ್ತರಗಿಮಠ ಹಾಗೂ ಬಾಗಲಕೋಟೆ ಜಿಲ್ಲೆಯ ಬೀಳಗಿ ಸಿಡಿಪಿಒ ಮಹಾದೇವ ಇಸರನಾಳ ಇವರನ್ನು ಫೆ. 19ರಂದು ಬಂಧಿಸಲಾಗಿದೆ ಎಂದು ಜಿಲ್ಲಾ ಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.
ಈ ಮಧ್ಯೆ ಸದರಿ ಹಾಲಿನ ಪುಡಿಯ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಬಂಧಿ ತ ಮೂವರು ಸಿಡಿಪಿಒಗಳನ್ನು ಜಮಖಂಡಿ ಜೆಎಂಎಫ್‌ಸಿ ನ್ಯಾಯಾಲಯದ ಎದುರು ಹಾಜರು ಪಡಿಸಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ. ಪ್ರಕರಣದಲ್ಲಿ ಸಿಕ್ಕ ಹಾಲಿನ ಪುಡಿ ಎಷ್ಟು, ಮೌಲ್ಯವೆಷ್ಟು ಎಂಬುದನ್ನು ತನಿಖಾಧಿ ಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ. ಈ ಬಗ್ಗೆ ಯಾವ ಮಾಹಿತಿ ನನಗಿಲ್ಲ ಎಂದು ಸದರಿ ಪ್ರಕರಣದಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿರುವ ಜಮಖಂಡಿ ಸಿಡಿಪಿಒ ಅನುರಾಧಾ ಉದಯವಾಣಿಗೆ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.