ಪರಿಸರ ಜಾಗೃತಿ ಕಾರ್ಯಕ್ರಮ
Team Udayavani, Jun 27, 2020, 6:00 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಇಂಡಿ: ಪರಿಸರ ಸಂರಕ್ಷಣೆ ಎಲ್ಲರ ಹೊಣೆ. ಗಿಡ-ಮರ ಬೆಳೆಸುವುದರಿಂದ ಸಕಾಲಕ್ಕೆ ಮಳೆ, ಶುದ್ಧ ಗಾಳಿ ಸಿಗುವ ಜತೆಗೆ ಭೂಮಿಯ ಉಷ್ಣತೆ ಸಮತೋಲನವಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಅಧಿಕಾರಿ ಜಗದೀಶ ಬಂಡಾರಿ ಹೇಳಿದರು.
ತಾಲೂಕಿನ ಬಳ್ಳೊಳ್ಳಿ ಗ್ರಾಮದಲ್ಲಿ ಸರ್ವೋದಯ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಲಾ ಆಡಳಿತ ಮಂಡಳಿತ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹೆಚ್ಚಿನ ಉಷ್ಣತೆಯಿಂದ ಪರಿಸರದಲ್ಲಿ ಅಸಮತೋಲನ ಉಂಟಾಗಿ ಪ್ರಾಕೃತಿಕ ವಿಕೋಪಗಳು ಹೆಚ್ಚಾಗುತ್ತವೆ. ಕಲುಷಿತ ವಾತಾವರಣ ಉದ್ಭವವಾಗುತ್ತಿದೆ. ಈ ಎಲ್ಲ ಸಮಸ್ಯೆ ನಿವಾರಣೆಗೆ ಸಸ್ಯ ಪಾಲನೆಯೇ ಮದ್ದು. ಆದ್ದರಿಂದ ಪರಿಸರ ರಕ್ಷಣೆ ಎಲ್ಲರ ಕರ್ತವ್ಯವಾಗಲಿ ಎಂದರು. ಈ ವೇಳೆ ಕೃಷಿ ಮೇಲ್ವಿಚಾರಕ ಗುಂಡೆರಾಯ ಭೂಸನೂರ, ಸಂಸ್ಥೆ ಅಧ್ಯಕ್ಷೆ ಕೌಸರಬೇಗಂ ಮುಲ್ಲಾ, ಈರಣ್ಣ ವಾಲಿ, ಶಿವರಾಯ ತುಪ್ಪದ, ಗ್ರಾಪಂ ಉಪಾಧ್ಯಕ್ಷ ಮಹಾದೇವ ಕದರಿ, ತಮ್ಮಣ್ಣ ವಾಲಿಕಾರ, ಮಾಳಪ್ಪ ಶಿರಶ್ಯಾಡ, ಉಸ್ಮಾನ್ ಪಠಾಣ, ರೇವಪ್ಪ ಶಿರಶ್ಯಾಡ, ರಜಾಕ್ ಮನಿಯಾರ, ಅರ್ಜುನ ನಾಯ್ಕೋಡಿ, ವಲಯ ಮೇಲ್ವಿಚಾರಕ ಜಗದೀಶ ಕಂವಾರ, ಸೇವಾ ಪ್ರತಿನಿಧಿ ರೇಣುಕಾ ಕೋಳಿ, ಕನ್ಯಾಕುಮಾರಿ ಶಿರಶ್ಯಾಡ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.