ಕೋವಿಡ್ ವಾರಿಯರ್ಸ್‌ಗಳಿಗೆ ಸನ್ಮಾನ
Team Udayavani, Jun 22, 2020, 5:59 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಇಂಡಿ: ಪ್ರತಿಯೊಂದು ಗ್ರಾಮದಲ್ಲಿ ಜನರಿಗೆ ಕೋವಿಡ್ ಬಗ್ಗೆ ತಿಳಿಹೇಳಲು ಹಗಲು ಇರುಳು ಶ್ರಮಿಸುತ್ತಿರುವ ಕೋವಿಡ್ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆಯರು, ಪೊಲೀಸ್ ಮತ್ತು ಆರೋಗ್ಯ ಇಲಾಖೆಯ ಕಾರ್ಯ ಶ್ಲಾಘನಿಯವಾಗಿದೆ ಎಂದು ಬಸವೇಶ್ವರ ಕೋ-ಆಪ್ ಕ್ರೇಡಿಟ್ ಸೊಸೈಟಿ ಸಂಸ್ಥಾಪಕ ಎಂ.ಆರ್. ಪಾಟೀಲ ಹೇಳಿದರು.
ತಾಲೂಕಿನ ಬಳ್ಳೊಳ್ಳಿ ಗ್ರಾಮದ ವೀರಭದ್ರೇಶ್ವರ ಪ್ರೌಢಶಾಲೆ ಆವರಣದಲ್ಲಿ ನಡೆದ ಬಸವೇಶ್ವರ ಕೋ-ಆಪ್ ಕ್ರೆಡಿಟ್ ಸೊಸೈಟಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಬಳ್ಳೊಳ್ಳಿ ಗ್ರಾಪಂ ಆಶ್ರಯದಲ್ಲಿ ಹಮ್ಮಿಕೊಂಡ ಆಶಾ ಕಾರ್ಯಕರ್ತೆಯರಿಗೆ, ವೈದ್ಯರಿಗೆ ಹಾಗೂ ಪೊಲೀಸ್ ಸಿಬ್ಬಂದಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ಭಾರತ ಹಳ್ಳಿಗಳ ದೇಶ. ನಮ್ಮಲ್ಲಿ ಪೌಷ್ಠಿಕ ಆಹಾರ ಹೆಚ್ಚು ಸೇವಿಸುತ್ತೇವೆ. ಬೇರೆ-ಬೇರೆ ದೇಶಗಳಲ್ಲಿನ ಜನರು ಸುಖಕರ ಜೀವನ ನಡೆಸುತ್ತಾ ಮನೆಯಲ್ಲಿಯೇ ಇರುವುದರಿಂದ ಅಂತಹ ಜನರಿಗೆ ಮಹಾಮಾರಿ ರೋಗ ಹೆಚ್ಚು ಕಂಡು ಬರುತ್ತದೆ. ಆದ್ದರಿಂದ ದೇಶೀಯ ಜನರು ಭಯಪಡದೇ ಕೋವಿಡ್ ವಿರುದ್ಧ ಹೋರಾಡಬೇಕು ಎಂದರು.
ಈ ಸಂದರ್ಭದಲ್ಲಿ ಕಲ್ಲನಗೌಡ ಬಿರಾದಾರ, ಅಣ್ಣಪ್ಪ ಪೂಜಾರಿ, ಎಸ್.ಆರ್. ನಾಯಕ, ಗ್ರಾಪಂ ಅಧ್ಯಕ್ಷೆ ರಾಜೇಶ್ವರಿ ಅವರಾ , ಡಿ.ಎಸ್. ಉಮದಿ, ನಿಥಿನ್ ಸುರಪೂರ, ಬಸವೇಶ್ವರ ಸೊಸೈಟಿ ಅಧ್ಯಕ್ಷ ಶ್ರೀದೇವಿ ಬಿರಾದಾರ, ಅಶೋಕ ತೋಟದಾರ, ಎ.ಡಿ. ಕುಲಕರ್ಣಿ, ಶಿವನಿಂಗ ತುಪ್ಪದ, ಮಲ್ಲನಗೌಡ ಬಿರಾದಾರ, ಪ್ರಕಾಶ ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.